ಮಕರ ಸಂಕ್ರಾಂತಿಗೆ ಗಾಳಿಪಟ ಹಾರಿಸೋದೇಕೆ? ವಿಶೇಷತೆ ಏನು?

Public TV
2 Min Read

ಭೂಮಿ ಮೇಲೆ ನಡೆಯುವ ಎಲ್ಲಾ ಚಟುವಟಿಕೆಗಳಿಗೂ ಸೂರ್ಯನೇ ಆಧಾರ. ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸೂರ್ಯನು ಪ್ರವೇಶಿಸುವ ಕಾಲಕ್ಕೆ ಸಂಕ್ರಾಂತಿ ಅಥವಾ ಸಂಕ್ರಮಣ ಎಂದು ಕರೆಯಲಾಗುತ್ತದೆ. ಈ ಸಂಕ್ರಾಂತಿ ಸಂಭ್ರಮದ ದಿನ ಗಾಳಿಪಟ ಹಾರಿಸುವುದು ಒಂದು ಸಂಪ್ರದಾಯವಾಗಿದೆ. ಆದರೆ ಸಂಕ್ರಾಂತಿ ಹಬ್ಬದಂದು ಗಾಳಿಪಟ ಯಾಕೆ ಹಾರಿಸುತ್ತಾರೆ ಎನ್ನುವ ಬಗ್ಗೆ ಹಲವರಿಗೆ ಗೊತ್ತಿರಲ್ಲ. ಸಂಕ್ರಾಂತಿಯಂದು ಗಾಳಿಪಟ ಯಾಕೆ ಹಾರಿಸುತ್ತಾರೆ? ಏನಿದರ ವಿಶೇಷತೆ ಎನ್ನುವ ಬಗ್ಗೆ ಮಾಹಿತಿ ಇಲ್ಲಿದೆ.

040819kpn55

ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು ನಂಬಿದ್ದಾರೆ.

sankranti a

ಮೊದಲು ದಕ್ಷಿಣದತ್ತ ವಾಲಿ ಚಲಿಸುತ್ತಿದ್ದ ಸೂರ್ಯ, ಸಂಕ್ರಮಣ ದಿನದಿಂದ ಉತ್ತರ ದಿಕ್ಕಿಗೆ ತಿರುಗಿ ಚಲಿಸುತ್ತಾನೆ. ಆಯನ ಎಂದರೆ ಚಲಿಸುವುದು, ಆದರಿಂದ ಉತ್ತರಾಯಣ, ದಕ್ಷಿಣಾಯನ ಎಂದು ಹೆಸರು ಸೃಷ್ಟಿಯಾಗಿದ್ದು. ಹೀಗೆ ಸೂರ್ಯ ಪಥ ಬದಲಾಗುವುದರಿಂದ ನಮ್ಮ ದೇಶದಲ್ಲಿ ಈ ಸಮಯಕ್ಕೆ ಚಳಿ ಕಡಿಮೆಯಾಗಿ ಹಗಲು ಹೆಚ್ಚು ಸಂಭವಿಸುತ್ತದೆ.

ಗಾಳಿಪಟವನ್ನು ಏಕೆ ಹಾರಿಸುತ್ತಾರೆ?
ಸಂಕ್ರಾಂತಿಯ ಹಬ್ಬದ ದಿನ ವರ್ಣ ರಂಜಿತ ಗಾಳಿಪಟಗಳನ್ನು ಆಗಸದಲ್ಲಿ ಹಾರಿಸಿ ಜನರು ಖುಷಿಪಡುತ್ತಾರೆ. ಈ ಸಂಭ್ರಮ ಉತ್ತರಾಯಣದಾದ್ಯಂತ ಮುಂದುವರಿಯುತ್ತದೆ. ಸಂಕ್ರಾಂತಿ ಒಂದೆಡೆ ಸುಗ್ಗಿಯ ಋತುವಿನ ಆಗಮನವನ್ನು ಸೂಚಿಸುವ ಹಬ್ಬವಾದರೆ, ಇನ್ನೊಂದೆಡೆ ಚಳಿಗಾಲದ ಅಂತ್ಯವನ್ನು ಸಾಂಕೇತಿಕವಾಗಿ ತೋರುವ ದಿನ ಎನ್ನಲಾಗುತ್ತೆ.

