ಹಾವೇರಿ: ಪತಿಗೆ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ ಹೊಂದಿದ್ದಕ್ಕೆ ಬೇಸತ್ತು ಮಹಿಳೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ರಾಣೇಬೆನ್ನೂರು ನಗರದ ಇಸ್ಲಾಂಪುರ ಓಣಿಯಲ್ಲಿ ನಡೆದಿದೆ.
ಸೀಮಾ ಭಾನು ಕಂಬಳಿ (25) ಆತ್ಮಹತ್ಯೆಗೆ ಶರಣಾದ ಮಹಿಳೆ. ಪತಿ ಅಬ್ರಾರ ಕಂಬಳಿ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ ಹೊಂದಿದ್ದ. ಅಲ್ಲದೇ ಪತಿ ಹಾಗೂ ಆತನ ಕುಟುಂಬಸ್ಥರು ವರದಕ್ಷಿಣಿಗಾಗಿ ಮಹಿಳೆಗೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಕಿರುಕುಳ ತಾಳದೆ ಸೀಮಾ 10 ದಿನದ ಹಿಂದೆ ವಿಷ ಸೇವಿಸಿದ್ದಳು. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಇಂದು (ಜು.10) ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಮಗು ಬೇಡವೆಂದು 8 ತಿಂಗಳ ಗರ್ಭಿಣಿ ಪತ್ನಿಯ ಕುತ್ತಿಗೆ ಬಿಗಿದು ಕೊಲೆಗೆ ಯತ್ನ; ಪತಿ ಅಂದರ್
ಕಳೆದ ಮೂರು ವರ್ಷಗಳ ಹಿಂದೆ ಅದ್ದೂರಿಯಾಗಿ ಸೀಮಾ ಭಾನು ಕಂಬಳಿಯನ್ನು ಅಬ್ರಾರನಿಗೆ ಮದುವೆ ಮಾಡಿಕೊಡಲಾಗಿತ್ತು. ಆಗಿಂದಲೂ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.
ಈ ಸಂಬಂಧ 6 ಜನರ ವಿರುದ್ಧ ರಾಣೇಬೆನ್ನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಬಂಧಿಸುವಂತೆ ಮಹಿಳೆಯ ಪೋಷಕರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಅಂಗಡಿ ದೋಚಿ ಮಾಲೀಕರಿಗೆ ವಿದ್ಯುತ್ ಶಾಕ್ ಹೊಡೆಸುವ ವಿಚಿತ್ರ ಕಳ್ಳ!
