– ಪತ್ನಿ, ಪ್ರಿಯಕರ ಅರೆಸ್ಟ್
ಲಕ್ನೋ: ಪತ್ನಿ ಆಕೆಯ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಂದು, ದೇಹವನ್ನು ಪೀಸ್ ಪೀಸ್ ಮಾಡಿ, ಡ್ರಮ್‌ನಲ್ಲಿ ತುಂಬಿ ಸಿಮೆಂಟ್ ಹಾಕಿ ಮುಚ್ಚಿಟ್ಟಿರುವ ಘಟನೆ ಉತ್ತರಪ್ರದೇಶದ (Uttar Pradesh) ಬ್ರಹ್ಮಪುರಿಯ ಇಂದಿರಾ ನಗರದಲ್ಲಿ ನಡೆದಿದೆ.
ಖಾಸಗಿ ಹಡಗು ಕಂಪನಿಯ ಉದ್ಯೋಗಿ ಸೌರಭ್ ರಜಪೂತ್(29) ಕೊಲೆಯಾದ ಪತಿ. ಮೃತ ಸೌರಭ್ ಮಾ. 4ರಂದು ನಾಪತ್ತೆಯಾಗಿದ್ದರು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ತನಿಖೆ ಆರಂಭಿಸಿದ್ದರು. ಈ ವೇಳೆ ಪೊಲೀಸರು ಅನುಮಾನದಿಂದ ಪತ್ನಿ ಮುಸ್ಕಾನ್(27)ನನ್ನ ವಿಚಾರಣೆ ನಡೆಸಿದ್ದರು. ಈ ವೇಳೆ ಆಕೆ ಪ್ರಿಯಕರ ಸಾಹಿಲ್(25) ಜೊತೆ ಸೇರಿ ಸೌರಭ್‌ನನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆಯುಷ್ ವಿಕ್ರಮ್ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ರಂಜಾನ್ ಹಬ್ಬದ ಸಮಯದಲ್ಲಿ 1 ತಿಂಗಳು ಉಪವಾಸ ಮಾಡುವುದೇಕೆ? ಖರ್ಜೂರ ತಿಂದು ಉಪವಾಸ ಮುರಿಯುವುದರ ಹಿಂದಿನ ಕಾರಣವೇನು?
ಮಾ. 4ರಂದು ಸೌರಭ್‌ನನ್ನ ಮುಸ್ಕಾನ್ ಹಾಗೂ ಸಾಹಿಲ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದರು. ನಂತರ ಆತನ ದೇಹವನ್ನು ಪೀಸ್ ಪೀಸ್ ಆಗಿ ಕತ್ತರಿಸಿ, ಡ್ರಮ್‌ನೊಳಗೆ ಹಾಕಿ ಸಿಮೆಂಟ್‌ನಿಂದ ಮುಚ್ಚಿದ್ದರು ಎಂದು ತನಿಖೆ ವೇಳೆ ತಿಳಿದುಬಂದಿದೆ.
ಕೊಲೆ ಮಾಡಿದ ಬಳಿಕ ಮುಸ್ಕಾನ್, ಸೌರಭ್‌ನ ಫೋನ್‌ನಿಂದ ಕುಟುಂಬಸ್ಥರಿಗೆ ಮೆಸೇಜ್ ಕಳುಹಿಸುವ ಮೂಲಕ ಪ್ರಕರಣದ ದಾರಿ ತಪ್ಪಿಸಲು ಪ್ರಯತ್ನಿದ್ದಳು. ಬಳಿಕ ಆಕೆ ಪ್ರಿಯಕರ ಸಾಹಿಲ್ ಜೊತೆ ಸುತ್ತಾಡಲು ತೆರಳಿದ್ದಳು. ಸದ್ಯ ಆರೋಪಿಗಳಾದ ಮುಸ್ಕಾನ್ ಹಾಗೂ ಸಾಹಿಲ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಭೂಮಿಗೆ ಮರಳಿದ ಸುನಿತಾ ವಿಲಿಯಮ್ಸ್- 286 ದಿನಗಳ ಅಂತರಿಕ್ಷ ವಾಸ ಅಂತ್ಯ
ಸೌರಭ್ 2016ರಲ್ಲಿ ಗೌರಿಪುರದ ಮುಸ್ಕಾನ್ ರಸ್ತೋಗಿಯನ್ನು ಪ್ರೇಮ ವಿವಾಹವಾಗಿದ್ದರು. ಕುಟುಂಬಸ್ಥರು ಇವರಿಬ್ಬರ ವಿವಾಹದಿಂದ ಅಸಮಾಧಾನಗೊಂಡಿದ್ದರಿಂದ ಸೌರಭ್ ಹಾಗೂ ಮುಸ್ಕಾನ್, 3 ವರ್ಷದ ಪುತ್ರಿಯೊಂದಿಗೆ ಇಂದಿರಾನಗರದ ಬಾಡಿಗೆ ಮನೆಯಲ್ಲಿ ಪ್ರತ್ಯೇಕವಾಗಿ ವಾಸವಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.