ರಾಹುಲ್ ಗಾಂಧಿಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಧೀಶರ ನಾಲಿಗೆ ಕತ್ತರಿಸುತ್ತೇವೆ – ಕೈ ನಾಯಕ

Public TV
1 Min Read
Rahul Gandhi 3

ಚೆನ್ನೈ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಹುಲ್ ಗಾಂಧಿಗೆ (Rahul Gandhi) 2 ವರ್ಷದ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಧೀಶರ ನಾಲಿಗೆ ಕತ್ತರಿಸುವುದಾಗಿ ತಮಿಳುನಾಡಿನ ಕಾಂಗ್ರೆಸ್ (Tamilnadu Congress) ಮುಖಂಡರೊಬ್ಬರು ನಾಲಿಗೆ ಹರಿಬಿಟ್ಟಿದ್ದಾರೆ.

2019ರ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಕರ್ನಾಟಕದ ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ʻಮೋದಿʼ ಉಪನಾಮ ಬಳಸಿ ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೂರತ್ ಜಿಲ್ಲಾ ನ್ಯಾಯಾಲಯ (Surat Court) ರಾಹುಲ್ ಅವರನ್ನು ದೋಷಿ ಪರಿಗಣಿಸಿ 2 ವರ್ಷ ಜೈಲುಶಿಕ್ಷೆ ವಿಧಿಸಿತು. ಈ ಬೆನ್ನಲ್ಲೇ ರಾಹುಲ್ ಗಾಂಧಿ ಅವರನ್ನ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಯಿತು.

court order law

ರಾಹುಲ್ ಗಾಂಧಿ ಅವರ ಅನರ್ಹತೆ ಪ್ರಶ್ನಿಸಿ ತಮಿಳುನಾಡಿನ ದಿಂಡಿಗಲ್‌ನಲ್ಲಿ ಕಾಂಗ್ರೆಸ್‌ನ ಎಸ್ಸಿ-ಎಸ್ಟಿ ವಿಭಾಗದಿಂದ ಶುಕ್ರವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾ ಮುಖ್ಯಸ್ಥ ಮಣಿಕಂದನ್ (Manikandan) ಮಾತನಾಡುವಾಗ ನಾಲಿಗೆ ಹರಿಬಿಟ್ಟಿದ್ದಾರೆ. ಇದನ್ನೂ ಓದಿ: ಸರ್ಕಾರವನ್ನು ಟೀಕಿಸಿದ ಮಾತ್ರಕ್ಕೆ ಮಾಧ್ಯಮ ನಿಯಂತ್ರಿಸಲು ಸಾಧ್ಯವಿಲ್ಲ: ಕೇಂದ್ರಕ್ಕೆ ಸುಪ್ರೀಂ ತರಾಟೆ

ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗ ರಾಹುಲ್ ಗಾಂಧಿ ಅವರಿಗೆ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ ನ್ಯಾಯಾಧೀಶರಾದ ಹೆಚ್.ವರ್ಮಾ ಅವರ ನಾಲಿಗೆ ಕತ್ತರಿಸುತ್ತೇವೆ ಎಂದು ಹೇಳಿದ್ದಾರೆ. 

rahul gandhi

ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಮಣಿಕಂದನ್ ವಿರುದ್ಧ ಮೂರು ಸೆಕ್ಷನ್‌ಗಳ ಅಡಿಯಲ್ಲಿ ಕೇಸ್ ದಾಖಲಿಸಲಾಗಿದ್ದು, ದಿಂಡಿಗಲ್ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕಾಂಗ್ರೆಸ್ ಮುಖಂಡನ ಹೇಳಿಕೆಗೆ ಪ್ರತಿಪಕ್ಷಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ – ರಾಹುಲ್‌ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ

Share This Article