ಚಿಕ್ಕಮಗಳೂರು: ಮಲೆನಾಡಿನಲ್ಲಿ ದಿನದಿಂದ ದಿನಕ್ಕೆ ಕಾಡುಕೋಣಗಳು ಹಾಗೂ ಕಾಡಾನೆ ಹಾವಳಿ ಹೆಚ್ಚುತ್ತಿದ್ದು, ಜನಸಾಮಾನ್ಯರು ಕೂಲಿ ಕಾರ್ಮಿಕರು ಆತಂಕದಲ್ಲಿ ಬದುಕುವಂತಾಗಿದೆ.
ಭಾನುವಾರ ಕೂಡ ಮೂಡಿಗೆರೆ ತಾಲೂಕಿನ ದುಂಡುಗ ಎಂಬ ಗ್ರಾಮದಲ್ಲಿ ಪ್ರಮೋದ್ ಎಂಬವರ ಕಾಫಿತೋಟದಲ್ಲಿ ಬೃಹತ್ ಕಾಡುಕೋಣ ಕಾಣಿಸಿಕೊಂಡಿದೆ. ತೋಟದ ಕೂಲಿ ಕಾರ್ಮಿಕರು ಹಾಗೂ ಮಾಲೀಕರು ಗಾಬರಿಗೊಂಡಿದ್ದಾರೆ. ಕಾಡು ಕೋಣಗಳು ಹೆಚ್ಚಾಗಿ ಕಾಫಿತೋಟದೊಳಗೆ ಕಾಣಿಸಿಕೊಳ್ಳುತ್ತಿರುವುದರಿಂದ ತೋಟದ ಕಾರ್ಮಿಕರು ಮತ್ತುಷ್ಟು ಆತಂಕದಲ್ಲಿ ಬದುಕುತ್ತಿದ್ದಾರೆ.
ಕಳೆದೊಂದು ವರ್ಷದಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗ್ರಾಮೀಣ ಭಾಗದಲ್ಲಿ ಆಗಾಗಾ ಕಾಡುಕೋಣ ಹಾಗೂ ಕಾಡಾನೆಗಳ ಹಾವಳಿ ವಿಪರೀತವಾಗಿದ್ದು, ಮಲೆನಾಡಿಗರು ಜೀವಭಯದಲ್ಲಿ ಬದುಕುತ್ತಿದ್ದಾರೆ.
ಈ ಬಗ್ಗೆ ಅರಣ್ಯ ಇಲಾಖೆ ಗಮನಕ್ಕೆ ತಂದರೂ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಸ್ಥಳೀಯರು ಸರ್ಕಾರಿ ಅಧಿಕಾರಿಗಳ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv