ಹಾಸನ: ಮೂವರು ಇಟಿಎಫ್ (ETF Staff) ಸಿಬ್ಬಂದಿ ಮೇಲೆ ಕಾಡಾನೆ (Elephant) ದಾಳಿ ಮಾಡಿದ ಘಟನೆ ಬೇಲೂರು (Beluru) ತಾಲೂಕಿನ ಚೀಕನಹಳ್ಳಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೌತಹಳ್ಳಿ ಗ್ರಾಮದ ಗಡಿ ಭಾಗದಲ್ಲಿ ನಡೆದಿದೆ.

ಗ್ರಾಮದ ಸಮೀಪದ ಹಾಸ್ಟೆಲ್ ಹಿಂಭಾಗ ಕಾಡಾನೆ ದಾಳಿ ನಡೆಸಿದೆ. ದಾಳಿಯಲ್ಲಿ ಗಾಯಗೊಂಡ ಗಾರ್ಡ್ ರಮೇಶ್ ಸ್ಥಿತಿ ಗಂಭೀರವಾಗಿದೆ. ಸಿಬ್ಬಂದಿ ವಿಶ್ವ ಹಾಗೂ ಜೀವನ್ ಅವರು ಸಹ ದಾಳಿಯಲ್ಲಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಮೂರು ದಿನಗಳ ಆಪರೇಷನ್ ಯಶಸ್ವಿ – ನರಹಂತಕ ಕಾಡಾನೆ ಸೆರೆ
ಕಾಡಾನೆಗಳ ಹೆಜ್ಜೆ ಗುರುತು ನೋಡಿಕೊಂಡು, ಚಲನವಲನ ಗಮನಿಸುತ್ತ ರಮೇಶ್, ವಿಶ್ವ ಹಾಗೂ ಜೀವನ್ ತೆರಳುತ್ತಿದ್ದರು. ಈ ವೇಳೆ ಕಾಡಾನೆ ಏಕಾಏಕಿ ದಾಳಿ ಮಾಡಿದೆ. ಮೂವರು ಗಾಯಾಳುಗಳನ್ನು ಹಾಸನ (Hassan) ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಅರಣ್ಯ ಇಲಾಖೆ (Forest Department) ಅಧಿಕಾರಿಗಳು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಇದನ್ನೂ ಓದಿ: ಆರು ಕುಮ್ಕಿ ಆನೆಗಳಿಗೆ ಚಳ್ಳೆಹಣ್ಣು ತಿನ್ನಿಸಿದ ಪುಂಡಾನೆ – ಸೆರೆ ಬಳಿಕ ಹಗ್ಗ ಕಿತ್ತೆಸೆದು ಕಾಡಿಗೆ ಜೂಟ್!

