ಕಿಚ್ಚ ಸುದೀಪ್ ಸಿನಿಮಾ ಮೂಲಕ ಕನ್ನಡಕ್ಕೆ ಬರಲಿದ್ದಾರಾ ನಿರ್ದೇಶಕ ಚರಣ್

Public TV
1 Min Read
sudeep 1

ಮೂರು ಕಥೆಗಳನ್ನು ಒಪ್ಪಿಕೊಂಡಿರುವುದಾಗಿ ಮೊನ್ನೆಯಷ್ಟೇ ಕಿಚ್ಚ ಸುದೀಪ್ (Kichcha Sudeep) ಹೇಳಿದ್ದರು. ಈ ಮಾತಿನ ಬೆನ್ನಲ್ಲೇ ರಾಷ್ಟ್ರ ಪ್ರಶಸ್ತಿ ತಮಿಳು ನಿರ್ದೇಶಕ ಚರಣ್ (Charan)  ಕನ್ನಡಕ್ಕೆ ಬರುತ್ತಿರುವುದಾಗಿ ಸುದ್ದಿ ಆಗಿದೆ. ಕಿಚ್ಚನಿಗಾಗಿ ಸಿನಿಮಾ ಮಾಡಲು ಕನ್ನಡದ ಇಬ್ಬರು ನಿರ್ದೇಶಕರು ರೆಡಿಯಾಗಿದ್ದಾರೆ. ಅವರು ಹೆಸರು ಕೂಡ ಬಹಿರಂಗವಾಗಿದೆ ಮತ್ತು ಅವರು ಸಿನಿಮಾ ಮಾಡುವ ಕುರಿತು ಹೇಳಿಕೊಂಡಿದ್ದಾರೆ. ಇದೀಗ ಮತ್ತೊಂದು ಅಚ್ಚರಿಯ ಹೆಸರು ಕೇಳಿ ಬಂದಿದೆ.

sudeep

ವಿಕ್ರಾಂತ್ ರೋಣ ಚಿತ್ರದ ನಂತರ ಕಿಚ್ಚನಿಗಾಗಿ ಸಿನಿಮಾ ಮಾಡುತ್ತಿರುವುದಾಗಿ ಅನೂಪ್ ಭಂಡಾರಿ (Anoop Bhandari) ಈ ಹಿಂದೆಯೇ ಹೇಳಿಕೊಂಡಿದ್ದಾರೆ. ಅವರಿಗಾಗಿಯೇ ಕಥೆ ಬರೆಯುತ್ತಿರುವುದಾಗಿಯೂ ತಿಳಿಸಿದ್ದರು. ಅಲ್ಲದೇ, ನಂದಕಿಶೋರ್ (Nandakishore) ಕೂಡ ಕಿಚ್ಚನಿಗಾಗಿ ಸಿನಿಮಾವೊಂದನ್ನು ಮಾಡಲಿದ್ದಾರೆ. ಆ ಕಥೆಯೂ ಲಾಕ್ ಆಗಿದೆ. ಇದೀಗ ಚರಣ್ ಹೆಸರು ಕೇಳಿ ಬಂದಿದೆ.  ಇದನ್ನೂ ಓದಿ:ನಯನತಾರಾ ಬಗ್ಗೆ ಕನ್ನಡದ ‘ಗೂಳಿ’ ನಟಿ ಶಾಕಿಂಗ್ ಹೇಳಿಕೆ

sudeep

ಚರಣ್ ತಮಿಳಿನಲ್ಲಿ ಹಿಟ್ ಚಿತ್ರಗಳನ್ನು ಕೊಟ್ಟವರು. ತಮ್ಮ ಚಿತ್ರಕ್ಕಾಗಿ ರಾಷ್ಟ್ರ ಪ್ರಶಸ್ತಿಯನ್ನೂ ಅವರು ಪಡೆದಿದ್ದಾರೆ. ಸುದೀಪ್ ಗಾಗಿ ಪ್ಯಾನ್ ಇಂಡಿಯಾ ಸಿನಿಮಾವನ್ನು ಅವರು ಮಾಡಲಿದ್ದಾರಂತೆ. ಅಧಿಕೃತವಾಗಿ ಈ ವಿಷಯವನ್ನು ಚರಣ್ ಆಗಲಿ ಅಥವಾ ಸುದೀಪ್ ಆಗಲಿ ಹೇಳದೇ ಇದ್ದರೂ ಗಾಂಧಿನಗರದಲ್ಲಂತೂ ಈ ಸುದ್ದಿ ಭರ್ಜರಿಯಾಗಿ ಸೇಲ್ ಆಗುತ್ತಿದೆ.

KICCHA SUDEEP 5

ಸದ್ಯ ಸುದೀಪ್ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಅವರು ಹೇಳಿದ ಅಭ್ಯರ್ಥಿಗಳ ಪರ ಅವರು ಪ್ರಚಾರ ಮಾಡಲಿದ್ದಾರೆ. ಶಿಗ್ಗಾಂವಿಯಿಂದ ಶುರುವಾದ ಪ್ರಚಾರ ರಾಜ್ಯಾದ್ಯಂತ ಮುಂದುವರೆಯಲಿದೆ. ಚುನಾವಣೆ ನಂತರವೇ ಅವರು ತಮ್ಮ ಸಿನಿಮಾಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.

Share This Article