ಮೈಸೂರು: ಉತ್ತರ ಪ್ರದೇಶ ಹಾಗೂ ಮಧ್ಯ ಪ್ರದೇಶದಲ್ಲಿ ದಾಂಧಲೆಗೆ ಬುಲ್ಡೋಜರ್ ಕ್ರಮ ಈದೆ. ಕರ್ನಾಟಕದಲ್ಲೂ ಆ ಪರಿ ಸ್ಥಿತಿ ಬಂದರೆ ನೋಡೋಣ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G Parameshwar) ಎಚ್ಚರಿಕೆ ಕೊಟ್ಟಿದ್ದಾರೆ.
Advertisement
ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ (Udayagiri Police Station) ವ್ಯಾಪ್ತಿಯಲ್ಲಿ ಗಲಭೆ ನಡೆದು 4 ದಿನಗಳ ಬಳಿಕ ಉದಯಗಿರಿ ಪೊಲೀಸ್ ಠಾಣೆಗೆ ಗೃಹ ಸಚಿವ ಜಿ.ಪರಮೇಶ್ವರ್ ಭೇಟಿ ನೀಡಿದ್ದಾರೆ. ಬಳಿಕ ಪೊಲೀಸರೊಂದಿಗೆ ಸಭೆ ನಡೆಸಿದ ಸಚಿವರು, ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ಡಿಸಿಪಿಗಳಾದ ಮುತ್ತುರಾಜ್ ಹಾಗೂ ಜಾಹ್ನವಿ ಸೇರಿದಂತೆ ಇನ್ಸ್‌ಪೆಕ್ಟರ್‌ಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ. ಇದನ್ನೂ ಓದಿ: Prayagraj Kumbh Mela | 1500 ಕೋಟಿ ರೂ. ಖರ್ಚು ಮಾಡಿದ್ದಕ್ಕೆ UP ಆರ್ಥಿಕತೆಗೆ 3 ಲಕ್ಷ ಕೋಟಿ ಲಾಭ: ಯೋಗಿ
Advertisement
Advertisement
ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಈ ಘಟನೆ ಯಾಕಾಯ್ತು? ಯಾರಿಂದ ಆಯ್ತು ಎಂಬ ಮಾಹಿತಿ ಪಡೆದಿದ್ದೇನೆ. ಘಟನೆ ಸಂಬಂಧ ತಪ್ಪಿತಸ್ಥರ ಮೇಲೆ ಕಠಿಣ ಕ್ರಮಕ್ಕೆ ಸೂಚಿಸಿದ್ದೇವೆ. ಸಿಸಿಟಿವಿ ದೃಶ್ಯ ಆಧಾರಿಸಿ ಆರೋಪಿಗಳನ್ನ ಬಂಧನ ಮಾಡಲಾಗಿದೆ. ಕಾನೂನು ಕೈಗೆತ್ತಿಕೊಳ್ಳಲು ಯಾರಿಗೂ ಬಿಡಲ್ಲ. ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮನಸಿನೊಡತಿ ಜೊತೆಗಿನ ಪ್ರತಿ ಕ್ಷಣವೂ ಪ್ರೇಮಿಗಳ ದಿನವೇ!
Advertisement
ವ್ಯಕ್ತಿ ತಪ್ಪು ಮಾಡಿದ್ದರೆ ಅವರ ಮೇಲೆ ಕ್ರಮ ಕೈಗೊಳ್ಳಲು ಪೊಲೀಸರು ಇದ್ದಾರೆ. ಬೇರೆ ಯಾರಿಗೂ ಅದಕ್ಕೆ ಅವಕಾಶ ಕೊಡಲ್ಲ. ಪೊಲೀಸ್ ಇಲಾಖೆಗೆ ಪಕ್ಷ ಮುಖ್ಯ ಅಲ್ಲ. ಕಾನೂನು ಕಾಪಾಡುವುದು ಅಷ್ಟೆ ಮುಖ್ಯ. ಇಂತಹ ಘಟನೆ ವೇಳೆ ಕೇಳಿ ಬರುವ ಹೇಳಿಕೆ ನಿಲ್ಲಿಸಲು ಸಾಧ್ಯ ವಿಲ್ಲ. ಏಕೆಂದರೆ ಎಲ್ಲರಿಗೂ ವಾಕ್ ಸ್ವಾತಂತ್ರ‍್ಯವಿದೆ. ರಾಜಕೀಯ ಹೇಳಿಕೆಗಳಿಂದ ಪೊಲೀಸರ ನೈತಿಕತೆ ಕುಗ್ಗಿಸಲು ಸಾಧ್ಯವಿಲ್ಲ. ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಲು ಯಾರ ಕೈಯಲ್ಲೂ ಆಗಲ್ಲ. ಇಂತಹ ದಾಂಧಲೆಗೆ ಯುಪಿ, ಮಧ್ಯ ಪ್ರದೇಶದಲ್ಲಿ ಬುಲ್ಡೋಜರ್ ಹತ್ತಿಸುವ ಕ್ರಮ ಇದೆ. ಕರ್ನಾಟಕದಲ್ಲೂ ಆ ಪರಿ ಸ್ಥಿತಿ ಬಂದರೆ ನೋಡೋಣ… ಈಗ ಅಂತಹ ಪರಿಸ್ಥಿತಿ ಕರ್ನಾಟಕದಲ್ಲಿ ಇಲ್ಲ ಎಂದು ತಿಳಿಸಿದ್ದಾರೆ.
ಎನ್.ಆರ್ ಕ್ಷೇತ್ರ ವ್ಯಾಪ್ತಿಯಲ್ಲಿ ಇನ್ನೊಂದು ಠಾಣೆಗೆ ಪ್ರಸ್ತಾವನೆ ಇದೆ, ಇದರ ಬಗ್ಗೆ ಕ್ರಮ ಕೈಗೊಳ್ತಿವಿ. ಈ ವಿಚಾರದಲ್ಲಿ ಯಾರು ರಾಜಕೀಯ ಮಾಡಬಾರದು. ಘಟನೆ ದಿನ ಪೊಲೀಸರು ಪರಿಸ್ಥಿತಿಯನ್ನು ಸಮರ್ಥವಾಗಿಯೇ ನಿಭಾಯಿಸಿದ್ದಾರೆ. ಪೊಲೀಸರ ಬಗ್ಗೆ ವಿವಿಧ ರೀತಿಯ ಹೇಳಿಕೆ ಕೊಡುವವರಿಗೆ ಸಮಯ ಬಂದಾಗ ತಿಳುವಳಿಕೆ ಹೇಳ್ತಿನಿ ಎಂದು ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: 389 ರೂ. ಕೊಟ್ರೆ ಪ್ರೇಮಿಗಳ ದಿನಕ್ಕೆ ಬಾಡಿಗೆ ಬಾಯ್ ಫ್ರೆಂಡ್ – ಏನಿದು ಆಫರ್?