ಚಿಕ್ಕಬಳ್ಳಾಪುರ: ಚುನಾವಣೆಯಲ್ಲಿ (Election) ವೋಟ್ ಹಾಕಬೇಕು ಎಂದರೆ ಅದಕ್ಕೆ ವೋಟರ್ ಐಡಿ (Voter ID) ಕಡ್ಡಾಯವಾಗಿದೆ. ಹಾಗಾಗಿ ಮನೆಯಲ್ಲಿದ್ದ ವೋಟರ್ ಐಡಿ ಕಾರ್ಡ್ ತೆಗೆದುಕೊಳ್ಳಲೆಂದು 9 ತಿಂಗಳ ನಂತರ ಮನೆಗೆ ಬಂದ ಪತಿಯನ್ನು ಪತ್ನಿ ಕೂಡಿ ಹಾಕಿ ಬೀಗ ಹಾಕಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಬಾಗೇಪಲ್ಲಿ (Bagepalli) ತಾಲೂಕಿನ ಏಟಿಗಡ್ಡಪಲ್ಲಿಯಲ್ಲಿ ನಡೆದಿದೆ.
ಬಾಗೇಪಲ್ಲಿ ತಾಲೂಕಿನ ಏಟಿಗಡ್ಡಪಲ್ಲಿಯ ಗಂಗರಾಜೇಶ್ವರಿ ಎಂಬಾಕೆ ತನ್ನ ಪತಿ ವೈ.ಎಸ್. ಮಹೇಶ್ ಎಂಬಾತನನ್ನು ಕೂಡಿ ಹಾಕಿದ್ದಾಳೆ. ಮಹೇಶ್ ಕೆ.ಎಸ್.ಆರ್.ಟಿ.ಸಿಯಲ್ಲಿ ಕಂಡಕ್ಟರ್ ಕಂ ಡ್ರೈವರ್ (Driver) ಆಗಿ ಕೆಲಸ ಮಾಡುತ್ತಿದ್ದ. ಇವರಿಬ್ಬರಿಗೂ ಮದುವೆಯಾಗಿ 20 ವರ್ಷಗಳು ಕಳೆದಿವೆ. ಆದರೆ ಇಬ್ಬರು ಮಧ್ಯೆ ಅನುಮಾನ ಸಂಶಯ ಮೂಡಿದ್ದು, ಒಬ್ಬರಿಗೊಬ್ಬರು ಅಕ್ರಮ ಸಂಬಂಧದ ಬಗ್ಗೆ ಆರೋಪ ಪ್ರತ್ಯಾರೋಪ ಮಾಡಿಕೊಂಡು ಕೊನೆಗೆ ಸುಖ, ಸಂಸಾರ ಹಾಳು ಮಾಡಿಕೊಂಡಿದ್ದಾರೆ.
Advertisement
Advertisement
ಬಾಗೇಪಲ್ಲಿ ಕೆ.ಎಸ್.ಆರ್.ಟಿ.ಸಿ ಡಿಪೋದಲ್ಲಿ ಮಹೇಶ್ ಕೆಲಸ ಮಾಡುತ್ತಿದ್ದು, ಕೆಲವು ತಿಂಗಳುಗಳಿಂದ ಪತ್ನಿ ಇರುವ ಮನೆಗೆ ಹೋಗದೆ ಮಕ್ಕಳ ಮುಖವನ್ನು ನೋಡದೆ, ಚಿಕ್ಕಬಳ್ಳಾಪುರದಲ್ಲಿ ಬೇರೊಂದು ಮನೆ ಮಾಡಿಕೊಂಡು ಇನ್ನೊಬ್ಬಳ ಜೊತೆ ಸಂಸಾರ ಮಾಡ್ತಿದ್ದಾನಂತೆ. ಆದರೆ ಗಂಗರಾಜೇಶ್ವರಿ 9 ತಿಂಗಳ ನಂತರ ಮನೆಗೆ ಬಂದ ಗಂಡನನ್ನು ರೂಮ್‌ನಲ್ಲಿ ಕೂಡಿ ಹಾಕಿ ಜೋರು ಗಲಾಟೆ ಮಾಡಿದ್ದಾಳೆ. ನಂತರ ಪೊಲೀಸರು ಆಗಮಿಸಿ ಮಹೇಶ್‌ನನ್ನು ರಕ್ಷಿಸಿ ಪೊಲೀಸ್ ಠಾಣೆಗೆ ಕರೆ ತಂದು ವಿಚಾರಣೆ ನಡೆಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಸವದಿ ರಾಜೀನಾಮೆ
Advertisement
Advertisement
ಪತ್ನಿ ಆರೋಪಕ್ಕೆ ತಿರುಗೇಟು ನೀಡಿರುವ ಮಹೇಶ್, ನನ್ನ ಪತ್ನಿಯೇ ಸರಿ ಇಲ್ಲ, ಈ ಹಿನ್ನೆಲೆಯಲ್ಲಿ ತನ್ನ ನೆಮ್ಮದಿ ಹಾಳು ಆಗಿದೆ. ಅಷ್ಟೇ ಅಲ್ಲದೇ ವಿಚ್ಛೇದನಕ್ಕಾಗಿ ನ್ಯಾಯಾಲಯ ಮೊರೆ ಹೋಗಿದ್ದಾನೆ. ಜೊತೆಗೆ ಈ ಹಿನ್ನೆಲೆಯಲ್ಲಿ ಪ್ರತ್ಯೇಕವಾಗಿ ವಾಸವಾಗಿದ್ದೇನೆ ಎಂದು ಹೇಳಿಕೊಂಡಿದ್ದಾನೆ. ಇದನ್ನೂ ಓದಿ: ರಾಜಕೀಯ ನಿವೃತ್ತಿ ಹೇಳಿಕೆ ಹಿಂಪಡೆದ ಶಾಸಕ ಎಸ್.ಅಂಗಾರ