Districts
ಅನಿತಾ ಕುಮಾರಸ್ವಾಮಿ ಚನ್ನಪಟ್ಟಣದಿಂದ ಸ್ಪರ್ಧಿಸುತ್ತಾರಾ: ಎಚ್‍ಡಿಕೆ ಹೇಳಿದ್ದು ಹೀಗೆ
ರಾಮನಗರ: ಅನಿತಾಕುಮಾರಸ್ವಾಮಿ ಚನ್ನಪಟ್ಟಣದಿಂದ ಸ್ಪರ್ಧೆ ಮಾಡುವ ವಿಚಾರ ಸುಳ್ಳು ಎಂದು ಮಾಜಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಚನ್ನಪಟ್ಟಣದಿಂದ ಅನಿತಾಕುಮಾರಸ್ವಾಮಿ ಸ್ಪರ್ಧೆ ವಿಚಾರವಾಗಿ ಕನಕಪುರ ತಾಲೂಕಿನ ಗೆಂಡೇಗೌಡನದೊಡ್ಡಿಯಲ್ಲಿ ಪ್ರತಿಕ್ರಿಯಿಸಿದ ಎಚ್‍ಡಿಕೆ, ಚನ್ನಪಟ್ಟಣ ಕಾರ್ಯಕರ್ತರು ಹಾಗೂ ಮುಖಂಡರು ಅನಿತಾಕುಮಾರಸ್ವಾಮಿಯವರನ್ನ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿ ಎಂದು ಒತ್ತಾಯ ಮಾಡುತ್ತಿದ್ದಾರೆ. ಆದರೆ ಯಾವುದೇ ತೀರ್ಮಾನವಾಗಿಲ್ಲ. ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾದಾಗ ಚನ್ನಪಟ್ಟಣದ ಅಭ್ಯರ್ಥಿ ಯಾರೆಂದು ಉತ್ತರ ಸಿಗುತ್ತದೆ ಎಂದು ಹೇಳಿದರು.
ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅನಿತಾಕುಮಾರಸ್ವಾಮಿ ಪರ ಬ್ಯಾಟಿಂಗ್ ಮಾಡಿದ ವಿಚಾರದ ಬಗ್ಗೆ ಮಾತನಾಡಿ, ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ದೋಸ್ತಿ ರಾಜಕಾರಣ ಯಾವುದೇ ಕಾರಣಕ್ಕೂ ಇಲ್ಲ. 2018 ರ ವಿಧಾನಸಭೆ ಚುನಾವಣೆಗೆ ರಾಜ್ಯದ 224 ಕ್ಷೇತ್ರದಲ್ಲೂ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಸ್ಪರ್ಧೆ ಮಾಡುತ್ತಾರೆ ಎಂದು ತಿಳಿಸಿದರು.
