21 ವರ್ಷಗಳಿಂದ ಭೂಗತನಾಗಿದ್ದ ಮೋಸ್ಟ್ ವಾಂಟೆಡ್ ನಕ್ಸಲ್‌ನನ್ನ ಹಿಡಿದುಕೊಟ್ಟ ಕಾಡಾನೆ!

Public TV
1 Min Read
Naxalite arrest

ಚಿಕ್ಕಮಗಳೂರು: 21 ವರ್ಷದಿಂದ ಭೂಗತನಾಗಿ ನಕ್ಸಲ್ (Naxalite) ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದ ಮೋಸ್ಟ್ ವಾಂಟೆಂಡ್ ನಕ್ಸಲ್ ಅಂಗಡಿ ಸುರೇಶ್ ಕಾಡಾನೆಯಿಂದ ಪೊಲೀಸರಿಗೆ (Police) ಸಿಕ್ಕಿಬಿದ್ದಿದ್ದಾನೆ.

ಸುರೇಶ್ ಮೂಲತಃ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ (Mudigere)  ತಾಲೂಕಿನ ಅಂಗಡಿ ಗ್ರಾಮದವನು. 2003ರಲ್ಲಿ ನಕ್ಸಲ್ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದ ಸುರೇಶ್ ಕಳೆದ 21 ವರ್ಷಗಳಿಂದ ನಾಪತ್ತೆಯಾಗಿದ್ದ. ಕರ್ನಾಟಕ, ಕೇರಳ ಮತ್ತು ತಮಿಳುನಾಡು ಪೊಲೀಸರು ಈ ಮೋಸ್ಟ್ ವಾಂಟೆಡ್ ನಕ್ಸಲ್‌ಗಾಗಿ ಹುಡುಕಾಡುತ್ತಿದ್ದರು. ಆದರೆ ಕಳೆದ 21 ವರ್ಷಗಳಿಂದ ಪೊಲೀಸರ ಕೈಗೆ ಸಿಗದೇ ನಾಪತ್ತೆಯಾಗಿದ್ದು, ಇದೀಗ ಕಾಡಾನೆಯಿಂದ ಕೇರಳ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಇದನ್ನೂ ಓದಿ:  24ರ ಯುವಕನ ಜೊತೆ 14 ವರ್ಷದ ಬಾಲಕಿ ಮದುವೆ

ನಕ್ಸಲ್ ಸುರೇಶ್‌ನ ಮೂಲ ಹೆಸರು ಪ್ರದೀಪ್. ನಕ್ಸಲ್ ಚಟುವಟಿಕೆಯಲ್ಲಿ ಪಾಲ್ಗೊಂಡ ಬಳಿಕ ಸುರೇಶ್ ಎಂದು ಬದಲಿಸಿಕೊಂಡಿದ್ದನು. ಸುರೇಶ್ ಅಲಿಯಾಸ್ ಪ್ರದೀಪ್ ಕರ್ನಾಟಕ ಕೇಡರ್ ನಕ್ಸಲ್ ಆಗಿ ಗುರುತಿಸಿಕೊಂಡಿದ್ದನು. ಇವರೆಗೂ ಕರ್ನಾಟಕದಲ್ಲಿ ಒಟ್ಟು 26ಕ್ಕೂ ಹೆಚ್ಚು ಪ್ರಕರಣಗಳು ಸುರೇಶ್ ಮೇಲೆ ದಾಖಲಾಗಿವೆ. ಇದನ್ನೂ ಓದಿ: ರಂಭಾಪುರಿ ಶ್ರೀಗಳ ಕಾರಿಗೆ ಚಪ್ಪಲಿ ಎಸೆತ

ಶುಕ್ರವಾರ ಸುರೇಶ್ ತನ್ನ ನಕ್ಸಲ್ ತಂಡದೊಂದಿಗೆ ಕೇರಳದ ಕಣ್ಣೂರಿನ ಕಂಚಿಕೊಲ್ಲಿ ಅರಣ್ಯ ಪ್ರದೇಶದಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆಗಳು ನಕ್ಸಲರ ಮೇಲೆ ದಾಳಿ ಮಾಡಿವೆ. ಆನೆ ದಾಳಿಯಿಂದ ಸುರೇಶ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಬಳಿಕ ಆತನನ್ನು ಉಳಿದ ನಕ್ಸಲರು ಅಲ್ಲೇ ಬಿಟ್ಟು ಪರಾರಿಯಾಗಿದ್ದರು. ಗಾಯಗೊಂಡ ಸುರೇಶ್ ನಡೆಯಲಾಗದೇ ಕಾಡಿನಲ್ಲೇ ಇದ್ದ. ಇದನ್ನೂ ಓದಿ: ಏಕಾಏಕಿ ಮಲ್ಲಿಕಾರ್ಜುನ ಖರ್ಗೆಗೆ Z+ ಸೆಕ್ಯೂರಿಟಿ

ಆತನನ್ನು ಸ್ಥಳೀಯ ಆದಿವಾಸಿಗಳು ರಕ್ಷಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ ಅಸ್ಪತ್ರೆಗೆ ದಾಖಲಿಸಿದ್ದರು. ಈ ವೇಳೆ ಕೇರಳ ಪೊಲೀಸರು ಆಗಮಿಸಿ ಚಿಕಿತ್ಸೆ ಪಡೆಯುತ್ತಿದ್ದ ಸುರೇಶ್ ಅನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ನಕ್ಸಲ್ ಸುರೇಶ್ ಕಣ್ಣೂರಿನ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇದನ್ನೂ ಓದಿ: ಲೈಂಗಿಕ ತೃಪ್ತಿಗಾಗಿ ಶಿಶ್ನಕ್ಕೆ ಬಟನ್ ಬ್ಯಾಟರಿ ಸಿಕ್ಕಿಸಿಕೊಂಡು 73ರ ವೃದ್ಧ ಎಡವಟ್ಟು!

Share This Article