ಮೈಸೂರು: ಟಿಪ್ಪು ಜಯಂತಿಯ ವಿರೋಧಿ ಪ್ರತಿಭಟನೆಯಲ್ಲಿ ಸದಾ ಮುಂಚೂಣಿಯಲ್ಲಿರುತ್ತಿದ್ದ ಸಂಸದ ಪ್ರತಾಪ್ ಸಿಂಹ ಈ ಬಾರಿಯ ಜಯಂತಿಯಲ್ಲಿ ಮೌನಕ್ಕೆ ಶರಣಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಹೌದು, ಟಿಪ್ಪು ಜಯಂತಿ ವಿರೋಧಿ ಪ್ರತಿಭಟನೆಯಲ್ಲಿ ಪ್ರತಾಪ್ ಸಿಂಹ ರಾಜ್ಯ ಸರ್ಕಾರದ ವಿರುದ್ಧ ಮೊದಲು ನಿಲ್ಲುತ್ತಿದ್ದರು. ಅಲ್ಲದೇ ಕಳೆದ ಬಾರಿಯ ಟಿಪ್ಪು ಜಯಂತಿಯಲ್ಲಿ ಭಾರೀ ವಿರೋಧ ವ್ಯಕ್ತಪಡಿಸಿ, ಪ್ರತಿಭಟನೆಗಳ ಮುಂದಾಳತ್ವವನ್ನು ವಹಿಸಿಕೊಂಡಿದ್ದರು. ಆದರೆ ಈ ಬಾರಿಯ ಟಿಪ್ಪು ಜಯಂತಿಯಲ್ಲಿನ ಅವರ ನಡೆ ಕೂತುಹಲ ಕೆರಳಿಸಿದೆ.
ಶುಕ್ರವಾರ ಮೈಸೂರು ಹಾಗೂ ಮಡಿಕೇರಿಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಟಿಪ್ಪು ಜಯಂತಿ ವಿರೋಧಿ ಪ್ರತಿಭಟನೆಯಲ್ಲಿ ಪ್ರತಾಪ ಸಿಂಹ ಭಾಗವಹಿಸಿರಲಿಲ್ಲ. ಅಲ್ಲದೇ ಅವರಿಗೆ ಟಿಪ್ಪು ವಿರೋಧಿ ಪ್ರತಿಭಟನೆ ಬೇಡವಾಯ್ತ ಅಥವಾ ಬಿಜೆಪಿ ಸಂಘಟನೆ ವಿಚಾರದಲ್ಲಿ ಮುನಿಸಿಕೊಂಡಿದ್ದಾರಾ? ಇಲ್ಲಾ ಪ್ರತಾಪ ಸಿಂಹಾ ವಿಚಾರದಲ್ಲಿ ರಾಜ್ಯ ಬಿಜೆಪಿ ನಾಯಕರು ಅಸಡ್ಡೆ ತೋರಿಸುತ್ತಿದ್ದಾರಾ ಎನ್ನುವ ಪ್ರಶ್ನೆ ಈಗ ಎದ್ದಿದೆ.
ಚಾಮುಂಡಿ ಬೆಟ್ಟದಲ್ಲಿ ನಡೆದ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಪ್ರತಾಪ್ ಸಿಂಹ, ಮಹಿಷಾ ದಸರಾ ಆಚರಿಸುವುದನ್ನು ತಡೆಯಬೇಕು. ಇಂತಹ ಆಚರಣೆಯಿಂದಾಗಿ ನಮ್ಮ ಭಾವನೆಗಳಿಗೆ ಧಕ್ಕೆ ಉಂಟಾಗುತ್ತಿದೆ. ಇದರ ಜೊತೆಯಲ್ಲಿ ಮೈಸೂರು ರಾಜವಂಶಸ್ಥರಿಗೆ ಕಿರುಕುಳ ನೀಡಿದ ವ್ಯಕ್ತಿಯ ಜಯಂತಿ ಮಾಡುವುದನ್ನು ನಿಲ್ಲಿಸಿ ಎಂದು ಟಿಪ್ಪು ಹೆಸರನ್ನು ಹೇಳದೇ ಟಿಪ್ಪು ಜಯಂತಿಯನ್ನು ರದ್ದು ಮಾಡಿ ಎಂದು ಸಿಎಂಗೆ ಮನವಿ ಮಾಡಿಕೊಂಡಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews