ಮೈಸೂರು: ಅನರ್ಹ ಶಾಸಕ ಹೆಚ್.ವಿಶ್ವನಾಥ್ ಮತ್ತೆ ಮೈಸೂರು ವಿಭಜನೆಯ ಕೂಗು ಎತ್ತಿದ್ದು, ಹುಣಸೂರನ್ನು ಪ್ರತ್ಯೇಕ ಜಿಲ್ಲೆ ಮಾಡುವ ಕುರಿತು ಶಪಥ ಮಾಡಿದ್ದಾರೆ.
ಹುಣಸೂರಿನಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ, ಅಖಾಡಕ್ಕಿಳಿದ ಮೊದಲ ದಿನವೇ ಹುಣಸೂರು ಪ್ರತ್ಯೇಕ ಜಿಲ್ಲೆ ಮಾಡುವ ವಿಚಾರ ಪ್ರಸ್ತಾಪ ಮಾಡಿದ್ದಾರೆ. ನಾನು ಹುಣಸೂರಿನಿಂದ ಗೆದ್ದು ಮಂತ್ರಿಯಾಗುತ್ತೇನೆ. ಹುಣಸೂರು ತಾಲೂಕನ್ನು ಹೊಸ ಜಿಲ್ಲೆಯಾಗಿ ಮಾಡುತ್ತೇನೆ. ಇದು ನನ್ನ ಶಪಥ ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ವಿಶ್ವನಾಥ್ ಮತ್ತೊಮ್ಮೆ ಗೆದ್ರೆ ತಾಲೂಕನ್ನೇ ಮಾರಿಬಿಡ್ತಾರೆ- ಕಾಂಗ್ರೆಸ್ ಅಭ್ಯರ್ಥಿ ಕಿಡಿ
Advertisement
Advertisement
ನನ್ನದು ಬರೀ ಮಾತು, ಟೀಕೆಯಲ್ಲ. ನಾನು ಕನಸುಗಾರ ಪ್ರತ್ಯೇಕ ಜಿಲ್ಲೆಯ ಕನಸನ್ನು ನನಸು ಮಾಡುತ್ತೇನೆ. ನಮ್ಮದೇ ಸರ್ಕಾರ ಇದೆ. ಹುಣಸೂರು ತಾಲೂಕಿನ್ನು ಜಿಲ್ಲೆಯನ್ನಾಗಿ ಮಾಡಿಯೇ ಮಾಡುತ್ತೇನೆ. ಅದಕ್ಕೆ ದೇವರಾಜ ಅರಸು ಹೆಸರನ್ನು ಇಡುತ್ತೇನೆ. ಈ ಮಾತು ಚುನಾವಣೆಗೆ ಸೀಮಿತ ಅಲ್ಲ. ಫಲಿತಾಂಶದ ಮರುದಿನದಿಂದಲೇ ಈ ಪ್ರಕ್ರಿಯೆ ಪ್ರಾರಂಭಿಸುತ್ತೇನೆ ಎಂದು ವಿಶ್ವನಾಥ್ ಮಾತು ಕೊಟ್ಟಿದ್ದಾರೆ.
Advertisement
ಬಿಜೆಪಿ ಸೇರುವುದಕ್ಕೂ ಮುನ್ನ ಸಹ ಸಹ ವಿಶ್ವನಾಥ್ ಅವರು ಹುಣಸೂರು ತಾಲೂಕನ್ನು ಜಿಲ್ಲೆಯಾಗಿ ಘೋಷಿಸಬೇಕು ಎಂದು ಹೇಳಿಕೆ ನೀಡಿದ್ದರು. ಹೊಸ ಜಿಲ್ಲೆಗೆ ಡಿ.ದೇವರಾಜ ಅರಸ್ ಜಿಲ್ಲೆ ಹೆಸರಿಡಬೇಕು. ಹೊಸ ಜಿಲ್ಲೆ ವ್ಯಾಪ್ತಿಗೆ ಹುಣಸೂರು, ಕೆ.ಆರ್.ನಗರ, ಪಿರಿಯಾಪಟ್ಟಣ, ಹೆಚ್.ಡಿ.ಕೋಟೆ ಜೊತೆ ಹೊಸ ತಾಲೂಕು ಸರಗೂರು ಹಾಗೂ ಸಾಲಿಗ್ರಾಮ ಸೇರಿಸಿ ಒಂದು ಜಿಲ್ಲೆ ಮಾಡಬೇಕು ಎಂಬ ಪ್ರಸ್ತಾವನೆಯನ್ನು ಸರ್ಕಾರದ ಮುಂದೆ ಇಟ್ಟಿದ್ದರು.