ಲಕ್ನೋ: ಜ್ಞಾನವಾಪಿ ಮಸೀದಿ (Gyanvapi Mosque) ಆವರಣದ ವೈಜ್ಞಾನಿಕ ಸಮೀಕ್ಷೆ ವರದಿಯ ಗಡುವು ಮಂಗಳವಾರ ಕೊನೆಗೊಳ್ಳಲಿದ್ದು, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು (ASI) ವಾರಣಾಸಿ ಜಿಲ್ಲಾ ನ್ಯಾಯಾಲಯಕ್ಕೆ (Varanasi Court) ವರದಿಯನ್ನು ಸಲ್ಲಿಸುವ ನಿರೀಕ್ಷೆಯಿದೆ. 100 ದಿನಗಳ ಕಾಲ ಸಮೀಕ್ಷೆ ನಡೆಸಲಾಗಿದೆ.
ಸಮೀಕ್ಷೆಯು ಸುಮಾರು ಒಂದು ತಿಂಗಳ ಹಿಂದೆ ಮುಕ್ತಾಯಗೊಂಡಿತು. ಎಎಸ್ಐ ತನ್ನ ವರದಿಯನ್ನು ಸಲ್ಲಿಸಲು ಹೆಚ್ಚುವರಿ ಸಮಯವನ್ನು ಕೋರಿತ್ತು. ಕೊನೆಯದಾಗಿ ನವೆಂಬರ್ 18 ರಂದು ಎಎಸ್ಐ ಇನ್ನೂ 15 ದಿನಗಳ ಕಾಲಾವಕಾಶವನ್ನು ಕೇಳಿದಾಗ ವಿಸ್ತರಣೆಯಾಗಿತ್ತು. ನ್ಯಾಯಾಲಯ 10 ದಿನಗಳ ಕಾಲಾವಕಾಶ ನೀಡಿತ್ತು. ಇದನ್ನೂ ಓದಿ: ಸುರಂಗದಲ್ಲಿ ಸಿಲುಕಿದ ಕಾರ್ಮಿಕರ ರಕ್ಷಣೆಗೆ ಮಾಸ್ಟರ್ ಪ್ಲ್ಯಾನ್ – ಏನಿದು ರ‍್ಯಾಟ್‌ರೋಲ್ ಮೈನಿಂಗ್?
Advertisement
Advertisement
ಮಸೀದಿ ಆವರಣದಲ್ಲಿ ಆಗಸ್ಟ್ 4 ರಿಂದ ಎಎಸ್‌ಐ ಸರ್ವೆ ನಡೆಸಿತ್ತು. ಇದು ವುಜುಖಾನಾ ಪ್ರದೇಶವನ್ನು ಬಿಟ್ಟಿದೆ. ಇದನ್ನು ಸುಪ್ರೀಂ ಕೋರ್ಟ್‌ನ ಆದೇಶಗಳಿಂದ ಮುಚ್ಚಲಾಗಿದೆ. ನವೆಂಬರ್ 2 ರಂದು ಎಎಸ್ಐ, ಸಮೀಕ್ಷೆಯನ್ನು ಪೂರ್ಣಗೊಳಿಸಲಾಗಿದೆ. ಆದರೆ ಸಮೀಕ್ಷೆಯಲ್ಲಿ ಬಳಸಲಾದ ಸಲಕರಣೆಗಳ ವಿವರಗಳೊಂದಿಗೆ ವರದಿಯನ್ನು ಸಂಗ್ರಹಿಸಲು ಇನ್ನೂ ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ನ್ಯಾಯಾಲಯಕ್ಕೆ ತಿಳಿಸಿತ್ತು. ದಾಖಲೆ ಸಲ್ಲಿಸಲು ನ್ಯಾಯಾಲಯ ನವೆಂಬರ್ 17 ರ ವರೆಗೆ ಹೆಚ್ಚುವರಿ ಕಾಲಾವಕಾಶ ನೀಡಿತ್ತು.
Advertisement
ದೇವಾಲಯದ ಪಶ್ಚಿಮ ಗೋಡೆಯ ಹಿಂಭಾಗದಲ್ಲಿರುವ ಶೃಂಗಾರ್ ಗೌರಿ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಲು ಅನುಮತಿ ಕೋರಿ ನಾಲ್ವರು ಮಹಿಳೆಯರು ಸಲ್ಲಿಸಿದ ಅರ್ಜಿಯ ನಂತರ ಜುಲೈ 21 ರಂದು ವಾರಣಾಸಿ ನ್ಯಾಯಾಲಯವು ಸಮೀಕ್ಷೆಗೆ ಆದೇಶಿಸಿತ್ತು. ಕಳೆದ ವರ್ಷ ಏಪ್ರಿಲ್‌ನಲ್ಲಿ ನ್ಯಾಯಾಲಯವು ಆ ಅರ್ಜಿಯನ್ನು ಆಧರಿಸಿ ಸಂಕೀರ್ಣದ ವಿಡಿಯೋ ಸಮೀಕ್ಷೆಗೆ ಆದೇಶಿಸಿತು. ಮೇ ತಿಂಗಳಲ್ಲಿ ನಡೆಸಿದ ಸಮೀಕ್ಷೆಯು ವುಝುಖಾನಾದಲ್ಲಿನ ರಚನೆಯನ್ನು ಬಹಿರಂಗಪಡಿಸಿತು. ಇದನ್ನೂ ಓದಿ: 1 ವರ್ಷದ ಬಳಿಕ ರೇಣುಕಾಚಾರ್ಯ ಅಣ್ಣನ ಮಗ ಸಾವು ಪ್ರಕರಣ ಮುಕ್ತಾಯ; ಅಪಘಾತದಿಂದಲೇ ಸಾವು ಎಂದು ವರದಿ
Advertisement
ಬಲಪಂಥೀಯ ಕಾರ್ಯಕರ್ತರು ಈ ಸ್ಥಳದಲ್ಲಿ ಹಿಂದೆ ದೇವಾಲಯವಿತ್ತು. ಮೊಘಲ್ ಚಕ್ರವರ್ತಿ ಔರಂಗಜೇಬನ ಆದೇಶದ ಮೇರೆಗೆ 17 ನೇ ಶತಮಾನದಲ್ಲಿ ಕೆಡವಲಾಯಿತು ಎಂದು ಹೇಳಿಕೊಳ್ಳುತ್ತಾರೆ. ಈ ಮಸೀದಿಯು ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿದೆ.