Connect with us

Districts

ಮಂಜಿನ ನಗರಿಯಲ್ಲಿ ಶಾಲಾ ವಿದ್ಯಾರ್ಥಿ ಮೇಲೆ ಕಾಡಾನೆ ದಾಳಿ

Published

on

ಮಡಿಕೇರಿ: ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿ ಓರ್ವನ ಮೇಲೆ ಕಾಡಾನೆಯೊಂದು ಏಕಾಏಕಿ ದಾಳಿ ನಡೆಸಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಿಟ್ಟಂಗಾಲದಲ್ಲಿ ಘಟನೆ ನಡೆದಿದ್ದು, ವಿದ್ಯಾರ್ಥಿ ಗಾಯಗೊಂಡಿದ್ದಾನೆ.

ಚಂದನ್ (13) ಆನೆ ದಾಳಿಗೆ ಒಳಗಾದ ವಿದ್ಯಾರ್ಥಿ. ಬಿಟ್ಟಂಗಾಲದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಂದನ್ 7 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಬೆಳಗ್ಗೆ ಮನೆಯಿಂದ ಶಾಲೆಗೆ ಹೋಗುವಾಗ ಮಾರ್ಗ ಮಧ್ಯೆ ಕಾಡಾನೆ ದಾಳಿ ನಡೆಸಿದ್ದು, ಬಾಲಕ ಗಾಯಗೊಂಡಿದ್ದಾನೆ.

ಗಾಯಗೊಂಡ ವಿದ್ಯಾರ್ಥಿಯನ್ನು ಕಂಡ ಸ್ಥಳೀಯರು ಆತನನ್ನು ವಿರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಸದ್ಯ ಘಟನಾ ಸ್ಥಳಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.