ಅಮರಾವತಿ: ಕೆಲ ದಿನಗಳ ಹಿಂದೆಯಷ್ಟೇ ಸಿಕ್ಸರ್ ವೀರನಾಗಿ ಟಿ20 ಪಂದ್ಯಗಳಲ್ಲಿ ಹಲವು ದಾಖಲೆಗಳನ್ನ ಉಡೀಸ್ ಮಾಡಿದ್ದ ಟೀಂ ಇಂಡಿಯಾ (Team India) ಸ್ಫೋಟಕ ಬ್ಯಾಟ್ಸ್‌ಮ್ಯಾನ್ ಸೂರ್ಯಕುಮಾರ್ ಯಾದವ್ (Suryakumar Yadav) ಇದೀಗ ಆಸ್ಟ್ರೇಲಿಯಾ (Australia) ವಿರುದ್ಧದ ಏಕದಿನ ಸರಣಿಯಲ್ಲಿ ಕಳಪೆ ಪ್ರದರ್ಶನದಿಂದ ಟೀಕೆಗಳಿಗೆ ಗುರಿಯಾಗಿದ್ದಾರೆ.
#SuryakumarYadav was dismissed for a golden duck for two consecutive innings ????
Starc Lbw Surya- 0(1) in 1st ODI.
Starc Lbw Surya – 0(1) in 2nd ODI.#INDvsAUS #Vizag #RohitSharma pic.twitter.com/3oDQmUNHXk
— Pravin Patil (@BooksAndCricket) March 19, 2023
Advertisement
ಏಕದಿನ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿಯೂ ಮಿಚೆಲ್ ಸ್ಟಾರ್ಕ್ ಅವರ ಮೊದಲ ಎಸೆತದಲ್ಲೇ ಔಟಾಗಿದ್ದಾರೆ. 2ನೇ ಪಂದ್ಯದಲ್ಲೂ ಶೂನ್ಯಕ್ಕೆ ನಿರ್ಗಮಿಸಿದ ಬಳಿಕ ಅಭಿಮಾನಿಗಳು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೇ ಏಕದಿನ ಮಾದರಿಯಲ್ಲಿ ಅತ್ಯುತ್ತಮ ಫಾರ್ಮ್‌ನಲ್ಲಿರುವ ಸಂಜು ಸ್ಯಾಮ್ಸನ್‌ರನ್ನ ಕಡೆಗಣಿಸಿ ಸೂರ್ಯಕುಮಾರ್ ಯಾದವ್‌ಗೆ ಮಣೆ ಹಾಕಿರುವುದಕ್ಕೆ ಬಿಸಿಸಿಐ (BCCI) ವಿರುದ್ಧ ಅಭಿಮಾನಿಗಳು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಭಾರತ ಕಳಪೆ ಬೌಲಿಂಗ್, ಬ್ಯಾಟಿಂಗ್ – ಆಸ್ಟ್ರೇಲಿಯಾಗೆ 10 ವಿಕೆಟ್‌ಗಳ ಭರ್ಜರಿ ಜಯ
Advertisement
Advertisement
ಜನವರಿಯಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಮೊಣಕಾಲಿನ ಗಾಯಕ್ಕೆ ತುತ್ತಾಗಿದ್ದ ಸಂಜು ಸ್ಯಾಮ್ಸನ್ (Sanju Samson) ಸದ್ಯ 100 ಪ್ರತಿಶತ ಫಿಟ್ ಆಗಿದ್ದಾರೆ. ಆದರೂ ಅವರು ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಸ್ಥಾನ ಪಡೆಯುವಲ್ಲಿ ವಿಫಲವಾಗಿದ್ದಾರೆ. ಸೂರ್ಯಕುಮಾರ್ ಯಾದವ್ ಟಿ20 ಮಾದರಿಯಲ್ಲಿ ಭಾರತ ತಂಡದ ಮ್ಯಾಚ್ ವಿನ್ನಿಂಗ್ ಪ್ಲೇಯರ್. ತಮ್ಮ ಸ್ಫೋಟಕ ಇನ್ನಿಂಗ್ಸ್ ಮೂಲಕ ಹಲವು ಪಂದ್ಯಗಳನ್ನು ಗೆಲ್ಲಿಸಿದ್ದಾರೆ. ಅದಕ್ಕೆ ಅವರು ಟಿ20 ಯಲ್ಲಿ ಐಸಿಸಿ ರ್‍ಯಾಂಕಿಂಗ್‌ನಲ್ಲಿ ನಂಬರ್ 1 ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದನ್ನೂ ಓದಿ: IPL 2023: ಈ ಬಾರಿ ಸಿಎಸ್‌ಕೆ ಕಪ್ ಗೆಲ್ಲಲ್ಲ, ಆರ್‌ಸಿಬಿ ಗೆದ್ದರೆ ಖುಷಿ – ಭಾರತದ ಮಾಜಿ ಕ್ರಿಕೆಟಿಗ ಭವಿಷ್ಯ
Advertisement
ದೀರ್ಘ ಸ್ವರೂಪದಲ್ಲಿ ಸೂರ್ಯ ರನ್ ಗಳಿಸುವಲ್ಲಿ ವಿಫಲರಾಗಿದ್ದಾರೆ. ಕಳೆದ 10 ಏಕದಿನ ಪಂದ್ಯಗಳಲ್ಲಿ 34 ರನ್ ಅವರ ಗರಿಷ್ಠ ಸ್ಕೋರ್ ಆಗಿದೆ. ಕಳೆದ 10 ಇನ್ನಿಂಗ್ಸ್‌ಗಳಲ್ಲಿ ಕ್ರಮವಾಗಿ 9, 8, 4, 34, 6, 4, 31, 14, 0, 0, ರನ್ ಗಳಿಸಿದ್ದಾರೆ. ಏಕದಿನ ಮತ್ತು ಟೆಸ್ಟ್ ಮಾದರಿಯಲ್ಲಿ ಸೂರ್ಯಕುಮಾರ್ ಯಾದವ್‌ರನ್ನು ಕೈಬಿಟ್ಟು ಟಿ20 ಮಾದರಿಯಲ್ಲಿ ಮಾತ್ರ ತಂಡದಲ್ಲಿ ಉಳಿಸಿಕೊಳ್ಳಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಹಿಟ್‌ಮ್ಯಾನ್ ಬೆಂಬಲ:
ಅಭಿಮಾನಿಗಳ ಟೀಕೆಯ ನಡುವೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma), ಸೂರ್ಯಕುಮಾರ್ ಬೆಂಬಲಕ್ಕೆ ನಿಂತಿದ್ದಾರೆ. ಸೂರ್ಯಕುಮಾರ್ ಯಾದವ್ ಇನ್ನಷ್ಟು ಏಕದಿನ ಪಂದ್ಯಗಳನ್ನಾಡುವ ಮೂಲಕ ಅವರು ಫಾರ್ಮ್‌ಗೆ ಮರಳಲಿದ್ದಾರೆ. ಕಳೆದ ಎರಡು ಪಂದ್ಯಗಳಲ್ಲಿ ಅವರು ಶೂನ್ಯಕ್ಕೆ ಔಟಾಗಿದ್ದಾರೆ. ಮುಂದಿನ ಇನ್ನಿಂಗ್ಸ್‌ಗಳಲ್ಲಿ ಫಾರ್ಮ್‌ಗೆ ಮರಳುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.