ಬೆಂಗಳೂರು: ‘ನೈಸ್ ಯೋಜನೆಗೆ ಸಂಬಂಧಿಸಿದಂತೆ ಕಾನೂನು ಏನು ಹೇಳುತ್ತದೆಯೋ ಹಾಗೆ ನಾವು ನಡೆದುಕೊಳ್ಳುತ್ತೇವೆ’ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ನೈಸ್ ಯೋಜನೆಗೆ ಸಂಬಂಧಿಸಿದಂತೆ ಬರೆದ ಪತ್ರದ ಬಗ್ಗೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರು ಪತ್ರ ಬರೆದಿರುವುದು ನಿಜ. ಪತ್ರ ಇನ್ನು ಓದಿಲ್ಲ. ಓದಿ, ವಿಚಾರ ತಿಳಿದು ಕಾನೂನಿನ ಚೌಕಟ್ಟಿನಲ್ಲಿ ಮಾಡಬಹುದಾದ ಕೆಲಸಗಳ ಬಗ್ಗೆ ಪರಿಶೀಲನೆ ನಡೆಸುತ್ತೇನೆ ಎಂದರು. ಇದನ್ನೂ ಓದಿ: ನೈಸ್ ರಸ್ತೆ ಟೋಲ್ ದರ ಪರಿಷ್ಕರಣೆ – ಹೊಸ ದರ ಹೇಗಿದೆ?
ಪತ್ರ ಬರೆದ ವಿಚಾರವಾಗಿ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಹೆಚ್.ಡಿ ಕುಮಾರಸ್ವಾಮಿಯವರು, ಬೆಂಗಳೂರು – BMICP ಯೋಜನೆಯಲ್ಲಿ ನಡೆದ ಅಕ್ರಮಗಳ ಕುರಿತು ನಾನು ಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದೇನೆ. NICE ಕಾನೂನುಗಳನ್ನು ಉಲ್ಲಂಘಿಸಿದೆ ಎಂಬುದನ್ನು ನಾನು ಪತ್ರದಲ್ಲಿ ವಿವರಿಸಿದ್ದೇನೆ.
ಬೆಂಗಳೂರು–ಮೈಸೂರು ಇನ್‌ಪ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (BMICP) ಅಕ್ರಮಗಳ ಬಗ್ಗೆ ನಾನು ರಾಜ್ಯದ ಮುಖ್ಯಮಂತ್ರಿ ಶ್ರೀ @DKShivakumar ಅವರಿಗೆ ವಿವರವಾದ ಪತ್ರ ಬರೆದಿದ್ದೇನೆ. ಈ ನೆಲದ ಕಾನೂನು ಹಾಗೂ Frame Work Agreement ಅನ್ನು ಉಲ್ಲಂಘಿಸಿ ನೈಸ್ ಸಂಸ್ಥೆ ಯಾವ ರೀತಿ ಅಕ್ರಮಗಳನ್ನು ಎಸಗಿದೆ ಎಂಬ ಬಗ್ಗೆ ಪತ್ರದಲ್ಲಿ ಸುದೀರ್ಘವಾಗಿ… pic.twitter.com/yNu9dPoKO5
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) August 16, 2026
ಭೂಸ್ವಾಧೀನ ನಡೆದು 23 ವರ್ಷಗಳು ಕಳೆದರೂ ಭೂಮಿ ಕಳೆದುಕೊಂಡ ರೈತರಿಗೆ ಇನ್ನೂ ಪರಿಹಾರ ಸಿಗದ ಕಾರಣ, ಅವರಲ್ಲಿ ಅನೇಕರು ಸಂಕಷ್ಟದಲ್ಲಿದ್ದಾರೆ ಎಂದು ಅವರು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
