ನವದೆಹಲಿ: ಕೆಪಿಸಿಸಿ ಅಧ್ಯಕ್ಷ (KPCC President) ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.
ನವದೆಹಲಿಯಲ್ಲಿ ಖರ್ಗೆ ನಿವಾಸಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ನೀಡಲ್ಲ. ಇದೆಲ್ಲ ಸುಳ್ಳು. ಕಾಂಗ್ರೆಸ್ ಪಕ್ಷ ನನ್ನ ತಾಯಿ ಇದ್ದಂತೆ. ನಾನು ಯಾವುದೇ ಬೇಡಿಕೆ ಇಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಸಚಿನ್ ಪೈಲೆಟ್‌ಗೆ ರಾಹುಲ್ ಆರಂಭದಲ್ಲಿ ಮಾತು ಕೊಟ್ಟಿದ್ದರು, ನಂತರ ಏನಾಯ್ತು? – ವೇಣುಗೋಪಾಲ್‌ಗೆ ಉಲ್ಟಾ ಹೊಡೆದ ಡಿಕೆಶಿ
Advertisement
ವಿಧಾನಸಭಾ ಚುನಾವಣೆ (Assembly Election 2023) ಯಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಿ 3-4 ದಿನ ಕಳೆದರೂ ಇನ್ನೂ ಸಿಎಂ ಯಾರೆಂಬುದು ಕಗ್ಗಂಟಾಗಿ ಉಳಿದಿದೆ. ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ (Siddaramaiah) ನಡುವೆ ಸಿಎಂ ಕುರ್ಚಿಗೆ ಭಾರೀ ಫೈಟ್ ನಡೆಯುತ್ತಿದ್ದು, ಇದೀಗ ಹೈಕಮಾಂಡ್ ಅಂಗಳ ತಲುಪಿದೆ. ಇಬ್ಬರು ನಾಯಕರೂ ಕೂಡ ದೆಹಲಿ ತಲುಪಿದ್ದು, ಇಂದು ಸಂಜೆಯೇ ಸಿಎಂ ಯಾರೆಂದು ಅನೌನ್ಸ್ ಮಾಡ್ತಾರಾ ಎಂಬುದನ್ನು ಕಾದು ನೋಡಬೇಕಿದೆ.