unnamed

ಚಳಿಗಾಲದಲ್ಲಿ ಸಾಕಷ್ಟು ಸೂಕ್ಷ್ಮಾಣುಗಳು ಉತ್ಪತ್ತಿಯಾಗುವ ಕಾರಣಕ್ಕೆ ಮನುಷ್ಯ ಅನಾರೋಗ್ಯಕ್ಕೆ ತುತ್ತಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಆದ್ದರಿಂದ ಮಕರ ಸಂಕ್ರಾಂತಿಯ ಸಮಯದಲ್ಲಿ ಮುಂಜಾನೆ ಸೂರ್ಯನ ಕಿರಣಗಳು ದೇಹದ ಮೇಲೆ ಬೀಳುವುದರಿಂದ ಬ್ಯಾಕ್ಟೀರಿಯಾಗಳು ನೈಸರ್ಗಿಕವಾಗಿ ನಾಶವಾಗುತ್ತವೆ. ಜೊತೆಗೆ ದೇಹಕ್ಕೆ ವಿಟಮಿನ್ ಡಿ ದೊರಕುತ್ತದೆ. ಇದು ಚರ್ಮದ ಸಮಸ್ಯೆ ನಿವಾರಣೆಗೆ ಉತ್ತಮ ಪರಿಣಾಮ ಬೀರುತ್ತದೆ. ಈ ಕಾರಣಕ್ಕೆ ಸಂಕ್ರಾಂತಿಯ ದಿನ ಹಾಗೂ ಉತ್ತರಾಯಣ ಋತುವಿನ ಕಾಲದಲ್ಲಿ ಹೆಚ್ಚಾಗಿ ಗಾಳಿಪಟವನ್ನು ಹಾರಿಸಲಾಗುತ್ತದೆ.

2017 07 10 29626 1499661948. large

ಇನ್ನೊಂದು ನಂಬಿಕೆಯ ಪ್ರಕಾರ, ಸಂಕ್ರಾಂತಿ ಮತ್ತು ಉತ್ತರಾಯಣದ ಸಂದರ್ಭದಲ್ಲಿ ಗಾಳಿಪಟ ಹಾರಿಸಿದರೆ ಅವುಗಳು ಸ್ವರ್ಗಕ್ಕೆ ಹಾರಿಹೋಗುತ್ತವೆ ಎನ್ನುವ ನಂಬಿಕೆಯಿದೆ. ಉತ್ತಮ ಪೈರು ಹಾಗೂ ಜೀವನದಲ್ಲಿ ಖುಷಿ ನೀಡಿದ್ದಕ್ಕೆ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಸಂಕ್ರಾಂತಿಯಂದು ಗಾಳಿಪಟವನ್ನು ಹಾರಿಸುತ್ತಾರೆ ಎನ್ನುವ ಮಾತಿದೆ. ಅಲ್ಲದೆ ಉತ್ತರಾಯಣದ ಸಮಯದಲ್ಲಿ ನೀಲಿ ಬಾನಂಗಳ ಗಾಳಿಪಟ ಹಾರಿಸಲು ಸಜ್ಜಾದಂತೆ ಇರುತ್ತದೆ. ಅದು ಗಾಳಿಪಟಗಳನ್ನು ಹಾರಿಸಲು ಸೂಕ್ತ ಸಮಯವಾಗಿರುತ್ತದೆ. ಜೊತೆಗೆ ಬಾನಂಗಳದಲ್ಲಿ ಗಾಳಿಪಟದ ಬಣ್ಣದ ಚಿತ್ತಾರದ ಸುಂದರ ನೋಟ ಕಣ್ಣಿಗೆ ಆನಂದ ನೀಡುತ್ತದೆ. ಆದ್ದರಿಂದ ಗಾಳಿಪಟ ಹಾರಿಸಲಾಗುತ್ತದೆ ಎನ್ನಲಾಗುತ್ತೆ.

5c3f092dacbc5 International Kite Festival Place to visit

ಭಾರತದ ಬಹುತೇಕ ಭಾಗಗಳಲ್ಲಿ ಸಂಕ್ರಾಂತಿಯನ್ನು ಆಚರಿಸಲಾಗುತ್ತದೆ. ಸಾಂಪ್ರದಾಯಿಕ ಹಿನ್ನೆಲೆಯಲ್ಲಿ ಗಾಳಿಪಟ ಹಾರಿಸುವ ಪ್ರತೀತಿ ಕೂಡ ಭಾರತದಲ್ಲಿದೆ. ಈ ಸಂಪ್ರದಾಯ ಹಾಗೂ ರೂಢಿಯನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ. ಹೀಗಾಗೆ ಹಲವೆಡೆ ಗಾಳಿಪಟ ಸ್ಪರ್ಧೆಯನ್ನು ಕೂಡ ಆಯೋಜಿಸಲಾಗುತ್ತದೆ. ಅದರಲ್ಲೂ ಗುಜರಾತ್‍ನಲ್ಲಿ ಗಾಳಿಪಟ ಹಾರಿಸುವ ದೊಡ್ಡ ಸ್ಪರ್ಧೆಯೇ ನಡೆಯುತ್ತದೆ. ಈ ಸ್ಪರ್ಧೆಯಲ್ಲಿ ಹಲವು ರಾಜ್ಯಗಳ ಜನರು ಭಾಗವಹಿಸುತ್ತಾರೆ. ಈ ಸುಂದರ ಸ್ಪರ್ಧೆಯನ್ನು ಕಣ್ತುಂಬಿಕೊಳ್ಳಲು ಕೇವಲ ದೇಶವಾಸಿಗಳಷ್ಟೇ ಅಲ್ಲದೆ ವಿದೇಶದಿಂದಲೂ ಪ್ರವಾಸಿಗರು ಬರುತ್ತಾರೆ.

Photo credit Ocean Shores Kites

Share This Article
Leave a Comment

Leave a Reply

Your email address will not be published. Required fields are marked *