ದುಬೈ: ಬಾಂಗ್ಲಾದೇಶದ (Bangladesh) ಆಲ್‌ರೌಂಡರ್ ಶಕೀಬ್ ಅಲ್ ಹಸನ್ (Shakib Al Hasan) ಬೌಲಿಂಗ್‌ಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ICC) ನಿಷೇಧ ಹೇರಿದೆ.
ಬೌಲಿಂಗ್ ವೇಳೆ ಮೊಣಕೈಯನ್ನು 15 ಡಿಗ್ರಿಗಳಿಗಿಂತ ಹೆಚ್ಚು ವಿಸ್ತರಿಸಿದ ಹಿನ್ನೆಲೆಯಲ್ಲಿ ಶಕೀಬ್ ಬೌಲಿಂಗ್‌ಗೆ ನಿಷೇಧ ಹೇರಲಾಗಿದೆ. ಇದು ಐಸಿಸಿಯ ದೇಶೀಯ ಮತ್ತು ವಿದೇಶದಲ್ಲಿ ನಡೆಯಲಿರುವ ಪಂದ್ಯಗಳಿಗೆ ಅನ್ವಯವಾಗಲಿದೆ.
ಡಿಸೆಂಬರ್‌ನಲ್ಲಿ ಇಂಗ್ಲೆಂಡಿನ ಲೌಬರೋ ವಿಶ್ವವಿದ್ಯಾನಿಲಯದಲ್ಲಿ ದಿನನಿತ್ಯದ ಮೌಲ್ಯಮಾಪನದ ನಂತರ, ಬೌಲಿಂಗ್ ಮಾಡುವಾಗ ಶಕೀಬ್ ಮೊಣಕೈಯನ್ನು 15 ಡಿಗ್ರಿಗಳಿಗಿಂತ ಹೆಚ್ಚು ವಿಸ್ತರಿಸಿರುವುದು ಕಂಡುಬಂದಿದೆ. ಐಸಿಸಿ ನಿಯಮದ ಪ್ರಕಾರ ಬೌಲಿಂಗ್ ವೇಳೆ ಮೊಣಕೈ ವಿಸ್ತರಣೆಯು 15 ಡಿಗ್ರಿ ಮಿತಿಯನ್ನು ಮೀರುವಂತಿಲ್ಲ.ಯಾವುದೇ ಬೌಲರ್‌ನ ಮೊಣಕೈ ಈ ಮಿತಿಯನ್ನು ಮೀರಿ ವಿಸ್ತರಿಸಿದರೆ ಕಾನೂನುಬಾಹಿರ ಬೌಲಿಂಗ್ ಎಂದು ಪರಿಗಣಿಸಲಾಗುತ್ತದೆ. ಇದನ್ನೂ ಓದಿ: ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ಶಕೀಬ್ ಬ್ಯಾನ್ ಮಾಡಿ – ಬಾಂಗ್ಲಾ ಕ್ರಿಕೆಟ್ ಮಂಡಳಿಗೆ ನೋಟಿಸ್
ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ECB) ಸ್ವತಂತ್ರವಾಗಿ ಮೌಲ್ಯಮಾಪನ ನಡೆಸಿ ಶಕೀಬ್ ಅವರ ಬೌಲಿಂಗ್ ಐಸಿಸಿ ಮಾನದಂಡಗಳಿಗೆ ಅನುಗುಣವಾಗಿಲ್ಲ ಎಂದು ಖಚಿತಪಡಿಸಿದೆ. ವರದಿ ಬಂದ ಬೆನ್ನಲ್ಲೇ ಅಂತಾರಾಷ್ಟ್ರೀಯ ಮತ್ತು ದೇಶೀಯ ಪಂದ್ಯಗಳನ್ನು ಒಳಗೊಂಡಿರುವ ತನ್ನ ಅಧಿಕಾರ ವ್ಯಾಪ್ತಿಯಲ್ಲಿರುವ ಎಲ್ಲಾ ಟೂರ್ನಿಗಳಲ್ಲಿ ಬೌಲಿಂಗ್‌ನಿಂದ ಅವರನ್ನು ಅಮಾನತುಗೊಳಿಸುವುದಾಗಿ ಇಸಿಬಿ ಘೋಷಿಸಿತು.
ಬಾಂಗ್ಲಾದೇಶದ ಹೊರಗೆ ಐಸಿಸಿ-ಅನುಮೋದಿತ ದೇಶೀಯ ಮತ್ತು ಅಂತರಾಷ್ಟ್ರೀಯ ಸ್ಪರ್ಧೆಗಳಲ್ಲಿ ಬೌಲಿಂಗ್‌ನಿಂದ ಶಕೀಬ್ ಅವರನ್ನು ಅಮಾನತುಗೊಳಿಸಲಾಗುವುದು ಎಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (BCB) ದೃಢಪಡಿಸಿದೆ. ಇದನ್ನೂ ಓದಿ: ಸಿಂಗ್ ಬದಲು ಪ್ರಣಬ್‌ರನ್ನು ಪ್ರಧಾನಿ ಮಾಡುತ್ತಿದ್ದರೆ ಯುಪಿಎ-3 ಅಧಿಕಾರಕ್ಕೆ ಬರುತ್ತಿತ್ತು: ಮಣಿಶಂಕರ್ ಅಯ್ಯರ್
37 ವರ್ಷದ ಶಕೀಬ್ ಈಗ ನಿವೃತ್ತಿಯ ಅಂಚಿನಲ್ಲಿದ್ದಾರೆ. ಎಡಗೈ ಬ್ಯಾಟ್ಸ್‌ಮ್ಯಾನ್ ಮತ್ತು ಎಡಗೈ ಬೌಲರ್ ಆಗಿರುವ ಬಾಂಗ್ಲಾ ಪರವಾಗಿ 71 ಟೆಸ್ಟ್, 247 ಏಕದಿನ, 129 ಟಿ20 ಪಂದ್ಯವಾಡಿದ್ದಾರೆ.