ನವದೆಹಲಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಇಂದು ಕಾಂಗ್ರೆಸ್ ಅಧ್ಯಕ್ಷರಾಗಿ (Congress President) ಪ್ರಮಾಣ ವಚನ ಸ್ವೀಕರಿಸಿದರು.
Mallikarjun Kharge officially takes charge as Congress president
Read @ANI Story | https://t.co/bJod2bFbjO#MallikarjunKharge #Congresspresident #Congress pic.twitter.com/Oj68Tv3zqy
— ANI Digital (@ani_digital) October 26, 2022
Advertisement
24 ವರ್ಷಗಳ ನಂತರ ಈ ಹುದ್ದೆಯನ್ನು ಅಲಂಕರಿಸುತ್ತಿರುವ ಮೊದಲ ಗಾಂಧಿಯೇತರ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಅವರು ಪಾತ್ರರಾಗಿದ್ದಾರೆ. ಜೊತೆಗೆ ಸುಮಾರು 5 ದಶಕಗಳ ಬಳಿಕ ಕನ್ನಡಿಗರೊಬ್ಬರಿಗೆ ದೇಶದ ಅತ್ಯಂತ ಹಳೆಯ ರಾಜಕೀಯ ಪಕ್ಷವಾದ ಕಾಂಗ್ರೆಸ್‍ನ ನೇತೃತ್ವ ಸಿಕ್ಕಿದೆ.
Advertisement
Delhi | I extend my heartiest congratulations to the newly elected president Mallikarjun Kharge. Change is the rule of the world… Congress had faced a lot of difficulties earlier as well. But I’m sure we will overcome the problems: Outgoing Congress president Sonia Gandhi pic.twitter.com/5xphHp3klD
— ANI (@ANI) October 26, 2022
Advertisement
ಎಐಸಿಸಿ ಕೇಂದ್ರ ಕಚೇರಿಯಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಮಾಣ ಪತ್ರವನ್ನು ಹಸ್ತಾಂತರಿಸಿದರು. ಈ ವೇಳೆ ಕಾರ್ಮಿಕನ ಮಗನಾದ ನಾನು, ಕಾಂಗ್ರೆಸ್ ಕಾರ್ಯಕರ್ತನಾಗಿದ್ದ ನನ್ನನ್ನು ಕಾಂಗ್ರೆಸ್ ಅಧ್ಯಕ್ಷನನ್ನಾಗಿ ನೇಮಿಸಲಾಗಿದೆ. ನನ್ನ ಕೆಲಸದಿಂದ, ನನ್ನ ಅನುಭವದೊಂದಿಗೆ, ಪಕ್ಷವನ್ನು ಮೇಲೆತ್ತಲು ಕೈಲಾದಷ್ಟು ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡುತ್ತೇನೆ ಎಂದು ಖರ್ಗೆ ಪ್ರಮಾಣ ವಚನ ಸ್ವೀಕರಿಸಿದರು.
Advertisement
ಇದೇ ವೇಳೆ ಸೋನಿಯಾ ಗಾಂಧಿ ಅವರು, ಬಿಕ್ಕಟ್ಟಿನ ಸಮಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಿದ್ದಕ್ಕಾಗಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧನ್ಯವಾದ ತಿಳಿಸಿದರು. ಅವರ ನಾಯಕತ್ವದಲ್ಲಿ ಎರಡು ಯುಪಿಎ ಸರ್ಕಾರಗಳು ರಚನೆಯಾದವು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇನ್ನೂ ಅಧಿಕಾರ ವಹಿಸಿಕೊಳ್ಳುವುದಕ್ಕೂ ಮುನ್ನ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್‍ಘಾಟ್‍ನಲ್ಲಿ ಮಹಾತ್ಮ ಗಾಂಧಿ ಅವರಿಗೆ ಗೌರವ ಸಲ್ಲಿಸಿದರು.