ಮಾಸ್ಕೋ: ಕಳೆದ 10 ತಿಂಗಳುಗಳಿಂದ ನಡೆಯುತ್ತಿರುವ ರಷ್ಯಾ (Russia) ಹಾಗೂ ಉಕ್ರೇನ್ (Ukraine) ನಡುವಿನ ಭೀಕರ ಯುದ್ಧವನ್ನು (War) ಶೀಘ್ರವೇ ನಿಲ್ಲಿಸುವುದಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ತಿಳಿಸಿದ್ದಾರೆ.
ಉಕ್ರೇನ್‌ನೊಂದಿಗಿನ ಸಂಘರ್ಷವನ್ನು ಕೊನೆಗೊಳಿಸುವುದು ನಮ್ಮ ಗುರಿಯಾಗಿದೆ, ಇದಕ್ಕಾಗಿ ನಾವು ಶ್ರಮಿಸುತ್ತಿದ್ದೇವೆ. ಆದಷ್ಟು ಬೇಗ ಎಲ್ಲವನ್ನೂ ಕೊನೆಗೊಳಿಸಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದ್ದಾರೆ.
Advertisement
Advertisement
ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ(Volodymyr Zelenskiy) ಯುದ್ಧ ಪ್ರಾರಂಭವಾದಾಗಿನಿಂದ ಮೊದಲ ಬಾರಿ ಅಮೆರಿಕಗೆ ಭೇಟಿ ನೀಡಿದ್ದಾರೆ. ಗುರುವಾರ ವಾಷಿಂಗ್ಟನ್‌ನಲ್ಲಿ ನಡೆದ ಗಣ್ಯರೊಂದಿಗಿನ ಭೇಟಿಯ ಬಳಿಕ ಅಮೆರಿಕ ಪೇಟ್ರಿಯಾಟ್ ಕ್ಷಿಪಣಿಯನ್ನು ಉಕ್ರೇನ್‌ಗೆ ನೀಡಿದೆ.
Advertisement
Advertisement
ಅಮೆರಿಕ ಉಕ್ರೇನ್‌ಗೆ ನೀಡಿರುವ ಮಿಲಿಟರಿ ಸಹಾಯದಿಂದ ಯುದ್ಧವನ್ನು ನಿಲ್ಲಿಸಲು ಅಥವಾ ಮಾಸ್ಕೋ ತನ್ನ ಗುರಿಯನ್ನು ಸಾಧಿಸುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ರಷ್ಯಾ ಹೇಳಿದೆ. ಪೇಟ್ರಿಯಾಟ್ ವಾಯು ರಕ್ಷಣಾ ವ್ಯವಸ್ಥೆ ಶಕ್ತಿಶಾಲಿ ಹಾಗೂ ಸುಧಾರಿತ ಎಂದು ಪರಿಗಣಿಸಲಾಗುತ್ತದೆಯಾದರೂ ಅದು ತುಂಬಾ ಹಳೆಯದು ಎಂದು ಪುಟಿನ್ ತಳ್ಳಿಹಾಕಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಕೊರೊನಾ ‘ಸಂಜೀವಿನಿ’ ಕೊರತೆ – ಬೂಸ್ಟರ್ ಡೋಸ್ ಬಳಕೆಗೆ ಜಾಗೃತಿ
ಇದರ ಬೆನ್ನಲ್ಲೇ ಮಾಧ್ಯಮದೊಂದಿಗೆ ಮಾತನಾಡಿರುವ ಪುಟಿನ್, ರಷ್ಯಾ ಉಕ್ರೇನ್‌ನೊಂದಿಗಿನ ಯುದ್ಧವನ್ನು ಕೊನೆಗೊಳಿಸಲು ಬಯಸುತ್ತದೆ. ಇದು ಅನಿವಾರ್ಯ ರಾಜತಾಂತ್ರಿಕ ಪರಿಹಾರವಾಗಿದೆ ಎಂದು ಹೇಳಿಕೆ ನೀಡಿದ್ದಾರೆ.
ಈ ವರ್ಷ ಫೆಬ್ರವರಿ 24ರಂದು ರಷ್ಯಾ ಉಕ್ರೇನ್ ಮೇಲೆ ಯುದ್ಧ ಸಾರಿತ್ತು. 10 ತಿಂಗಳುಗಳಿAದ ನಡೆಯುತ್ತಿರುವ ಯುದ್ಧದಲ್ಲಿ ಸಾಕಷ್ಟು ಸಾವು ನೋವುಗಳು ಉಂಟಾಗಿವೆ. ಇದನ್ನೂ ಓದಿ: ಚೀನಾದಲ್ಲಿ ಪ್ರತಿ ದಿನ 10 ಲಕ್ಷ ಕೇಸ್, 5000 ಸೋಂಕಿತರ ಸಾವು