ಕನ್ನಡದ ಖ್ಯಾತ ನಟ ದರ್ಶನ್ (Darshan) ಇದೀಗ ರೇಣುಕಾಸ್ವಾಮಿ ಕೊಲೆ ಪ್ರಕರಣವಾಗಿ ಅರೆಸ್ಟ್ ಆಗಿದ್ದಾರೆ. ದರ್ಶನ್‌ರನ್ನು ಅವರ ಕುಟುಂಬ ಜೈಲಿಗೆ ಬಂದು ಭೇಟಿ ಮಾಡಿದ ಬೆನ್ನಲ್ಲೇ ಈಗ ನಟ ಧನ್ವೀರ್ ಗೌಡ ಭೇಟಿ ಮಾಡಲು ಬಂದಿದ್ದಾರೆ. ಇದನ್ನೂ ಓದಿ:ಮಾತೃ ಭಾಷೆಯಲ್ಲಿ ಕೊಡಗಿನ ಜನರಿಗೆ ರಶ್ಮಿಕಾ ಮಂದಣ್ಣ ಮನವಿ
ನಟನನ್ನು ನೋಡೋದಕ್ಕಾಗಿ ಜೈಲಿನ ಬಳಿ ಧನ್ವೀರ್ (Dhanveer Gowda) ಕಾಯ್ತಿದ್ದಾರೆ. ದರ್ಶನ್ ಓಕೆ ಅಂದರೆ ಮಾತ್ರ ಮಾತನಾಡಿಸಲು ಧನ್ವೀರ್‌ಗೆ ಅವಕಾಶ ಸಿಗಲಿದೆ. ನಟನ ಆಗಮನ ಬಗ್ಗೆ ದರ್ಶನ್‌ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆದರೆ ನಟನ ಭೇಟಿಗೆ ಅಧಿಕಾರಿಗಳು ಅನುಮತಿ ನೀಡಿಲ್ಲ.
ಅಂದಹಾಗೆ, ಜು.1ರಂದು ಬೆಳಗ್ಗೆ ದರ್ಶನ್ ತಾಯಿ ಮೀನಾ, ತಮ್ಮ ದಿನಕರ್, ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್ ಭೇಟಿ ನೀಡಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಜೈಲಿಗೆ ಮಾಧ್ಯಮಗಳ ಕಣ್ಣು ತಪ್ಪಿಸಲು ಖಾಸಗಿ ವಾಹನದಲ್ಲಿ ಬಂದ ದರ್ಶನ್ ಕುಟುಂಬ ಜೈಲಿನ ಒಳಗೆ ಹೋಗಿ ಭೇಟಿ ಮಾಡಿದೆ. ಮಗನ ಸ್ಥಿತಿ ನೋಡ್ತಿದ್ದಂತೆ ತಾಯಿ ಮೀನಾ ತೂಗುದೀಪ್ ಭಾವುಕರಾಗಿದ್ದಾರೆ. ದರ್ಶನ್‌ಗೆ ಸಹೋದರ ದಿನಕರ್ ಧೈರ್ಯ ತುಂಬಿದ್ದಾರೆ. ಮುಂದಿನ ಕಾನೂನು ಹೋರಾಟಕ್ಕೆ ಕುಟುಂಬಸ್ಥರ ಜೊತೆ ಚರ್ಚಿಸಿದ್ದಾರೆ.
ಇನ್ನೂ ಜೈಲು ನಿಯಮಗಳ ಪ್ರಕಾರ, ಒಂದು ವಾರದಲ್ಲಿ ಮೂವರಿಗೆ ಮಾತ್ರ ಬೇಟಿ ಮಾಡಲು ಅವಕಾಶ ಇರುತ್ತದೆ. ಕಳೆದ ವಾರ ಪತ್ನಿ ವಿಜಯಲಕ್ಷ್ಮಿ ಹಾಗೂ ಮಗ ಭೇಟಿ ಮಾಡಿದ್ದರು. ನಂತರ ನಟ ವಿನೋದ್ ಪ್ರಭಾಕರ್, ರಕ್ಷಿತಾ ಪ್ರೇಮ್ ದಂಪತಿ ಭೇಟಿ ಮಾಡಿ ಮಾತನಾಡಿದ್ದರು.