ಪುಣೆ: ವಿಧವೆ ಮೇಲೆ ಅತ್ಯಾಚಾರ ಮಾಡಿದ್ದ ಎಂಟು ಮಂದಿ ಆರೋಪಿಗಳ ಪೈಕಿ 5 ಮಂದಿಯನ್ನು ಬಂಧನ ಮಾಡಲಾಗಿದೆ ಪೊಲೀಸರು ತಿಳಿಸಿದ್ದಾರೆ.
ಶಿರೂರಿನಲ್ಲಿ ವಿಧವೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆ ಗ್ರಾಮಾಂತರ ಪೊಲೀಸರು ಐವರನ್ನು ಬಂಧಿಸಿದ್ದು, ಮೂರು ಮಂದಿ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಬಂಧಿತರು ಮೌಲಿ ಪವಾರ್, ಕಾಲು ವಾಲುಂಜ್, ವಿಠ್ಠಲ್ ಕಾಳೆ, ರಜಾಕ್ ಪಠಾಣ್, ಪಪ್ಪು ಗಾಯಕ್ವಾಡ್, ಆಕಾಶ್ ಗಾಯಕ್ವಾಡ್, ನವನಾಥ್ ವಾಲುಂಜ್ ಮತ್ತು ಸಂದೀಪ್ ವಾಲುಂಜ್ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 323, 376 (2), 376 (ಡಿ) ಮತ್ತು 506ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇನ್ಸ್‌ಪೆಕ್ಟರ್ ಸುರೇಶಕುಮಾರ್ ರಾವುತ್, ಸಂತ್ರಸ್ತೆ ವಿಧವೆಯಾಗಿದ್ದಾಳೆ. ಅವಳ ಪರಿಸ್ಥಿತಿಯ ದುರುಪಯೋಗಪಡಿಸಿಕೊಂಡು ಕೆಲವರು ಮೇ 2021ರಲ್ಲಿ ಆಕೆಯ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ದೂರು ನೀಡಲು ಬಯಸಿದ್ದರು. ಆದರೆ ಆಕೆಗೆ ಈ ಕುರಿತಾಗಿ ಸರಿಯಾದ ತಿಳಿವಳಿಕೆ ಇರಲಿಲ್ಲ. ಯಾರ ಸಹಾಯವೂ ಇಲ್ಲದ ಕಾರಣ ಆಕೆ ಯಾವುದೇ ದೂರು ನೀಡಲು ಮುಂದೆ ಬಂದಿರಲಿಲ್ಲ. ಆರೋಪಿಗಳು ಮಹಿಳೆಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ. ಬಲವಂತವಾಗಿ ದೈಹಿಕ ಸಂಪರ್ಕ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗೋವಾ ಚುನಾವಣೆ- ಜಗದೀಶ್ ಶೆಟ್ಟರ್ ಪ್ರಚಾರ, ಮತಯಾಚನೆ
ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎನ್ನುವ ಮಾಹಿತಿ ನಮಗೆ ಸಿಕ್ಕಿತು. ಸಂತ್ರಸ್ತೆಯನ್ನು ಭೇಟಿ ಮಾಡಲು ನಿರ್ಭಯಾ ಘಟಕದ ತಂಡವನ್ನು ಕಳುಹಿಸಿ ತನಿಖೆ ಮಾಡಿದ್ದೇವೆ. ಇದುವರೆಗೆ ಐದು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ನ್ಯಾಯಾಧೀಶರು ಅವರನ್ನು ಏಳು ದಿನಗಳ ಕಾಲ ಪೊಲೀಸ್‍ಗೆ ವಹಿಸಿದ್ದಾರೆ. ಇನ್ನೂ ಮೂವರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದೇವೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಇನ್ಸ್‌ಪೆಕ್ಟರ್ ಮಾಹಿತಿ ನೀಡಿದ್ದಾರೆ.