ಮಂಗಳೂರು: ಹಿಂದೂ ವಿರೋಧಿ, ಭ್ರಷ್ಟ ಸರ್ಕಾರದ ವಿರುದ್ಧ ರಾಷ್ಟ್ರಪತಿಗಳಿಗೆ ದೂರು ಕೊಡ್ತೇವೆ. ಭ್ರಷ್ಟ ಸರ್ಕಾರವನ್ನ ವಜಾ ಮಾಡಲು ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದರು.
ಬಂಟ್ವಾಳದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಒಂದೂವರೆ ವರ್ಷದಲ್ಲೇ ಜನರ ಹಿಡಿಶಾಪಕ್ಕೆ ಒಳಗಾಗಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ. ವಾಲ್ಮೀಕಿ ಹಗರಣದ ಬಗ್ಗೆ ಸಿಎಂ ಸದನದಲ್ಲೇ ಒಪ್ಪಿದ್ದಾರೆ. ಮೈಸೂರಿನ ಮುಡಾ ಹಗರಣದಲ್ಲೂ ಸಿದ್ದರಾಮಯ್ಯ ಅದೇ ರೀತಿ ಹೇಳಿದ್ರು. ಆದರೆ ಯಾವುದೇ ಪರಿಹಾರ ನಿರೀಕ್ಷೆ ಮಾಡದೇ ನಿವೇಶನ ಹಿಂದೆ ಕೊಟ್ಟಿದ್ದಾರೆ. ಮೊದಲು ಪರಿಹಾರ ಕೊಡಿ ಎಂದಿದ್ದ ಸಿದ್ದರಾಮಯ್ಯ ಈಗ ಪರಿಹಾರ ಕೇಳದೇ ಹಿಂದಿರುಗಿಸಿದ್ದಾರೆ. ಈ ಮೂಲಕ ತಪ್ಪು ಮಾಡಿರೋದನ್ನು ಒಪ್ಪಿಕೊಂಡಿದ್ದಾರೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ನಾನು ರಾಜಕಾರಣ ಮಾತಾಡಲ್ಲ.. ಮೋದಿಗಾಗಿ ಮಾತ್ರ ಮಾತನಾಡ್ತೀನಿ: ಚಕ್ರವರ್ತಿ ಸೂಲಿಬೆಲೆ
ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಗೆ ಹಣ ನೀಡ್ತಾ ಇಲ್ಲ. ಮೊನ್ನೆ ಶಾಸಕ ರಾಜು ಕಾಗೆ ಸ್ವತಃ ಅನುದಾನ ಸಿಗ್ತಾ ಇಲ್ಲ ಎಂದು ಹೇಳಿದ್ದಾರೆ. ಕ್ಷೇತ್ರದಲ್ಲಿ ತಲೆ ಎತ್ತಿ ನಡೆಯಲಾಗದೇ ಆತ್ಮಹತ್ಯೆ ಪರಿಸ್ಥಿತಿ ಇದೆ ಅಂದಿದ್ದಾರೆ. ಕ್ಯಾಬಿನೆಟ್‌ನಲ್ಲಿ ಹುಬ್ಬಳ್ಳಿ ಗಲಭೆಯ ಆರೋಪಿಗಳ ಕೇಸು ವಾಪಾಸ್ ಪಡೆಯಲಾಗಿದೆ. ದೇಶದ್ರೋಹಿಗಳ ಕೇಸುಗಳನ್ನು ವಾಪಸ್ ಪಡೆಯಲಾಗಿದೆ. ಎನ್‌ಐಎ ಸೇರಿ ಕರ್ನಾಟಕ ಪೊಲೀಸರು ತನಿಖೆ ನಡೆಸ್ತಾ ಇದ್ದಾರೆ. ಹೀಗಿರುವಾಗ ಕೇಸು ವಾಪಸ್ ಪಡೆದಿರೋದು ಅಕ್ಷಮ್ಯ ಅಪರಾಧ ಎಂದು ಹೇಳಿದರು.
ಜನ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಬುದ್ದಿ ಕಲಿಸಬೇಕಾದ ಅಗತ್ಯ ಇದೆ. ಪರಿಷತ್ ಉಪಚುನಾವಣೆಯ ಕ್ಷೇತ್ರವನ್ನ ಹಾಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಪ್ರತಿನಿಧಿಸ್ತಿದ್ದರು. ಹಿಂದುತ್ವದ ಕಟ್ಟಾಳು ಕಿಶೋರ್ ಕುಮಾರ್ ಪುತ್ತೂರು ಅವರನ್ನು ಕಣಕ್ಕಿಳಿಸಿದ್ದೇವೆ. ಹಾಗಾಗಿ ಇಲ್ಲಿ ನಾವು ದೊಡ್ಡ ಅಂತರದಲ್ಲಿ ಮತ್ತೊಮ್ಮೆ ಗೆಲ್ಲುತ್ತೇವೆ ಎಂದು ಆಶಯ ವ್ಯಕ್ತಪಡಿಸಿದರು. ಇದನ್ನೂ ಓದಿ: ಮುಡಾ ಅಧ್ಯಕ್ಷ ಮರೀಗೌಡ ರಾಜೀನಾಮೆ?
