ವಿಜಯಪುರ: ಪ್ರೀತಿಸಿ ಮದುವೆಯಾದವಳು ಪಕ್ಕದ ಮನೆಯವನ ಜೊತೆಗೆ ಎಸ್ಕೇಪ್ ಆದ ಘಟನೆ ವಿಜಯಪುರದ ಜಿ. ತಾಳಿಕೋಟೆ ತಾ. ಬೊಮ್ಮನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಇದರಿಂದ ಮನನೊಂದು ಗಂಡ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೂ ಮುನ್ನ ಫೇಸ್ ಬುಕ್ನಲ್ಲಿ ವೀಡಿಯೋ ಹರಿಬಿಟ್ಟು ನೇಣಿಗೆ ಶರಣಾಗಿದ್ದಾನೆ.
Advertisement
ವೆಂಕಟೇಶ ದ್ವಾರನಹಳ್ಳಿ (25) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಎರಡು ವರ್ಷಗಳ ಹಿಂದೆ ವೆಂಕಟೇಶ್ ಪ್ರೀತಿಸಿ ಮದುವೆಯಾಗಿದ್ದ. ಈತನ ಪಕ್ಕದ ಮನೆಯ ಸಹೋದರ ಸಂಬಂಧಿ ಶ್ರೀಶೈಲ್ ಎಂಬವನ ಜೊತೆಗೆ ಸದ್ಯ ಪತ್ನಿ ಎಸ್ಕೇಪ್ ಆಗಿದ್ದಾಳೆ. ತಾಳಿಕೋಟೆ ಪೊಲೀಸ್ ಠಾಣೆಗೆ ಇದರ ಬಗ್ಗೆ ವೆಂಕಟೇಶ್ ದೂರು ಕೂಡ ನೀಡಿದ್ದ. ಆದರೆ ವೆಂಕಟೇಶ್ ಜೊತೆಗೆ ಇರೊಲ್ಲ, ಪ್ರಿಯಕರ ಶ್ರೀಶೈಲ್ ಜೊತೆಗೆ ಇರುವುದಾಗಿ ಪತ್ನಿ ಹೇಳಿದ್ದಳು. ಕಾರಣ ಆಕೆಯ ಹಕ್ಕುಗಳ ಬಗ್ಗೆ ಗಂಡ ವೆಂಕಟೇಶ್ ಗೆ ಪೊಲೀಸರು ಮನವರಿಕೆ ಮಾಡಿದ್ದರು. ಇದರಿಂದ ಮನನೊಂದು ವೆಂಕಟೇಶ್ ನೇಣಿಗೆ ಶರಣಾಗಿದ್ದಾನೆ. ಇದನ್ನೂ ಓದಿ: ಸಿನಿಮಾ ಸ್ಟೈಲ್ನಲ್ಲಿ ಪತ್ನಿ ಕೊಲೆಗೆ ಸ್ಕೆಚ್- ವಿಫಲವಾದ ನಂತ್ರ ಚಾಕುವಿಂದ ಇರಿದು ಕೊಂದ!
Advertisement
Advertisement
ಆತ್ಮಹತ್ಯೆಗೂ ಮುನ್ನ ‘ತನ್ನ ಸಾವಿಗೆ ಶ್ರೀಶೈಲ್ ಹೊಣೆ’ ಎಂದು ಹೇಳಿ ಫೇಸ್ ಬುಕ್ ಲೈವ್ ಮಾಡಿ ನೇಣಿಗೆ ಶರಣಾಗಿದ್ದಾನೆ. ಫೇಸ್ ಬುಕ್ ನಲ್ಲಿ ಈ ವೀಡಿಯೋ ಕಂಡು ಜಮೀನಿನಲ್ಲಿ ನೇಣು ಬಿಗಿದುಕೊಂಡು ಒದ್ದಾಡುತ್ತಿದ್ದ ವೆಂಕಟೇಶ್ ಪ್ರಾಣ ಉಳಿಸಲು, ಸ್ಥಳೀಯರು ಯತ್ನಿಸಿದ್ದಾರೆ. ಆದರೆ ತಾಳಿಕೋಟೆ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದಾಗ ದಾರಿ ಮಧ್ಯೆಯೆ ವೆಂಕಟೇಶ್ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಲೈಂಗಿಕ ದೌರ್ಜನ್ಯದಿಂದ ತಪ್ಪಿಸಿಕೊಳ್ಳಲು ತಂದೆಯನ್ನೇ ಹತ್ಯೆಗೈದ ಬಾಲಕಿ
Advertisement
ಈ ಸಂಬಂಧ ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.