ಚಂಡೀಗಢ: 2013ರಲ್ಲಿ ಪಾಕಿಸ್ತಾನದ ಜೈಲಿನಲ್ಲಿ ಸಾವನ್ನಪ್ಪಿದ್ದ ಭಾರತೀಯ ಪ್ರಜೆ ಸರಬ್ಜಿತ್ ಸಿಂಗ್ (Sarabjit Singh) ಅವರ ಪತ್ನಿ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ.
ಸಿಂಗ್ ಅವರ ಪತ್ನಿ ಸುಖಪ್ರೀತ್ ಕೌರ್ ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದರು. ಇಲ್ಲಿನ ಫತೇಪುರ್ ಬಳಿ ಅಪಘಾತವಾಗಿದೆ. ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಬದುಕುಳಿಸಲು ಸಾಧ್ಯವಾಗಲಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಆಹಾರ ಪದಾರ್ಥಗಳು ದುಬಾರಿ – ಚಿಲ್ಲರೆ ಹಣದುಬ್ಬರ ಶೇ.7ಕ್ಕೆ ಏರಿಕೆ
ಕೌರ್ ಅವರು ಅವರು ಪೂನಂ ಮತ್ತು ಸ್ವಪಂದೀಪ್ ಕೌರ್ ಎಂಬ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಮಂಗಳವಾರ ತರ್ನ್ ತರಣ್ನಲ್ಲಿರುವ ಅವರ ಸ್ಥಳೀಯ ಸ್ಥಳ ಭಿಖಿವಿಂಡ್ನಲ್ಲಿ ನಡೆಯಲಿದೆ.
ತನ್ನ ಸಹೋದರನನ್ನು ಜೈಲಿನಿಂದ ಬಿಡುಗಡೆ ಮಾಡುವ ಪ್ರಯತ್ನದಲ್ಲಿ ವಿವಿಧ ವೇದಿಕೆಗಳಲ್ಲಿ ಧ್ವನಿ ಎತ್ತಿದ್ದ ಸರಬ್ಜಿತ್ ಸಹೋದರಿ ದಲ್ಬೀರ್ ಕೌರ್ ಎದೆನೋವಿನಿಂದ ಜೂನ್ನಲ್ಲಿ ಸಾವನ್ನಪ್ಪಿದ್ದರು. ಇದನ್ನೂ ಓದಿ: ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಬೆಂಕಿ ಅವಘಡ – 8 ಮಂದಿ ದುರ್ಮರಣ
ಸರಬ್ಜಿತ್ ಸಿಂಗ್ (49) ಅವರು ಏಪ್ರಿಲ್ 2013 ರಲ್ಲಿ ಲಾಹೋರ್ ಜೈಲಿನಲ್ಲಿ ಸಾವನ್ನಪ್ಪಿದ್ದರು. ಆಪಾದಿತ ಭಯೋತ್ಪಾದನೆ ಮತ್ತು ಬೇಹುಗಾರಿಕೆಯ ಆರೋಪದಲ್ಲಿ ಪಾಕಿಸ್ತಾನಿ ನ್ಯಾಯಾಲಯವು ಅವರನ್ನು 1991 ರಲ್ಲಿ ಮರಣದಂಡನೆಗೆ ಗುರಿಪಡಿಸಿತ್ತು. ಆದಾಗ್ಯೂ ಸರ್ಕಾರವು 2008 ರಲ್ಲಿ ಅನಿರ್ದಿಷ್ಟ ಅವಧಿಗೆ ಸಿಂಗ್ ಮರಣದಂಡನೆಯನ್ನು ತಡೆಹಿಡಿಯಿತು. ಮರಣದ ನಂತರ, ಸರಬ್ಜಿತ್ ಅವರ ಮೃತದೇಹವನ್ನು ಲಾಹೋರ್ನಿಂದ ಅಮೃತಸರಕ್ಕೆ ತರಲಾಯಿತು. ಅಲ್ಲಿ ಅವರ ಅಂತಿಮ ವಿಧಿಗಳನ್ನು ನಡೆಸಲಾಯಿತು.