ಲಕ್ನೋ: ತನ್ನ ಹೆಂಡತಿ ದಿನವೂ ಸ್ನಾನ ಮಾಡುವುದಿಲ್ಲ. ಸ್ವಚ್ಛತೆಯ ಬಗ್ಗೆ ಜ್ಞಾನವಿಲ್ಲದ ಆಕೆಯೊಂದಿಗೆ ಸಂಸಾರ ನಡೆಸಲು ಸಾಧ್ಯವಿಲ್ಲ ಎಂದು ತ್ರಿವಳಿ ತಲಾಖ್ ನೀಡಿರುವ ಘಟನೆ ಉತ್ತರ ಪ್ರದೇಶದ ಅಲಿಘಡದಲ್ಲಿ ಈ ಘಟನೆ ನಡೆದಿದೆ.
Advertisement
ಮುಸ್ಲಿಂ ಸಮುದಾಯದ ವ್ಯಕ್ತಿಯೋರ್ವ ತನ್ನ ಹೆಂಡತಿ ದಿನವೂ ಸ್ನಾನ ಮಾಡುವುದಿಲ್ಲ. ಸ್ವಚ್ಛತೆಯ ಬಗ್ಗೆ ಜ್ಞಾನವಿಲ್ಲದ ಆಕೆಯೊಂದಿಗೆ ಸಂಸಾರ ನಡೆಸಲು ಸಾಧ್ಯವಿಲ್ಲ ಎಂದು ತ್ರಿವಳಿ ತಲಾಖ್ ನೀಡಿದ್ದಾರೆ. ತ್ರಿವಳಿ ತಲಾಖ್‍ಗೆ ನಿಷೇಧವಿದ್ದರೂ ನನಗೆ ತಲಾಖ್ ನೀಡಿದ್ದಾರೆ ಎಂದು ಆನ ಹೆಂಡತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರಿಂದ ಈ ಘಟನೆ ಬೆಳಕಿಗೆ ಬಂದಿದೆ. ಆ ಗಂಡ-ಹೆಂಡತಿ ಇಬ್ಬರಿಗೂ ಕೌನ್ಸಿಲಿಂಗ್ ನಡೆಸಲಾಗುತ್ತಿದೆ.
Advertisement
Advertisement
ದಿನವೂ ಸ್ನಾನ ಮಾಡುತ್ತಿಲ್ಲ ಎಂಬ ನೆಪವೊಡ್ಡಿ ಗಂಡ ತಲಾಖ್ ನೀಡಿರುವುದಾಗಿ ಮಹಿಳೆ ದೂರು ನೀಡಿದ್ದಾಳೆ. ಆ ದಂಪತಿಗೆ ನಾವೇ ಕೌನ್ಸಿಲಿಂಗ್ ಕೊಡಿಸುತ್ತಿದ್ದೇವೆ. ಅವರ ಪೋಷಕರ ಜೊತೆಯೂ ಈ ಬಗ್ಗೆ ಮಾತನಾಡಿದ್ದೇವೆ. ಆ ಮಹಿಳೆಗೆ ತನ್ನ ಗಂಡನ ಜೊತೆ ಬದುಕಬೇಕೆಂಬ ಆಸೆಯಿದೆ. ಹೀಗಾಗಿ ಅವರ ಮದುವೆಯನ್ನು ಉಳಿಸಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ರಾಮ, ಕೃಷ್ಣ, ಶಿವ ಭಾರತದ ಮುಸ್ಲಿಮರ ಪೂರ್ವಜರು: ಆನಂದ್ ಸ್ವರೂಪ್ ಶುಕ್ಲಾ
Advertisement
2 ವರ್ಷಗಳ ಹಿಂದೆ ಕ್ವಾರ್ಸಿ ಗ್ರಾಮದ ಆ ಮಹಿಳೆ ಚಂದೌಸ್ ಗ್ರಾಮದ ಪುರುಷನೊಂದಿಗೆ ಮದುವೆಯಾಗಿದ್ದಳು. ಸಣ್ಣ ಪುಟ್ಟ ವಿಷಯಕ್ಕೆ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು. ಅವರಿಬ್ಬರಿಗೂ ಮಗು ಕೂಡ ಇದ್ದು, ವಿಚ್ಛೇದನವಾದರೆ ಆ ಮಗುವಿನ ಭವಿಷ್ಯ ಹಾಳಾಗಲಿದೆ ಎಂದು ಅವರಿಗೆ ಅರ್ಥ ಮಾಡಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೆಲವೊಮ್ಮೆ ಕೌಟುಂಬಿಕ, ಮಾನಸಿಕ, ದೈಹಿಕ ಹಿಂಸೆಗಳು ಹೆಚ್ಚಾದಾಗ ತಮಗೆ ಮುಕ್ತಿ ಕೊಡಿಸಬೇಕೆಂದು ಕಾನೂನಿನ ಮೊರೆ ಹೋಗುವುದು ಸಾಮಾನ್ಯ. ಆದರೆ ಇತ್ತೀಚೆಗೆ ಗೊರಕೆ ಹೊಡೆಯುವುದು, ಸ್ನಾನ ಮಾಡಿಲ್ಲ ಎಂದು ದಂಪತಿ ದೂರವಾಗುತ್ತಿರುವ ಘಟನೆ ನಡೆದಿದೆ.