ಅತೀ ನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ ‘ಸಲಾರ್’ (Salaar) ದ ಟೀಸರ್ ರಿಲೀಸ್ ದಿನಾಂಕ ಮತ್ತು ವೇಳೆ ಫಿಕ್ಸ್ ಆಗಿದೆ. ಪ್ರಭಾಸ್ ನಾಯಕರಾಗಿ ನಟಿಸಿರುವ ಈ ಚಿತ್ರದ ಟೀಸರ್ (Teaser) ಜುಲೈ 6 ರಂದು ಬಿಡುಗಡೆಯಾಗುತ್ತಿದೆ. ಅಂದು ಬೆಳಗ್ಗೆ 5.12ಕ್ಕೆ ಸಮಯ ನಿಗದಿಯಾಗಿದ್ದು, ಅಷ್ಟು ಬೆಳಗ್ಗೆ ರಿಲೀಸ್ ಏಕೆ ಎಂಬ ಪ್ರಶ್ನೆಯನ್ನು ಪ್ರಭಾಸ್ (Prabhas) ಅಭಿಮಾನಿಗಳು ಮಾಡುತ್ತಿದ್ದಾರೆ.
ಟೀಸರ್ ಸೋಷಿಯಲ್ ಮೀಟಿಯಾದಲ್ಲಿ ಟ್ರೆಂಡಿಂಗ್ ಆಗಲು ಸಾಮಾನ್ಯವಾಗಿ ಸಾಯಂಕಾಲದ ಸಮಯವನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಅಥವಾ ಬೆಳಗ್ಗೆ ಹತ್ತು ಗಂಟೆಯ ನಂತರ ಫಿಕ್ಸ್ ಮಾಡುತ್ತಾರೆ. ಆದರೆ, ಸಲಾರ್ ಟೀಮ್ ಕೋಳಿ ಕೂಗುವ ಮುನ್ನ ವೇಳೆ ಆಯ್ಕೆ ಮಾಡಿಕೊಂಡಿದೆ. ಇದಕ್ಕೆ ಕಾರಣ ಏನು ಎನ್ನುವುದನ್ನು ಅದು ತಿಳಿಸಿಲ್ಲ. ಹಾಗಾಗಿ ಪ್ರಭಾಸ್ ಅಭಿಮಾನಿಗಳು ವೇಳೆಯ ಕುರಿತಾಗಿ ಪ್ರಶ್ನೆ ಮಾಡಿದ್ದಾರೆ.
ಸಲಾರ್ ಚಿತ್ರ ಸೆಪ್ಟೆಂಬರ್ 28ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರ ಹೇಗೆ ಮೂಡಿಬಂದಿರಬಹುದು ಎಂದು ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದು, ಆ ಎಲ್ಲಾ ಕುತೂಹಲಗಳಿಗೆ ಜುಲೈ 6ರ ಗುರುವಾರ ತೆರೆಬೀಳಲಿದೆ. ಇದನ್ನೂ ಓದಿ:18 ವಯಸ್ಸಿಗೆ ನಾಯಕಿಯಾಗಿ ಬಾಲಿವುಡ್ಗೆ ಎಂಟ್ರಿ ಕೊಡ್ತಿದ್ದಾರೆ ರವೀನಾ ಟಂಡನ್ ಪುತ್ರಿ
ಕಳೆದ ವರ್ಷ ಭಾರತೀಯ ಚಿತ್ರರಂಗಕ್ಕೆ ‘ಕೆಜಿಎಫ್ 2’ ಮತ್ತು ‘ಕಾಂತಾರ’ ಎಂಬ ಎರಡು ಬ್ಲಾಕ್ಬಸ್ಟರ್ ಚಿತ್ರಗಳನ್ನು ನೀಡಿದಂತಹ ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲಂಸ್ (Hombale Films), ‘ಸಲಾರ್’ ಚಿತ್ರವನ್ನು ನಿರ್ಮಿಸಿದೆ. ಕೆಜಿಎಫ್ ನಂತರ ಪ್ರಶಾಂತ್ ನೀಲ್ (Prashant Neel) ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ.
ಕಳೆದ ಎರಡು ವರ್ಷಗಳಿಂದ ಚಿತ್ರತಂಡದವರು ಚಿತ್ರೀಕರಣ ಮಾಡುತ್ತಿದ್ದರೂ, ಚಿತ್ರದ ಬಗ್ಗೆ ಸಣ್ಣ ಸುಳಿವನ್ನೂ ಬಿಟ್ಟುಕೊಟ್ಟಿಲ್ಲ. ಹಾಗಾಗಿ, ಚಿತ್ರದ ಬಗ್ಗೆ ಕುತೂಹಲ ಮತ್ತು ನಿರೀಕ್ಷೆ ಇನ್ನಷ್ಟು ಹೆಚ್ಚಾಗಿದೆ. ‘ಸಲಾರ್’ ಚಿತ್ರದಲ್ಲಿ ಪ್ರಭಾಸ್ ಅವರಿಗೆ ನಾಯಕಿಯಾಗಿ ಶ್ರುತಿ ಹಾಸನ್ ನಟಿಸಿದ್ದು, ಪೃಥ್ವಿರಾಜ್ ಸುಕುಮಾರನ್, ಜಗಪತಿ ಬಾಬು, ಪ್ರಮೋದ್ ಮುಂತಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಕನ್ನಡದ ಭುವನ್ ಗೌಡ ಅವರ ಛಾಯಾಗ್ರಹಣ ಮತ್ತು ರವಿ ಬಸ್ರೂರು ಅವರ ಸಂಗೀತವಿದೆ.
Web Stories