ನವದೆಹಲಿ: ದೆಹಲಿ ಹೈಕೋರ್ಟ್ (Delhi High Court) ನ್ಯಾಯಮೂರ್ತಿ ಯಶವಂತ್ ವರ್ಮಾ (Yashwanth Verma) ಅವರ ನಿವಾಸದಲ್ಲಿ ಕಂತೆ ಕಂತೆ ನೋಟುಗಳು ಪತ್ತೆಯಾಗಿ 1 ತಿಂಗಳಾದರೂ ಯಾಕೆ ಎಫ್‌ಐಆರ್ ಆಗಿಲ್ಲ ಎಂದು ಸುಪ್ರೀಂಕೋರ್ಟ್ ನೇಮಿಸಿದ ಮೂವರು ನ್ಯಾಯಾಧೀಶರ ಸಮಿತಿಯನ್ನು ಉಪರಾಷ್ಟ್ರಪತಿ ಜಗದೀಪ್ ಧನಕರ್ (Vice President Jagdeep Dhankhar) ಪ್ರಶ್ನಿಸಿದರು.
ಕಳೆದ ತಿಂಗಳು ಮಾರ್ಚ್ 14ರಂದು ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಬಂಗಲೆಯಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಈ ವೇಳೆ ಅವರ ನಿವಾಸದಲ್ಲಿ ಅರ್ಧ ಸುಟ್ಟ ಕಂತೆ ಕಂತೆ ನೋಟುಗಳು ಪತ್ತೆಯಾಗಿತ್ತು. ಈ ಘಟನೆಯ ಕುರಿತು ಸುಪ್ರೀಂಕೋರ್ಟ್ ಆಂತರಿಕ ತನಿಖೆಗೆ ಆದೇಶಿಸಿ, ನ್ಯಾ. ಯಶವಂತ್ ವರ್ಮಾ ಅವರನ್ನು ದೆಹಲಿ ಹೈಕೋರ್ಟ್ನಿಂದ ಅಲಹಾಬಾದ್ ಹೈಕೋರ್ಟ್ಗೆ ವರ್ಗಾಯಿಸಿದ್ದರು. ಇದನ್ನೂ ಓದಿ: ಜಡ್ಜ್ ಮನೆಯಲ್ಲಿ ಕಂತೆ ಕಂತೆ ನೋಟು – ಸಿಜೆಐ ಅನುಮತಿ ನೀಡದ ಹೊರತು ಎಫ್‌ಐಆರ್ ದಾಖಲಾಗಲ್ಲ: ಅಮಿತ್ ಶಾ
ಈ ಪ್ರಕರಣವನ್ನು ಉಲ್ಲೇಖಿಸಿ ಮಾತನಾಡಿದ ಧನಕರ್, ಈ ಘಟನೆ ಯಾವುದಾದರೂ ಸಾಮಾನ್ಯ ವ್ಯಕ್ತಿಯ ಮನೆಯಲ್ಲಿ ನಡೆದಿದ್ದರೆ ಆಗ ತನಿಖೆಯು ರಾಕೆಟ್ ವೇಗದಲ್ಲಿ ಆಗುತ್ತಿತ್ತು. ಆದರೂ ಇದು ಈಗ ಎತ್ತಿನಗಾಡಿಯ ರೀತಿಯಲ್ಲೂ ನಡೆಯುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ರಾಷ್ಟ್ರಪತಿಗಳಿಗೆ ನಿರ್ದೇಶನ ನೀಡಲು ಸಾಧ್ಯವಿಲ್ಲ,ಕೋರ್ಟ್‌ಗಳು ಸೂಪರ್ ಪಾರ್ಲಿಮೆಂಟ್ ಆಗಬಾರದು: ಧನಕರ್ ಅಸಮಾಧಾನ
ಪ್ರತಿಯೊಂದು ಅಪರಾಧವನ್ನು ಪೊಲೀಸರಿಗೆ ವರದಿ ಮಾಡಬೇಕು. ಅಪರಾಧವನ್ನು ವರದಿ ಮಾಡದಿರುವುದು ಅಪರಾಧ ಎಂಬುದು ದೇಶದ ಕಾನೂನು. ಇದು ಕಾನೂನಿಗೆ ಮೀರಿದ ವರ್ಗವೇ? ಅಥವಾ ವಿಚಾರಣೆಯಿಂದ ಯಾವುದಾದರೂ ವಿಶೇಷ ವಿನಾಯಿತಿ ಪಡೆದಿದೆಯೇ ಎಂದು ಗುಡುಗಿದರು. ಇದನ್ನೂ ಓದಿ: ದೆಹಲಿ ಹೈಕೋರ್ಟ್ ಜಡ್ಜ್ ಮನೆಗೆ ಬೆಂಕಿ – ನಂದಿಸಲು ಹೋದಾಗ ಸಿಕ್ಕಿದ್ದು ಕಂತೆ ಕಂತೆ ನೋಟು
ಈ ಘಟನೆಯ ಕುರಿತು ಎಫ್‌ಐಆರ್ (FIR) ಆಗದ ಕಾರಣ ಕಾನೂನಿನ ವ್ಯಾಪ್ತಿಯಲ್ಲಿ ಯಾವುದೇ ತನಿಖೆ ನಡೆಸಲಾಗುತ್ತಿಲ್ಲ. ಈ ಪ್ರಕರಣದ ತನಿಖೆಗೆ ಸುಪ್ರೀಂಕೋರ್ಟ್ (SupremeCourt) ಮೂವರು ನ್ಯಾಯಾಧೀಶರನ್ನೊಳಗೊಂಡ ಸಮಿತಿಯನ್ನು ರಚಿಸಿತ್ತು. ಈ ತನಿಖೆಯು ಕಾರ್ಯಾಂಗದ ಕ್ಷೇತ್ರವಾಗಿದೆ, ನ್ಯಾಯಾಂಗದ್ದಲ್ಲ. ಕಾನೂನು ಮತ್ತು ಸಂವಿಧಾನದ ಯಾವುದೇ ನಿಬಂಧನೆಯ ಅಡಿಯಲ್ಲಿ ಸಮಿತಿಯನ್ನು ಸ್ಥಾಪಿಸಲಾಗಿಲ್ಲ ಎಂದು ಹೇಳಿದರು.
ನ್ಯಾಯಮೂರ್ತಿಗಳ ವಿಚಾರದಲ್ಲಿ ಅಂತಿಮವಾಗಿ ಕ್ರಮಕೈಗೊಳ್ಳುವ ಅಧಿಕಾರವಿರುವುದು ಸಂಸತ್ತಿಗೆ ಮಾತ್ರ. ಈ ಸಮಿತಿಯ ವರದಿಗೆ ಕಾನೂನಿನ ಮಾನ್ಯತೆ ಇಲ್ಲ ಎಂದು ತಿಳಿಸಿದರು.