ಚಾಮರಾಜನಗರ: ಕುಡಿದು ಬಂದು ಪ್ರತಿನಿತ್ಯ ಜಗಳವಾಡುತ್ತಿದ್ದ ಪತಿಯಿಂದಾಗಿ ಪತ್ನಿ ನೇಣಿಗೆ ಕೊರಳೊಡ್ಡಿದ ಘಟನೆಯೊಂದು ಚಾಮರಾಜನಗರದಲ್ಲಿ (Chamarajanagar) ನಡೆದಿದೆ.
ರೂಪಾ (32) ಆತ್ಮಹತ್ಯೆಗೆ ಶರಣಾದಾಕೆ. ಈ ಘಟನೆ ಗುಂಡ್ಲುಪೇಟೆ ತಾಲೂಕಿನ ಬೆಳಚಲವಾಡಿ ಗ್ರಾಮದಲ್ಲಿ ನಡೆದಿದೆ. ರೂಪಾ 6 ವರ್ಷದ ಹಿಂದೆ ಮಂಜುನಾಥ್ ನನ್ನು ವಿವಾಹವಾಗಿದ್ದರು. ಆದರೆ ಕೌಟುಂಬಿಕ ಕಲಹದಿಂದಾಗಿ ನೇಣು ಬಿಗಿದುಕೊಂಡು ರೂಪಾ ಸಾವಿನ ದಾರಿ ಹಿಡಿದಿದ್ದಾರೆ. ಇದನ್ನೂ ಓದಿ: ಉತ್ತರಾಖಂಡದಲ್ಲಿ 250 ರೂ. ತಲುಪಿದ ಟೊಮೆಟೋ ದರ- ಗ್ರಾಹಕರು ಕಂಗಾಲು
ಮಂಜುನಾಥ್ ಪ್ರತಿನಿತ್ಯ ಕುಡಿದು ಬಂದು ರೂಪಾ ಜೊತೆ ಕ್ಲುಲ್ಲಕ ವಿಚಾರಕ್ಕೆ ಜಗಳ ಮಾಡುತ್ತಿದ್ದನು. ಸಾಕಷ್ಟು ಬಾರಿ ಇದನ್ನು ಸಹಿಸಿಕೊಂಡಿದ್ದ ರೂಪಾ ಇದೀಗ ತನ್ನ ತಾಳ್ಮೆ ಕಳೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಘಟನೆ ಸಂಬಂಧ ಪೊಲೀಸರು ಪತಿ ಮಂಜುನಾಥ್‍ನನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ತೆರಕಣಾಂಬಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]