Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು, ರಾಹುಲ್‌ ಒಟ್ಟಿಗೆ ಸ್ಪರ್ಧಿಸಿದ್ದರೆ ಬಿಜೆಪಿಗೆ ಲಾಭವಾಗ್ತಿತ್ತು – ಲೋಕಸಭೆಗೆ ಸ್ಪರ್ಧಿಸದಿರಲು ಕಾರಣ ತಿಳಿಸಿದ ಪ್ರಿಯಾಂಕಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Election News | ನಾನು, ರಾಹುಲ್‌ ಒಟ್ಟಿಗೆ ಸ್ಪರ್ಧಿಸಿದ್ದರೆ ಬಿಜೆಪಿಗೆ ಲಾಭವಾಗ್ತಿತ್ತು – ಲೋಕಸಭೆಗೆ ಸ್ಪರ್ಧಿಸದಿರಲು ಕಾರಣ ತಿಳಿಸಿದ ಪ್ರಿಯಾಂಕಾ

Election News

ನಾನು, ರಾಹುಲ್‌ ಒಟ್ಟಿಗೆ ಸ್ಪರ್ಧಿಸಿದ್ದರೆ ಬಿಜೆಪಿಗೆ ಲಾಭವಾಗ್ತಿತ್ತು – ಲೋಕಸಭೆಗೆ ಸ್ಪರ್ಧಿಸದಿರಲು ಕಾರಣ ತಿಳಿಸಿದ ಪ್ರಿಯಾಂಕಾ

Public TV
Last updated: May 18, 2024 4:22 pm
Public TV
Share
2 Min Read
Rahul Gandhi priyanka vadra
SHARE

ನವದೆಹಲಿ: ದೇಶಾದ್ಯಂತ ಕಾಂಗ್ರೆಸ್‌ ಪಕ್ಷದ (Congress Party) ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ (Priyanka Gandhi) ಹೇಳಿದ್ದಾರೆ.

ಖಾಸಗಿ ಸಂದರ್ಶನದಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಅದು ಬಿಜೆಪಿಗೆ (BJP) ಲಾಭವಾಗುತ್ತಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: 2009: ಮತ್ತೆ ಯುಪಿಎ ‘ಕೈ’ ಹಿಡಿದ ಜನ – ಇನ್ನಷ್ಟು ಕುಸಿದ ಬಿಜೆಪಿ

rahul gandhi wayanad

ಕಳೆದ 15 ದಿನಗಳಿಂದ ನಾನು ರಾಯ್‌ ಬರೇಲಿಯಲ್ಲಿ ಪ್ರಚಾರ ಮಾಡುತ್ತಿದ್ದೇನೆ. ಗಾಂಧಿ ಕುಟುಂಬಕ್ಕೂ ರಾಯ್‌ ಬರೇಲಿಗೂ (Rae Bareli) ಹಳೆಯ ಸಂಬಂಧವಿದೆ. ಹಾಗಾಗಿ, ನಾವು ಇಲ್ಲಿಗೆ ಬಂದು ಅವರನ್ನು ಭೇಟಿ ಮಾಡಿ ಅವರೊಂದಿಗೆ ಸಂವಹನ ನಡೆಸುತ್ತೇವೆ ಎಂದು ಜನರು ನಿರೀಕ್ಷಿಸುತ್ತಾರೆ. ನಾವು ರಿಮೋಟ್ ಕಂಟ್ರೋಲ್ ಮೂಲಕ ಇಲ್ಲಿ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಇದನ್ನೂ ಓದಿ: 1999: ಮತ್ತೆ ಪ್ರಧಾನಿಯಾದ ‘ಅಜಾತಶತ್ರು’ – 5 ವರ್ಷ ಪೂರ್ಣ ಆಡಳಿತ ನಡೆಸಿದ ಮೊದಲ ಬಿಜೆಪಿ ನಾಯಕ

ಸೋನಿಯಾ ಗಾಂಧಿ ರಾಜ್ಯಸಭೆಗೆ ಆಯ್ಕೆಯಾದ ಬಳಿಕ ರಾಯ್ ಬರೇಲಿಯಿಂದ ಪ್ರಿಯಾಂಕಾ ಗಾಂಧಿ ಮತ್ತು ಅಮೇಥಿಯಿಂದ ರಾಹುಲ್ ಗಾಂಧಿ ಸ್ಪರ್ಧಿಸಬಹುದು ಎಂಬ ಮಾತುಗಳು ಕೇಳಿಬಂದಿತ್ತು. ಸಾಕಷ್ಟು ಕಸರತ್ತಿನ ಬಳಿಕ ಕೊನೇ ಕ್ಷಣದಲ್ಲಿ ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಮತ್ತು ಅಮೇಥಿಯಿಂದ ಕಿಶೋರಿ ಲಾಲ್ ಶರ್ಮಾ (Kishori Lal Sharma) ಅವರನ್ನ ಹೈಕಮಾಂಡ್‌ ಕಣಕ್ಕಿಳಿಸಿದೆ. ಈ ನಡುವೆ ಪ್ರಿಯಾಂಕಾ ಸ್ಪರ್ಧೆಯಿಂದ ಹಿಂದೆ ಸರಿದ ಬಗ್ಗೆ ಸಾಕಷ್ಟು ಚರ್ಚೆ ಹುಟ್ಟಿಕೊಂಡಿತ್ತು. ಇದನ್ನೂ ಓದಿ: ಮನೆಯಲ್ಲೇ ಮತದಾನ ಮಾಡಿದ ಅನ್ಸಾರಿ, ಮನಮೋಹನ್‌ ಸಿಂಗ್‌, ಜೋಶಿ