ವಿರೋಧ ಪಕ್ಷವಾಗಿ ನಾವು ಜವಾಬ್ದಾರಿಯಿಂದ ಕೆಲಸ ಮಾಡ್ತಾ ಇದ್ದೇವೆ. ಆಡಳಿತ ಪಕ್ಷ ಕೊಟ್ಟ ಭರವಸೆ ತಪ್ಪಿದಾಗ ನಾವು ಹೋರಾಟ ಮಾಡ್ತಾ ಇದ್ದೀವಿ. ನಾಗೇಂದ್ರರಂಥ ಸಚಿವರು ರಾಜೀನಾಮೆ ಕೊಟ್ಟಿದ್ದಾರೆ ಅದು ಬಿಜೆಪಿ ಕಾರಣದಿಂದ. ಈ ತಿಂಗಳು 25 ರಂದು ಹುಬ್ಬಳ್ಳಿಯಲ್ಲಿ ಬೃಹತ್ ಹೋರಾಟ ಮಾಡ್ತೇವೆ. ಹುಬ್ಬಳ್ಳಿ ಪ್ರಕರಣ ವಾಪಸ್ ಪಡೆದ ಬಗ್ಗೆ ಹೋರಾಟ ಮಾಡ್ತೇವೆ. ಈ ಅಯೋಗ್ಯ ಸರ್ಕಾರದ ವಿರುದ್ಧ ನಮ್ಮ ಹೋರಾಟ ಮುಂದುವರೆಯಲಿದೆ. ಗಣಪತಿ ವಿಸರ್ಜನೆ ವೇಳೆ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆಯಾಗುತ್ತೆ. ಇವರ ಅಲ್ಪಸಂಖ್ಯಾತ ಓಲೈಕೆಯಿಂದ ಈ ಘಟನೆ ನಡೀತಾ ಇದೆ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.
ಉಪಚುನಾವಣೆ ಅಭ್ಯರ್ಥಿ ಘೋಷಣೆ ವಿಚಾರ, ರಾಷ್ಟ್ರೀಯ ನಾಯಕರ ಮುಂದೆ ವಿಚಾರ ಇದೆ. ಹಲವು ಬಾರಿ ರಾಷ್ಟ್ರೀಯ ಅಧ್ಯಕ್ಷರ ಜೊತೆ ಚರ್ಚೆ ಆಗಿದೆ. ಆದರೆ ಈವರೆಗೆ ಯಾರು ಅಭ್ಯರ್ಥಿ ಅನ್ನೋದು ಚರ್ಚೆಯಾಗಿಲ್ಲ. ಡಿಕೆಶಿ ಬೆಂಗಳೂರು ಗ್ರಾಮಾಂತರದಲ್ಲೂ ನಾನೇ ಅಭ್ಯರ್ಥಿ ಅಂದಿದ್ದರು. ಆದರೆ ಅಲ್ಲಿನ ಜನ ಅವರಿಗೆ ಪಾಠ ಕಲಿಸಿದ್ದಾರೆ. ಹೀಗಾಗಿ ಚನ್ನಪಟ್ಟಣದಲ್ಲೂ ಜನರು ಅವರಿಗೆ ಪಾಠ ಕಲಿಸ್ತಾರೆ. ನಾವು ತಕ್ಷಣ ಸೂಕ್ತ ಅಭ್ಯರ್ಥಿಗಳ ಆಯ್ಕೆ ಮಾಡ್ತೇವೆ. ಪ್ರೇರಣಾ ಟ್ರಸ್ಟ್ ಕೇಸ್ ವಿಚಾರದಲ್ಲಿ ಅರೋಗ್ಯರು ಕೆಲವರು ಹೇಳ್ತಾರೆ. ಕಾಂಗ್ರೆಸ್ ಮುಖಂಡರಿಗೆ ಮಾಹಿತಿ ಕೊರತೆ ಇದೆ. ಯುಪಿಐ ಅವಧಿಯಲ್ಲೇ ಕೋರ್ಟ್ ಟ್ರಯಲ್ ಆಗಿದೆ. ಅದರ ಕಾಪಿ ಬೇಕಾದರೆ ಕಾಂಗ್ರೆಸ್ ಮುಖಂಡರಿಗೆ ಕಳಿಸಿಕೊಡ್ತೇನೆ ಎಂದು ಟಾಂಗ್ ಕೊಟ್ಟಿದ್ದಾರೆ.