– ರಾಯಚೂರು-ಬೆಳಗಾವಿ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ
ಬಾಗಲಕೋಟೆ: ಶಕ್ತಿ ಯೋಜನೆಯ(Shakti Scheme) ಜಾರಿಗೆ ಬಂದ ನಂತರ ನಿರ್ವಾಹಕರು ನಮಗೆ ಅಗೌರವ ತೋರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಮಹಿಳಾ(Women) ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳು ರಾಯಚೂರು-ಬೆಳಗಾವಿ ರಾಜ್ಯ ಹೆದ್ದಾರಿ (State Highway) ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ.
ಮನೆಯಲ್ಲಿ ಕೆಲಸ ಮಾಡುವುದು ಬಿಟ್ಟು ಉಚಿತ ಪ್ರಯಾಣಕ್ಕಾಗಿ ಬಸ್‌ನಲ್ಲಿ ಏಕೆ ಓಡಾಡುತ್ತೀರಿ? ಎಂದು ಹೇಳುವ ಮೂಲಕ ನಿರ್ವಾಹಕರು ನಮ್ಮನ್ನು ನಿಂದಿಸುತ್ತಿದ್ದಾರೆ ಎಂದು ಆರೋಪಿಸಿದ ಮಹಿಳೆಯರು ರಸ್ತೆ ಹೆದ್ದಾರಿಯನ್ನು ಬಂದ್ ಮಾಡಿ ಆಕ್ರೋಶ ಹೊರಹಾಕಿದರು.
ಈ ಸಂದರ್ಭದಲ್ಲಿ ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ಬಸ್ ನಿಲ್ಲಿಸದೇ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಬೇಜವಾಬ್ದಾರಿ ತೋರುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿದರು.

ಸಿಗಿಕೇರಿ ಗ್ರಾಮದ ಬಳಿ ಕೆಎಸ್‌ಆರ್‌ಟಿಸಿ ಬಸ್ಸುಗಳನ್ನು ತಡೆದು, ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ರಾಯಚೂರು-ಬೆಳಗಾವಿ ರಾಜ್ಯ ಹೆದ್ದಾರಿಯನ್ನು ಬಂದ್ ಮಾಡಲಾಯಿತು. ಇದನ್ನೂ ಓದಿ: ಕೆಪಿಎಸ್‌ಸಿ ಹಗರಣದ ವಿರುದ್ಧ ದೂರು ಕೊಟ್ಟ ಅಭ್ಯರ್ಥಿಗೆ ಅನಾಮಿಕನಿಂದ ಬೆದರಿಕೆ
ಪ್ರತಿಭಟನೆಯಿಂದಾಗಿ ರಾಜ್ಯ ಹೆದ್ದಾರಿಯಲ್ಲಿ ಕಿಲೋಮೀಟರ್‌ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದರುಂದ ಪ್ರಯಾಣಿಕರು ಕೆಲ ಹೊತ್ತು ಪರದಾಡಿದರು.
