CrimeLatestMain PostNational

ಕೊಲ್ಲಲು ಬಂದವ್ರ ಕಣ್ಣಿಗೆ ಖಾರದ ಪುಡಿ ಎರಚಿ ಪತಿಯನ್ನು ಬಚಾವ್ ಮಾಡಿದ್ಲು!

ಹೈದರಾಬಾದ್: ಪತಿಯನ್ನು ಹತ್ಯೆ ಮಾಡಲು ಬಂದ ಕಿಡಿಗೇಡಿಗಳ ಕಣ್ಣಿಗೆ ಖಾರದ ಪುಡಿ ಎರಚಿದ ಮಹಿಳೆ, ಪತಿಯನ್ನು ಪ್ರಾಣಾಪಾಯದಿಂದ ಬಚಾವ್ ಮಾಡಿಕೊಂಡಿರುವ ಘಟನೆ ತೆಲಂಗಾಣದ ವಾರಂಗಲ್ ಜಿಲ್ಲೆಯಲ್ಲಿ ನಡೆದಿದೆ.

ನಡೆದಿದ್ದೇನು?: ದಿ ವಾರಂಗಲ್ ಜಿಲ್ಲಾ ಲಾರಿ ಅಸೋಸಿಯೇಶನ್ ಅಧ್ಯಕ್ಷ ವೇಮುಲಾ ಭೂಪಾಲ್ ಅವರ ಮನೆಗೆ ಬುಧವಾರ ಮಧ್ಯರಾತ್ರಿ ನಾಲ್ಕು ಮಂದಿ ದುಷ್ಕರ್ಮಿಗಳು ಬಂದಿದ್ದಾರೆ. ಆಟೋದಲ್ಲಿ ಮೂವರು ವೇಮುಲಾ ಮನೆಗೆ ಒಳಗೆ ನುಗ್ಗಿ ಚಾಕುವಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಲು ಯತ್ನಿಸಿದ್ದಾರೆ. ಕೂಡಲೇ ಎಚ್ಚೆತ್ತ ವೇಮುಲಾ ಪತ್ನಿ ಕಲ್ಯಾಣಿ ಅಡುಗೆ ಮನೆಗೆ ಓಡಿ ಹೋಗಿ ಖಾರದ ಪುಡಿ ತಂದು ದುಷ್ಕರ್ಮಿಗಳ ಕಣ್ಣಿಗೆ ಎರಚಿದ್ದಾಳೆ. ಇದನ್ನೂ ಓದಿ: ಕೋವಿನ್ ಖಾಸಗಿ ಮಾಹಿತಿ ಸೋರಿಕೆ ಆಗಿಲ್ಲ: ಕೇಂದ್ರ

ನಮ್ಮನ್ನು ಕಾಪಾಡಿ ಎಂದು ಜೋರಾಗಿ ಕೂಗಿದ್ದಾಳೆ. ಈಕೆಯ ಚೀರಾಟ ಕೇಳಿ ನೆರೆ ಹೊರೆಯವರು ಕೂಡಲೇ ಬಂದಿದ್ದಾರೆ. ಆರೋಪಿಗಳಲ್ಲಿ ಒಬ್ಬನಾದ ರಂಜಿತ್ ಕಣ್ಣಿಗೆ ಹೆಚ್ಚು ಖಾರದ ಪುಡಿ ಬಿದ್ದ ಪರಿಣಾಮ ಆತ ಅಲ್ಲಿಂದ ಪರಾರಿಯಾಗಲು ಸಾಧ್ಯವಾಗದೆ ಸಿಕ್ಕಿಬಿದ್ದಿದಾನೆ. ಉಳಿದ ಮೂವರು ಆರೋಪಿಗಳು ಆಟೋದಲ್ಲಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಆರೋಪಿ ರಂಜಿತ್‍ನನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಜಾತಿ, ಧರ್ಮ, ದೇಶ ಗಡಿ ದಾಟಿದ ಪ್ರೇಮ ಕಥೆ

Leave a Reply

Your email address will not be published.

Back to top button