Kishori Lal Sharma

ಅಮೇಥಿಯಲ್ಲಿ ಸ್ಪರ್ಧಿಸಿರೋ ಗಾಂಧಿ ಕುಟುಂಬಯೇತರ ಅಭ್ಯರ್ಥಿ ಯಾರು?
ಅಮೇಥಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಕಿಶೋರಿ ಲಾಲ್ ಶರ್ಮಾ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಕಣಕ್ಕಿಳಿಸಿದ್ದು, ಅವರು ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಸೆಣಸಲಿದ್ದಾರೆ. ಗಾಂಧಿ ಕುಟುಂಬದ ಭದ್ರ ಕೋಟೆ ಎನಿಸಿಕೊಂಡಿದ್ದ ಕ್ಷೇತ್ರದಲ್ಲಿ ಕಿಶೋರಿ ಲಾಲ್ ಶರ್ಮಾ ಅವರಿಗೆ ಟಿಕೆಟ್ ನೀಡಿರುವುದು ಅಚ್ಚರಿ ಬೆಳವಣಿಯಾಗಿದೆ. ಇದನ್ನೂ ಓದಿ: ಕೇಜ್ರಿವಾಲ್‌ಗೆ ʼವಿಶೇಷ ಸೌಲಭ್ಯʼ ನೀಡಲಾಗಿದೆ ಅಂತ ಜನ ಮಾತನಾಡ್ತಿದ್ದಾರೆ: ಜಾಮೀನು ಬಗ್ಗೆ ಅಮಿತ್‌ ಶಾ ಮಾತು

ಕಳೆದ 4 ದಶಕಗಳಿಂದ ಗಾಂಧಿ ಕುಟುಂಬದ ಜೊತೆಗೆ ನಂಟು ಹೊಂದಿರುವ ಕಿಶೋರಿ ಲಾಲ್ ಶರ್ಮಾ, ಮೂಲತಃ ಪಂಜಾಬ್‍ನ ಲೂಧಿಯಾನದವರು. 1983ರಲ್ಲಿ ರಾಜೀವ್ ಗಾಂಧಿಯವರೊಂದಿಗೆ ರಾಯ್‌ ಬರೇಲಿ ಮತ್ತು ಅಮೇಥಿ ಪ್ರವೇಶಿಸಿದ ಅವರು, ಈಗಲೂ ಕ್ಷೇತ್ರದ ನಿರಂತರ ಸಂಪರ್ಕದಲ್ಲಿದ್ದಾರೆ. ಮೇ 1991ರಲ್ಲಿ ರಾಜೀವ್ ಗಾಂಧಿಯವರ ಮರಣದ ನಂತರ, ಗಾಂಧಿ ಕುಟುಂಬದೊಂದಿಗಿನ ಅವರ ಒಡನಾಟ ಇನ್ನೂ ಹೆಚ್ಚಾಯಿತು. ಸೋನಿಯಾ ಗಾಂಧಿ ಅವರು ರಾಜಕೀಯಕ್ಕೆ ಪ್ರವೇಶಿಸಿ ಮೊದಲ ಬಾರಿಗೆ ಕ್ಷೇತ್ರಕ್ಕೆ ಭೇಟಿ ನೀಡಿದಾಗ ಕಿಶೋರಿ ಲಾಲ್ ಶರ್ಮಾ ಅವರ ಜೊತೆಗಿದ್ದರು. ಸೋನಿಯಾ ಗಾಂಧಿಯವರು ಅಮೇಥಿ ಕ್ಷೇತ್ರವನ್ನು ರಾಹುಲ್ ಗಾಂಧಿಗೆ ಬಿಟ್ಟುಕೊಟ್ಟು ರಾಯ್‍ಬರೇಲಿಯಲ್ಲಿ ಸ್ಪರ್ಧಿಸಿದ ಬಳಿಕ ಎರಡು ಕ್ಷೇತ್ರಗಳ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು. ಕ್ಷೇತ್ರದಲ್ಲಿ ಹಿಡಿತ ಹೊಂದಿರುವ ಹಿನ್ನಲೆ ಅವರಿಗೆ ಟಿಕೆಟ್ ನೀಡಲಾಗಿದೆ.

TAGGED:congresskishori lal sharmaLok Sabha elections 2024priyanka gandhiRahul Gandhiಕಿಶೋರಿ ಲಾಲ್ ಶರ್ಮಾಪ್ರಿಯಾಂಕಾ ಗಾಂಧಿರಾಯ್‌ ಬರೇಲಿರಾಹುಲ್ ಗಾಂಧಿಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

daily horoscope dina bhavishya
Astrology

ದಿನ ಭವಿಷ್ಯ 29-04-2026

Public TV
By Public TV
10 seconds ago
soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
8 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
8 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
8 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
9 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?