ಕಲಬುರಗಿ: ಹೆಂಡತಿಯನ್ನು (Wife) ಮನೆಗೆ ಬಾ ಎಂದು ಕರೆದ ವ್ಯಕ್ತಿಗೆ ಆಕೆಯ ಸಹೋದರ ಚಾಕು ಇರಿದ ಘಟನೆ ನಗರದ (Kalaburagi) ಗಾಜಿಪುರದಲ್ಲಿ ನಡೆದಿದೆ.
ಹಲ್ಲೆಗೊಳಗಾದ ವ್ಯಕ್ತಿಯನ್ನು ಆನಂದ್ ಎಂದು ಗುರುತಿಸಲಾಗಿದೆ. ಆತ ಕಳೆದ ಎರಡು ವರ್ಷದ ಹಿಂದೆ ಸ್ನೇಹಾಳನ್ನ ಪ್ರೀತಿಸಿ ಮದುವೆಯಾಗಿದ್ದ. ಮದುವೆಯಾದ ಬಳಿಕ ಗಂಡ ಹೆಂಡತಿಯ ಮಧ್ಯೆ ಜಗಳವಾಗಿ ಪತ್ನಿ ತವರು ಮನೆ ಸೇರಿದ್ದಳು. ಆನಂದ್ ತನ್ನ ಅಣ್ಣನ ಮದುವೆ ಹಿನ್ನಲೆಯಲ್ಲಿ ಮನೆಗೆ ಬರುವಂತೆ ಸ್ನೇಹಾಳನ್ನು ಕರೆದಿದ್ದ. ಇದನ್ನೂ ಓದಿ: ಕುಡಿಯಲು ಹಣ ಕೊಡದ ತಾಯಿಯನ್ನು ರಾಡ್‍ನಲ್ಲಿ ಹೊಡೆದು ಕೊಂದ ಮಗ
ಇದೇ ವಿಚಾರಕ್ಕೆ ಸ್ನೇಹಾಳ ಸಹೋದರ ಟೋನಿ ಮತ್ತು ಆತನ ಸ್ನೇಹಿತರು ಸೇರಿ ಆನಂದ್‍ಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ.
ಗಾಯಾಳುವಿಗೆ ಕಲಬುರಗಿಯ ಜಿಮ್ಸ್ ಆಸ್ಪತ್ರೆಯ ಟ್ರಾಮ್ ಕೇರ್‍ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅಮೆರಿಕದಲ್ಲಿ ಕಾಲಿಗೆ, ಸೊಂಟಕ್ಕೆ ಚೈನ್ – ಭಾರತದಲ್ಲಿ ರಾಣಾನಿಗೆ ಕಟ್ಟಿದ್ದ ಚೈನ್ ತೆಗೆದಿದ್ದು ಯಾಕೆ?