ಪತ್ನಿಯ ರೂಮಿನಲ್ಲಿ ಲವ್ವರ್ ನೋಡಿ ಲಾಕ್ ಮಾಡಿ ಬೆಂಕಿ ಹಚ್ಚಿದ!

Public TV
1 Min Read
FIRE

ಹೈದರಾಬಾದ್: ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಆಕೆಯ ಪ್ರಿಯತಮನಿಗೆ ಬೆಂಕಿ ಹಚ್ಚಿರುವ ಘಟನೆ ತೆಲಂಗಾಣದ ಚೆವೆಲ್ಲಾದಲ್ಲಿ ನಡೆದಿದೆ.

ಈ ಘಟನೆ ದಿಸೆಂಬರ್ 30 ಭಾನುವಾರ ನಡೆದಿದ್ದು, ಆರೋಪಿ ಪತಿ ರವಿ, ಪತ್ನಿ ಭಾಗ್ಯಲಕ್ಷ್ಮಿ ಮತ್ತು ಆಕೆಯ ಪ್ರಿಯತಮನನ್ನು ರೂಮಿನಲ್ಲಿ ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸದ್ಯಕ್ಕೆ ಇಬ್ಬರ ಸ್ಥಿತಿ ಗಂಭೀರಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

room

ಏನಿದು ಪ್ರಕರಣ?
10 ವರ್ಷಗಳ ಹಿಂದೆ ಭಾಗ್ಯಲಕ್ಷ್ಮಿ ಮತ್ತು ರವಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇಬ್ಬರ ಸಂಸಾರಿಕ ಜೀವನ ಚೆನ್ನಾಗಿ ನಡೆಯುತ್ತಿತ್ತು. ಆದರೆ ಕೆಲವು ತಿಂಗಳ ಹಿಂದೆ ಜಗಳವಾಡಿಕೊಂಡು ಇಬ್ಬರು ಬೇರೆ ಬೇರೆಯಾಗಿ ವಾಸಿಸುತ್ತಿದ್ದರು. ಪತಿಯಿಂದ ಬೇರೆಯಾದ ಬಳಿಕ ಭಾಗ್ಯಲಕ್ಷ್ಮಿ ಬೇರೆಯವರ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು. ಆರೋಪಿ ರವಿ ತನ್ನ ಪತ್ನಿ ಇನ್ನೊಬ್ಬನ ಜೊತೆ ಅನೈತಿಕ ಸಂಬಂಧ ಹೊಂದಿರುವ ಬಗ್ಗೆ ತಿಳಿದಿದೆ.

ರವಿ ಭಾನುವಾರ ಬೆಳಗ್ಗೆ ಪತ್ನಿಯ ಮನೆಗೆ ಹೋಗಿದ್ದಾನೆ. ಅಲ್ಲಿ ಭಾಗ್ಯಲಕ್ಷ್ಮಿ ಆಕೆಯ ಪ್ರಿಯತಮನ ಜೊತೆ ರೂಮಿನಲ್ಲಿ ಇದ್ದಳು. ಇದನ್ನು ನೋಡಿದ ರವಿ ರೂಮನ್ನು ಹೊರಗಿನಿಂದ ಲಾಕ್ ಮಾಡಿಕೊಂಡು ಮಕ್ಕಳನ್ನು ಮನೆಯಿಂದ ಹೊರಗಡೆ ಕರೆದುಕೊಂಡು ಹೋಗಿದ್ದಾನೆ. ನಂತರ ರೂಮಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ್ದಾನೆ.

love

ಇತ್ತ ಮಕ್ಕಳು ಈ ಬಗ್ಗೆ ನೆರೆಹೊರೆಯವರಿಗೆ ತಿಳಿಸಿದ್ದಾರೆ. ತಕ್ಷಣ ನೆರೆಹೊರೆಯವರು ಬಂದು ಬಾಗಿಲು ಮುರಿದು ಮನೆಯೊಳಗೆ ಹೋಗಿದ್ದಾರೆ. ಆಗ ಭಾಗ್ಯಲಕ್ಷ್ಮಿ ಗಂಭೀರವಾಗಿ ಸುಟ್ಟು ಹೋಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ತಕ್ಷಣ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಬೆಂಕಿ ಇಡೀ ಮನೆಯನ್ನು ಆವರಿಸಿಕೊಂಡಿದ್ದು, ಸ್ಥಳೀಯರು ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಅಗ್ನಿಶಾಮಕ ದಳ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *