ನವದೆಹಲಿ: ದ್ರೌಪದಿ ಮುರ್ಮು ಅವರು ಇಂದು 15ನೇ ಭಾರತದ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಮೂಲಕ ಎರಡನೇ ಮಹಿಳಾ ರಾಷ್ಟ್ರಪತಿ ಹಾಗೂ ಬುಡಕಟ್ಟು ಜನಾಂಗದ ಮೊದಲ ರಾಷ್ಟ್ರಪತಿಯಾಗಿ ಆಯ್ಕೆ ಆಗಿದ್ದಾರೆ. ಆದರೆ ಇವರು ಪ್ರಮಾಣವಚನ ಸ್ವೀಕರಿಸಿದ ಈ ದಿನಾಂಕಕ್ಕೂ ಹಾಗೂ ರಾಷ್ಟ್ರಪತಿ ಹುದ್ದೆಗೂ 1977ರಂದಲೂ ಅವಿನಾಭಾವ ನಂಟಿದೆ.
ಹೌದು. ಇದೇ ದಿನಾಂಕ ಅಂದರೆ ಜುಲೈ 25ರಂದು 10 ರಾಷ್ಟ್ರಪತಿಗಳು ಪ್ರಮಾಣವಚನ ಸ್ವೀಕರಿಸಿದ್ದಾರೆ. ಆದರೆ ಕುತೂಹಲಕಾರಿ ವಿಷಯವೆನೆಂದರೆ ರಾಷ್ಟ್ರಪತಿ ಸ್ಥಾನಕ್ಕೆ ಆಯ್ಕೆಯಾಗುವವರು ಇದೇ ದಿನಾಂಕದಂದು ಪ್ರಮಾಣ ವಚನ ಸ್ವೀಕರಿಸಬೇಕೆಂಬ ಯಾವುದೇ ಲಿಖಿತ ನಿಯಮಗಳಿಲ್ಲ. ಇದಕ್ಕೆ ವ್ಯತಿರಿಕ್ತವಾಗಿ 1977ರ ಹಿಂದಿನ ರಾಷ್ಟ್ರಪತಿಗಳಾಗಿದ್ದ ರಾಜೇಂದ್ರ ಪ್ರಸಾದ್, ಸರ್ವಪಲ್ಲಿ ರಾಧಾಕೃಷ್ಣನ್, ಜಾಕೀರ್ ಹುಸೇನ್ ಹಾಗೂ ಫಕ್ರುದ್ದೀನ್ ಅಲಿ ಅಹಮದ್ ಅವರು ಬೇರೆ ಬೇರೆ ದಿನಾಂಕದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದರು.
Advertisement
Advertisement
ದೇಶದಲ್ಲಿ ಮೊದಲ ರಾಷ್ಟ್ರಪತಿಯಾಗಿದ್ದ ರಾಜೇಂದ್ರ ಪ್ರಸಾದ್ ಅವರು 1950ರ ಜನವರಿ 26ರಂದು ಪ್ರಮಾಣವಚನ ಸ್ವೀಕರಿಸಿದ್ದರು. ಸರ್ವಪಲ್ಲಿ ರಾಧಾಕೃಷ್ಣನ್ ಅವರು 1962ರ ಮೇ 13 ರಾಷ್ಟ್ರಪತಿ ಆಗಿ ಅಧಿಕಾರ ಸ್ವೀಕರಿಸಿದ್ದರು. ಅದಾದ ಬಳಿಕ ಜಾಕಿರ್ ಹುಸೇನ್ ಮತ್ತು ಫಕ್ರುದ್ದೀನ್ ಅಲಿ ಅಹ್ಮದ್ ಅವರು ಬೇರೆ ಬೇರೆ ದಿನಾಂಕದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರೂ, ಅಧಿಕಾರಾವಧಿಯನ್ನು ಪೂರ್ಣಗೊಳಿಸಲಿಲ್ಲ. ಇದನ್ನೂ ಓದಿ: ಭಾರತದ ಗಡಿಯನ್ನು ಅಕ್ರಮವಾಗಿ ಪ್ರವೇಶಿದ್ದ ಪೋಲೆಂಡ್ ಪ್ರಜೆ ಅರೆಸ್ಟ್
Advertisement
Advertisement
ಅದಾದ ಬಳಿಕ ಭಾರತದ ಆರನೇ ರಾಷ್ಟ್ರಪತಿ ನೀಲಂ ಸಂಜೀವ ರೆಡ್ಡಿ ಅವರು 1977ರ ಜುಲೈ 25ರಂದು ಪ್ರಮಾಣ ವಚನ ಸ್ವೀಕರಿಸಿದ್ದರು. ಇದಾದ ನಂತರ ಬಂದ ಗಿಯಾನಿ ಜೈಲ್ ಸಿಂಗ್, ಆರ್. ವೆಂಕಟರಾಮನ್, ಶಂಕರ್ ದಯಾಳ್ ಶರ್ಮಾ, ಕೆ.ಆರ್. ನಾರಾಯಣನ್, ಎಪಿಜೆ ಅಬ್ದುಲ್ ಕಲಾಂ, ಪ್ರತಿಭಾ ಪಾಟೀಲ್, ಪ್ರಣಬ್ ಮುಖರ್ಜಿ ಮತ್ತು ರಾಮ್‍ನಾಥ್ ಕೋವಿಂದ್, ದ್ರೌಪದಿ ಮುರ್ಮು ಸೇರಿದಂತೆ ಎಲ್ಲಾ ರಾಷ್ಟ್ರಪತಿಗಳು ಇದೇ ದಿನಾಂಕದಂದೂ ಪ್ರಮಾಣವಚನ ಸ್ವೀಕರಿಸಿರುವುದು ವಿಶೇಷವಾಗಿದೆ. ಇದನ್ನೂ ಓದಿ: ಮಹಿಳಾ ಸಬಲೀಕರಣ ನನ್ನ ಮೊದಲ ಆದ್ಯತೆ – ಅಧಿಕಾರ ಸ್ವೀಕರಿಸಿದ ದ್ರೌಪದಿ ಮುರ್ಮು