ಎರಡು ಪಾರ್ಟ್‌ಗಳಲ್ಲಿ ಬರಲಿದೆ ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’

Public TV
1 Min Read
ram charan

ಚಿತ್ರರಂಗದಲ್ಲಿ ಸೀಕ್ವೆಲ್‌ಗಳ ಹಾವಳಿ ಜಾಸ್ತಿಯಾಗಿದೆ. ಬಾಹುಬಲಿ, ಕೆಜಿಎಫ್, ಪುಷ್ಪ, ಸಲಾರ್ (Salaar) ಎರಡು ಪಾರ್ಟ್‌ಗಳಲ್ಲಿ ಬರುತ್ತಿದೆ. ಅದರಂತೆಯೇ ರಾಮ್ ಚರಣ್ (Ram Charan) ನಟನೆಯ ‘ಗೇಮ್ ಜೇಂಜರ್’ (Game Changer) ಸಿನಿಮಾ ಎರಡು ಭಾಗಗಳಾಗಿ ತೆರೆಯ ಮೇಲೆ ಅಬ್ಬರಿಸಲಿದೆ. ಸದ್ಯ ಈ ಸುದ್ದಿ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಇದನ್ನೂ ಓದಿ:ಡಿ.17ಕ್ಕೆ ಶ್ರೀಮುರಳಿ ನಟನೆಯ ‘ಬಘೀರ’ ಸಿನಿಮಾದ ಟೀಸರ್

ram charan 1‘ಆರ್‌ಆರ್‌ಆರ್’ (RRR) ಸಿನಿಮಾದ ಸಕ್ಸಸ್ ನಂತರ ಎಸ್. ಶಂಕರ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಗೇಮ್ ಚೇಂಜರ್’ ಸಿನಿಮಾದಲ್ಲಿ ರಾಮ್ ಚರಣ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಇತ್ತೀಚೆಗೆ ಮೈಸೂರಿನಲ್ಲಿ ನಡೆದಿತ್ತು. ಆದರೆ ಸಿನಿಮಾಗೂ ಮೈಸೂರಿಗೂ ಏನು ಲಿಂಕ್ ಎಂಬುದರ ಬಗ್ಗೆ ಫ್ಯಾನ್ಸ್‌ಗೆ ಕುತೂಹಲವಿದೆ.

ram charan 1 1‘ಬಾಹುಬಲಿ 2’ ರಿಲೀಸ್ ಆದ ಬಳಿಕ ಎರಡು ಭಾಗಗಳಲ್ಲಿ ಕಥೆ ಹೇಳುವ ಟ್ರೆಂಡ್ ಜೋರಾಗಿದೆ. ಇದೀಗ ಬಹುತೇಕ ಸ್ಟಾರ್ ನಟರ ಸಿನಿಮಾಗಳು ಎರಡು ಭಾಗಗಳಾಗಿ ಬರುತ್ತಿವೆ. ಹಾಗಾಗಿ ‘ಗೇಮ್ ಚೇಂಜರ್’ ನಿರ್ಮಾಪಕ ದಿಲ್ ರಾಜು ಎರಡು ಪಾರ್ಟ್‌ಗಳಲ್ಲಿ ಸಿನಿಮಾ ತರೋದಕ್ಕೆ ಪ್ಲ್ಯಾನ್ ಮಾಡಿದ್ದಾರೆ.

ಈ ಸಿನಿಮಾ ಚುನಾವಣೆಗೆ ಸಂಬಂಧಿಸಿದ್ದು, ರಾಮ್ ಚರಣ್ ಐಎಎಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ. ನಾಯಕಿಯಾಗಿ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ನಟಿಸಿದ್ದಾರೆ.

Share This Article