ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಹೊಡೆತ ಅನುಭವಿಸುತ್ತಿರುವ ಸರ್ಕಾರ, ಇದೀಗ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಮುಂದಾಗುವ ಸುಳಿವು ಕೊಟ್ಟಿದೆ. ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುವ ಶಕ್ತಿ ಯೋಜನೆ (Shakti Scheme) ಪರಿಷ್ಕರಣೆ ಆಗುವ ಬಗ್ಗೆ ಖುದ್ದು ಡಿಸಿಎಂ ಡಿಕೆಶಿವಕುಮಾರ್ (DCM DK Shivakumar) ಸುಳಿವು ಕೊಟ್ಟಿದ್ದಾರೆ.
ವಿಧಾನಸೌಧದ ಗ್ರ‍್ಯಾಂಡ್ ಮೆಟ್ಟಿಲು ಮೇಲೆ ನಡೆದ ಐರಾವತ ಕ್ಲಬ್ ಕ್ಲಾಸ್ 2.0 ಬಸ್ ಉದ್ಘಾಟನೆ ವೇಳೆ ಮಾತನಾಡಿದ ಡಿಸಿಎಂ, ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ಕುರಿತು ಮಾತನಾಡಿದ್ದು, ಮತ್ತೆ ಟಿಕೆಟ್ ವ್ಯವಸ್ಥೆ ಜಾರಿ ಆಗುವ ಸುಳಿವು ಕೊಟ್ಟಿದ್ದಾರೆ.ಇದನ್ನೂ ಓದಿ: Hyderabad | ಮೊಮೊಸ್ ತಿಂದು ಓರ್ವ ಮಹಿಳೆ ಸಾವು ಬೆನ್ನಲ್ಲೇ 20 ಜನರಿಗೆ ಫುಡ್ ಪಾಯ್ಸನ್
Advertisement
Advertisement
ಅನೇಕ ಜನರು ನನಗೆ ಮೇಲ್, ಮೆಸೇಜ್ ಮಾಡಿ ನಾವು ಟಿಕೆಟ್‌ಗೆ ಹಣ ಕೊಡುವುದಕ್ಕೆ ಸಿದ್ದವಾಗಿದ್ದೇವೆ. ನಮಗೆ ಉಚಿತ ಪ್ರಯಾಣ ಬೇಡ ಎಂದು ಮೆಸೇಜ್ ಹಾಕಿದ್ದಾರೆ. ನಾವು ಟಿಕೆಟ್‌ಗೆ ದುಡ್ಡು ಕೊಡುತ್ತೇವೆ ಆದರೆ ಬಸ್‌ನಲ್ಲಿ ಹಣ ತೆಗೆದುಕೊಳ್ಳುತ್ತಿಲ್ಲ ಎಂದು ಹೇಳುತ್ತಿದ್ದಾರೆ.
Advertisement
ಅನೇಕರು ನಾವು ಟಿಕೆಟ್ ಹಣ ಕೊಡುವುದಕ್ಕೆ ಸಿದ್ಧ ಎಂದು ಪ್ರಾಮಾಣಿಕವಾಗಿ ಅಭಿಪ್ರಾಯ ಹೇಳುತ್ತಿದ್ದಾರೆ. ಹೀಗಾಗಿ ನಾವು, ರಾಮಲಿಂಗಾರೆಡ್ಡಿ, ಸರ್ಕಾರದಲ್ಲಿ ಎಲ್ಲಾ ಕೂತು ಈ ಬಗ್ಗೆ ಚರ್ಚೆ ಮಾಡಿ, ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.ಇದನ್ನೂ ಓದಿ: ಜಾಮೀನು ಸಿಕ್ಕ ಬೆನ್ನಲ್ಲೇ ದರ್ಶನ್ ಭೇಟಿಗೆ ಬಂದ ಪತ್ನಿ ವಿಜಯಲಕ್ಷ್ಮಿ