ಬೆಂಗಳೂರು: ಎರಡನೇ ಬಾರಿ ಮುಖ್ಯಮಂತ್ರಿ ಪಟ್ಟಕ್ಕೆ ಏರಿದ ಸಿದ್ದರಾಮಯ್ಯನವರಿಗೆ (Siddarmaiah) ಪತ್ನಿ ವಾಚ್(Watch) ಒಂದನ್ನು ಉಡುಗೊರೆಯಾಗಿ (Gift) ನೀಡಿದ್ದಾರೆ.
ಭಾನುವಾರ ಕಾಂಗ್ರೆಸ್ ನೂತನ ಕಟ್ಟಡ ಇಂದಿರಾ ಭವನದಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯ ಸ್ಮರಣೆ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ವೇದಿಕೆಯಲ್ಲಿ ಸಿದ್ದರಾಮಯ್ಯ ಬಲಗಡೆ ಡಿಕೆ ಶಿವಕುಮಾರ್ (Shivakumar), ಎಡಗಡೆ ಎಂಬಿ ಪಾಟೀಲ್ (MB Patil) ಕುಳಿತ್ತಿದ್ದರು.
ಸಚಿವ ಎಂಬಿ ಪಾಟೀಲ್ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಿದ್ದರಾಮಯ್ಯ ಬಳಿ ಹೊಸ ವಾಚ್ ಬಗ್ಗೆ ಕೇಳಿದ್ದಾರೆ. ಈ ವೇಳೆ ಈ ವೇಳೆ ಪತ್ನಿ ಪಾರ್ವತಿ Rado ವಾಚ್ ಗಿಫ್ಟ್ ನೀಡಿದ ವಿಚಾರವನ್ನು ಸಿದ್ದರಾಮಯ್ಯ ಹಂಚಿಕೊಂಡಿದ್ದಾರೆ.
ವಿವಾದಕ್ಕೆ ಕಾರಣವಾಗಿತ್ತು ವಾಚ್:
ಮಾಜಿ ಸಿಎಂ ಸಿದ್ದರಾಮಯ್ಯ ಅವರ ಅಧಿಕಾರದ ಅವಧಿಯಲ್ಲಿ ಹುಬ್ಲೋಟ್ ವಾಚ್ ಗಿಫ್ಟ್ ಪ್ರಕರಣ ಭಾರೀ ಸದ್ದು ಮಾಡಿತ್ತು. ನಿಮ್ಮ ಸಿಎಂ ಸಮಾಜವಾದಿಯಲ್ಲ ಅವರು ಮಜಾವಾದಿ. ದುಬಾರಿ ಬೆಲೆಯ ವಾಚು, ಗ್ಲಾಸ್ ಗಳನ್ನು ಧರಿಸುತ್ತಾರೆ ಎಂದು ಕುಮಾರಸ್ವಾಮಿ ಕಾಂಗ್ರೆಸ್ ನಾಯಕರನ್ನು ಟೀಕಿಸಿದ್ದರು. ಇದನ್ನೂ ಓದಿ: ಸಿದ್ದರಾಮಯ್ಯಗೆ ಮತ್ತೆ ಸುತ್ತಿಕೊಂಡ `ವಾಚ್’ ಕಂಟಕ!
ವಾಚ್ ಪ್ರಕರಣ ರಾಜಕೀಯ ವಲಯದಲ್ಲಿ ತೀವ್ರ ವಿವಾದಕ್ಕೆ ಒಳಗಾಗುತ್ತಿದ್ದಂತೆ ಸಿದ್ದರಾಮಯ್ಯ ವಾಚ್ ಅನ್ನು ಸರ್ಕಾರದ ವಶಕ್ಕೆ ನೀಡುವ ಮೂಲಕ ಎಲ್ಲಾ ಗೊಂದಲಗಳಿಗೆ ಅಂತ್ಯ ಹಾಡಿದ್ದರು. ವಿವಾದ ಅಂತ್ಯವಾಗಿದ್ದರೂ ಈ ವಾಚ್ ಪ್ರಕರಣ ಸಿದ್ದರಾಮಯ್ಯ ಅವರ ಇಮೇಜ್‍ಗೆ ಸ್ವಲ್ಪ ಹೊಡೆತ ನೀಡಿತ್ತು. 2018ರ ವಿಧಾನಸಭಾ ಚುನಾವಣೆಯಲ್ಲಿ ಅಮಿತ್ ಶಾ ಸೇರಿದಂತೆ ಬಿಜೆಪಿ ನಾಯಕರು ಈ ವಿಚಾರವನ್ನು ಪ್ರಸ್ತಾಪ ಮಾಡಿ ಟೀಕೆ ಮಾಡುತ್ತಿದ್ದರು.