ಕಲಬುರಗಿ: ಹಾಡಹಗಲೇ ಕತ್ತು ಕೊಯ್ದು ಪತ್ನಿಯನ್ನು ಬರ್ಬರವಾಗಿ ಪತಿ ಹತ್ಯೆ ಮಾಡಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಅಫಜಲಪುರ (Afzalpur) ತಾಲೂಕಿನ ಬಳೂರಗಿ ಗ್ರಾಮದ ಬಳಿ ನಡೆದಿದೆ.
ಮಹಾರಾಷ್ಟ್ರ ಮೂಲದ ಶೈಲಾ (28) ಕೊಲೆಯಾದ ಮಹಿಳೆ. ಆರೋಪಿ ಪತಿಯನ್ನು ಅಕ್ಷಯ್ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ 3 ಯುದ್ಧ ವಿಮಾನಗಳ ಹಾರಾಟ – ಆತಂಕಕ್ಕೊಳಗಾದ ಜನ
ಆರೋಪಿ ಪತಿ ಎರ್ಟಿಗಾ ಕಾರಿನಲ್ಲಿ ಪತ್ನಿಯನ್ನ ಕರೆದುಕೊಂಡು ಬಂದು, ಬಳೂರಗಿ ಗ್ರಾಮದ ಬಳಿ ನಿಲ್ಲಿಸಿದ್ದಾನೆ. ಬಳಿಕ ಪತ್ನಿಯನ್ನು ಕಾರಿನಿಂದ ಬಲವಂತವಾಗಿ ಕೆಳಗಿಳಿಸಿ, ನಡುರಸ್ತೆಯಲ್ಲೇ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಅಷ್ಟೇ ಅಲ್ಲದೇ ಶವದ ಮೇಲೆ ಕಾರು ಹಾಯಿಸಿ ವಿಕೃತಿ ಮೆರೆದಿದ್ದಾನೆ.
ಕೊಲೆಯ ದೃಶ್ಯ ಸ್ಥಳೀಯರೊಬ್ಬರ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಎದೆ ಝಲ್ ಎನ್ನಿಸುವಂತಿದೆ. ಈ ಸಂಬಂಧ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪತಿಯನ್ನ ವಶಕ್ಕೆ ಪಡೆದಿದ್ದಾರೆ.ಇದನ್ನೂ ಓದಿ: Andhra Pradesh | ಟಿಪ್ಪರ್‌ಗೆ ಬಸ್ ಡಿಕ್ಕಿ – 12 ಮಂದಿ ಸಜೀವ ದಹನ; ಸುಟ್ಟು ಬೂದಿಯಾದ ಬಸ್

