ಮೈಸೂರು: ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನೇ (Husband) ಪತ್ನಿ (Wife) ಪ್ರಿಯಕರನೊಂದಿಗೆ ಸೇರಿಕೊಂಡು ಕೊಲೆ ಮಾಡಿದ ಘಟನೆ ಮೈಸೂರು (Mysuru) ಜಿಲ್ಲೆಯಲ್ಲಿ ನಡೆದಿದೆ.
ಮಂಜು ಮೃತ ವ್ಯಕ್ತಿ. ಮಂಜುಗೆ 12 ವರ್ಷದ ಹಿಂದೆ ಲಿಖಿತಾ ಎನ್ನುವವಳ ಜೊತೆ ಮದುವೆ ಆಗಿತ್ತು. ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಕೆಳ ಮಧ್ಯಮ ಕುಟುಂಬವಾದರೂ ಮಂಜು, ತನ್ನ ಕುಟುಂಬವನ್ನು ಚೆನ್ನಾಗಿಯೇ ನೋಡಿಕೊಳ್ಳುತ್ತಿದ್ದ. ಆದರೆ, ಐದಾರು ವರ್ಷಗಳ ಹಿಂದೆ ಮಂಜು ಪತ್ನಿ ಲಿಖಿತಾಗೆ ಅನೈತಿಕ ಸಂಬಂಧ ಶುರುವಾಯಿತು. ಲಿಖಿತಾಳ ಊರಾದ ಬೋಗಾದಿಯಲ್ಲಿನ ಯುವಕನ ಜೊತೆ ಅನೈತಿಕ ಸಂಬಂಧ ಬೆಳೆಸಿಕೊಂಡು ಅವನ ಜೊತೆ ಮನೆ ಬಿಟ್ಟು ಹೋಗಿದ್ದಳು.
ಪ್ರಿಯಕರನ ಜೊತೆ ಓಡಿ ಹೋಗಿದ್ದ ಪತ್ನಿಯನ್ನು ದೊಡ್ಡ ಮನಸ್ಸು ಮಾಡಿ ಮಂಜು ಕ್ಷಮಿಸಿದ್ದ. ಆಗ ಊರಿನವರು ಹಾಗೂ ಸಂಬಂಧಿಗಳು ಲಿಖಿತಾಗೆ ಬುದ್ಧಿ ಹೇಳಿ ಸಂಸಾರ ಸರಿ ಮಾಡಿದ್ದರು. ಆದರೂ ಈ ಬಗ್ಗೆ ಆಗಾಗ ಮನೆಯಲ್ಲಿ ಜಗಳ ನಡೆಯುತ್ತಲೇ ಇತ್ತು. ಇದನ್ನೂ ಓದಿ: ನನ್ನ ಹತ್ಯೆಗೆ ನೀವೇ ಕೋವಿ ಹಿಡಿದುಕೊಂಡು ಬನ್ನಿ – ಅಶ್ವಥ್ ನಾರಾಯಣ್‌ಗೆ ಸಿದ್ದು ತಿರುಗೇಟು
ತನ್ನ ಪತ್ನಿಯ ನಡವಳಿಕೆ ಬಗ್ಗೆ ಮಂಜು ಆಗಾಗ ಪ್ರಶ್ನೆ ಮಾಡುತ್ತಿದ್ದ. ಇದರಿಂದ ಕೋಪಗೊಂಡಿದ್ದ ಲಿಖಿತಾ ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಂದಿದ್ದಾಳೆ. ರಾತ್ರೋರಾತ್ರಿ ಪ್ರಿಯಕರನ ಜೊತೆ ಸೇರಿ ಲಿಖಿತಾ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ಸದ್ಯ ವಿಜಯನಗರ ಪೊಲೀಸರು ಆರೋಪಿ ಲಿಖಿತಾಳನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕ್ಬೇಕು: ಅಶ್ವಥ್ ನಾರಾಯಣ್
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k