ಕಲಬುರಗಿ: ಪರ ಸ್ತ್ರೀ ಜೊತೆ ಸಲುಗೆಯಿಂದ ಇದ್ದ ಪತಿಯ ಕಾಲು ಮುರಿಯಲು ಆತನ ಪತ್ನಿಯೇ ಸುಪಾರಿ ನೀಡಿರುವ ಘಟನೆ ಕಲಬುರಗಿ (Kalaburagi) ನಗರದ ಅತ್ತರ ಕಂಪೌಡ್ ಬಳಿ ನಡೆದಿದೆ.
ವೆಂಕಟೇಶ್ ಎಂಬಾತ ಎರಡು ಕಾಲು ಮುರಿತಕ್ಕೆ ಒಳಗಾದ ಪತಿಯಾಗಿದ್ದು, ಸುಪಾರಿ ನೀಡಿದ ಪತ್ನಿ ಉಮಾದೇವಿ ಹಾಗೂ ಹಂತಕರಾದ ಆರೀಫ್, ಮನಹೋರ, ಸುನೀಲ್ ರನ್ನ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಸಿಎಂ ನೈತಿಕತೆ ಕಳೆದುಕೊಂಡಿದ್ದಾರೆ, ಮುಡಾ ಕೇಸ್ ಸಿಬಿಐಗೆ ಹೋಗೋದು ನಿಶ್ಚಿತ: ಸ್ನೇಹಮಹಿ ಕೃಷ್ಣ
ವೆಂಕಟೇಶ್ ಕೆಲ ತಿಂಗಳಿನಿಂದ ಮತ್ತೊಬ್ಬ ಮಹಿಳೆಯ ಜೊತೆಗೆ ಸಲುಗೆಯಿಂದ ವರ್ತಿಸುತ್ತಿದ್ದ, ಹೀಗಾಗಿ ದಂಪತಿಗಳ ನಡುವೆ ಹಲವು ಬಾರಿ ಜಗಳವಾಗಿತ್ತು. ಕೊನೆಗೆ ಮಾತು ಕೇಳದ ಪತಿಯ ಎರಡೂ ಕಾಲುಗಳನ್ನ ಮುರಿದ್ರೆ ಮನೆಯಲ್ಲಿಯೇ ಬಿದ್ದಿರುತ್ತಾನೆ ಅಂತ ಪತ್ನಿ ಸ್ಕೆಚ್ ಹಾಕಿದ್ದಾಳೆ. ಇದನ್ನೂ ಓದಿ: ಟೋಲ್ ತಪ್ಪಿಸುತ್ತಿದ್ದ ವಾಹನ ಸವಾರರಿಗೆ ಹೆದ್ದಾರಿ ಪ್ರಾಧಿಕಾರ ಶಾಕ್; ಬಿಡದಿ ಬಳಿಯ ಎಕ್ಸಿಟ್ ರೋಡ್ ಬಂದ್
ಪತಿಯ ಎರಡೂ ಕಾಲುಗಳನ್ನ ಮುರಿಯಲು 5 ಲಕ್ಷಕ್ಕೆ ಪತ್ನಿ ಸುಪಾರಿ ನೀಡಿದ್ದಳು. ಆದ್ರೆ ವೆಂಕಟೇಶ್ ಮಗ ಇದು ದರೋಡೆ ಪ್ರಕರಣದ ವೇಳೆ ಕಾಲು ಮುರಿತ ಎಂದು ದೂರು ನೀಡಿದ್ದ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾಗ ಉಮಾದೇವಿಯ ಅಸಲಿ ಬಣ್ಣ ಬಯಲಾಗಿದೆ. ಸದ್ಯ ಸುಪಾರಿ ನೀಡಿದ ಪತ್ನಿ ಸೇರಿದಂತೆ ಕಾಲು ಮುರಿದ ಆರೋಪಿಗಳನ್ನ ಬ್ರಹ್ಮಪೂರ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಟೋಲ್ ತಪ್ಪಿಸುತ್ತಿದ್ದ ವಾಹನ ಸವಾರರಿಗೆ ಹೆದ್ದಾರಿ ಪ್ರಾಧಿಕಾರ ಶಾಕ್; ಬಿಡದಿ ಬಳಿಯ ಎಕ್ಸಿಟ್ ರೋಡ್ ಬಂದ್