ಮೈಸೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಶೇ.61.88 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಮೈಸೂರಿನ ಕೆಆರ್ ನಗರದ ಶಾಸಕ ಸಾ.ರಾ ಮಹೇಶ್ ಅವರ ಪತ್ನಿ 30 ವರ್ಷಗಳ ಬಳಿಕ ಪರೀಕ್ಷೆ ಬರೆದು ಪಾಸಾಗಿದ್ದು, ಇತರರಿಗೂ ಮಾದರಿಯಾಗಿದ್ದಾರೆ. ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ಭಾರೀ ಪ್ರವಾಹಕ್ಕೆ 25 ಜನ ಬಲಿ- ಅಪಾಯದ ಸುಳಿಯಲ್ಲಿ 40 ಲಕ್ಷ ಮಂದಿ
Advertisement
ಸಾ.ರಾ ಮಹೇಶ್ ಅವರ ಪತ್ನಿ ಅನಿತಾ 1993ರಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ತೇರ್ಗಡೆ ಹೊಂದಿದ್ದರು. ಬಳಿಕ ವಿದ್ಯಾಭ್ಯಾಸ ಮುಂದುವರಿಸಿರಲಿಲ್ಲ. ಇದೀಗ 30 ವರ್ಷಗಳ ಬಳಿಕ ಪಿಯುಸಿ ಪರೀಕ್ಷೆ ಬರೆದು ಪಾಸಾಗಿದ್ದಾರೆ. ಇದನ್ನೂ ಓದಿ: ವೇದಿಕೆಯಲ್ಲೇ ಪರಿಷ್ಕೃತ ಪಠ್ಯಪುಸ್ತಕದ ಪ್ರತಿ ಹರಿದು ಹಾಕಿದ ಡಿಕೆಶಿ
Advertisement
ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಖಾಸಗಿಯಾಗಿ ಪರೀಕ್ಷೆ ಬರೆದ ಅನಿತಾ 416 ಅಂಕ ಪಡೆದು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಈ ಮೂಲಕ ವಿದ್ಯಾರ್ಥಿಗಳಿಗೆ, ಗೃಹಿಣಿಯರಿಗೆ ಮಾದರಿಯಾಗಿ, ಹುಬ್ಬೇರಿಸುವಂತಾಗಿದ್ದಾರೆ.