– ತವರು ಮನೆಯಲ್ಲೇ ಕೊಲೆ ಮಾಡಿಸಿದ್ದ ಪತ್ನಿ ನೌಟಂಕಿ ಆಟ ಬಯಲು
ಮೈಸೂರು: ಅಕ್ರಮ ಸಂಬಂಧಕ್ಕೆ (Illicit Relationship) ಅಡ್ಡಿಯಾದ ಪತಿಯನ್ನ ಪತ್ನಿಯೇ ತನ್ನ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿರುವ ಘಟನೆ ಮೈಸೂರು (Mysuru) ಜಿಲ್ಲೆಯ ಸರಗೂರು ತಾಲೂಕಿನ ಕುರ್ಣೇಗಾಲ ಗ್ರಾಮದಲ್ಲಿ ನಡೆದಿದೆ.
ಕುರ್ಣೇಗಾಲದ ಜವರಪ್ಪ ಕೊಲೆಯಾದ ಪತಿ. ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ ಸಿದ್ದೇಶ್ (32), ಕುರ್ಣೆಗಾಲ ಗ್ರಾಮದ ಅಮೃತಾ (26) ಬಂಧಿತ ಆರೋಪಿಗಳು. ಇದನ್ನೂ ಓದಿ: ನೋಯ್ಡಾ ಹಿಂಸಾತ್ಮಕ ಪ್ರತಿಭಟನೆ ಹಿಂದಿನ ಮಾಸ್ಟರ್‌ಮೈಂಡ್ ತಮಿಳುನಾಡಿನಲ್ಲಿ ಅರೆಸ್ಟ್

ಅನುಮಾನಸ್ಪದ ರೀತಿಯಲ್ಲಿ ಜವರಪ್ಪ ಶವ ಪತ್ತೆಯಾಗಿತ್ತು. ಈ ಬಗ್ಗೆ ಪೊಲೀಸರು ತನಿಖೆ ನಡೆಸಿದಾಗ ಸತ್ಯ ಬಯಲಾಗಿದೆ. ಆರೋಪಿ ಸಿದ್ದೇಶ್, ಮೃತನ ಪತ್ನಿ ಅಮೃತಾ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ. ಗಂಡ ಇದ್ದರೆ ತಮ್ಮ ಸಂಬಂಧಕ್ಕೆ ಅಡ್ಡಿ ಆಗುತ್ತೆ ಅಂತ ಕೊಲೆಗೆ ಪ್ಲ್ಯಾನ್ ಮಾಡಿದ್ದರು. ಇದನ್ನೂ ಓದಿ: ಯೋಗೇಶ್ ಗೌಡ ಹತ್ಯೆ ಕೇಸ್; ಪರಸ್ಪರ 57 ಬಾರಿ ಮೊಬೈಲ್ ಕರೆ ಮಾಡಿ ಕುಲಕರ್ಣಿ-ಮುತ್ತಗಿ ಮಾತುಕತೆ
ಕುರ್ಣೇಗಾಲ ಗ್ರಾಮದ ಜವರಪ್ಪ ನಂಜನಗೂಡು ತಾಲೂಕಿನ ಹಾಡ್ಯ ಗ್ರಾಮದ ಅಮೃತಾಳನ್ನ ವಿವಾಹವಾಗಿದ್ದ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಸಣ್ಣಪುಟ್ಟ ವಿಚಾರಕ್ಕೆ ಗಂಡ ಹೆಂಡತಿ ನಡುವೆ ಗಲಾಟೆ ಆಗುತ್ತಿತ್ತು. ಇದನ್ನೂ ಓದಿ: ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ಮಾತ್ರೆ ಮಾರಾಟಕ್ಕೆ ಯತ್ನ – 6 ಮಂದಿ ಅರೆಸ್ಟ್
12 ದಿನಗಳ ಹಿಂದೆ ಮಕ್ಕಳೊಂದಿಗೆ ಹಬ್ಬಕ್ಕೆಂದು ಅಮೃತ ತವರಿಗೆ ಹೋಗಿದ್ದಳು. ಏ.16 ರಂದು ಹೆಂಡತಿ ಮನೆಗೆ ಹೋಗಿ ಬರುತ್ತೇನೆಂದು ಜವರಪ್ಪ ಹೋಗಿದ್ದ. ಅಲ್ಲಿಯೆ ಈ ಕೊಲೆ ನಡೆದಿದೆ. ಕೊಲೆ ಮಾಡಿ ಗ್ರಾಮದ ಸಮೀಪದ ರಸ್ತೆ ಬದಿಯಲ್ಲಿ ಮೃತದೇಹ ಬಿಸಾಕಿದ್ದರು.

