ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ರಾಜ್ಯ ರಾಜಕೀಯಕ್ಕೆ ಬಂದರೆ ಸ್ವಾಗತ ಮಾಡುತ್ತೇವೆ. ನಾವು ಹೈಕಮಾಂಡ್ ಹೇಳಿದ ಹಾಗೆ ಕೇಳುತ್ತೇವೆ ಎಂದು ಕಾಂಗ್ರೆಸ್ (Congress) ಶಾಸಕ ಅಜಯ್ ಸಿಂಗ್ (Ajay Singh) ತಿಳಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ರಾಜ್ಯ ರಾಜಕಾರಣಕ್ಕೆ ಬರುವ ಬಗ್ಗೆ ಚರ್ಚೆ ಆಗುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು,ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಕೇಳಿದ್ದೇನೆ. ಖರ್ಗೆ ಅವರಿಗೆ ಸಿಎಂ ಆಗಲು ಅರ್ಹತೆ ಇದೆ. ಈಗ ಖರ್ಗೆ ಅವರು ಸಿಎಂ ಆಯ್ಕೆ ಮಾಡುವ ಸ್ಥಾನದಲ್ಲಿ ಇದ್ದಾರೆ. ಖರ್ಗೆ ಅವರು ಸಿಎಂ ಆಗುವುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ನಾವು ಪಕ್ಷದ ಶಿಸ್ತಿನ ಸಿಪಾಯಿಗಳಾಗಿದ್ದು ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ ಎಂದರು. ಇದನ್ನೂ ಓದಿ: ಧರ್ಮಸ್ಥಳ ಶವಗಳ ಹೂತಿಟ್ಟ ಕೇಸ್ | ಪ್ರಕರಣದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಯ ಹೆಸರು ತಳುಕು
ಹೈಕಮಾಂಡ್ ಯಾರಿಗೆ ಸಿಎಂ ಅಂತ ಹೇಳುತ್ತೋ ಅವರಿಗೆ ನಾವು ಬೆಂಬಲ ಕೊಡುತ್ತೇವೆ. ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಕ್ಕೆ ಬಂದರೆ ಸ್ವಾಗತ ಮಾಡುತ್ತೇವೆ. ಅವರು ರಾಜ್ಯಕ್ಕೆ ಬರಬೇಕಾ ಎನ್ನುವುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ತಿಳಿಸಿದರು.