ನವದೆಹಲಿ: ಸಾವರ್ಕರ್ ಬಗೆಗೆ ನೀಡಿರುವ ಹೇಳಿಕೆಗೆ ರಾಹುಲ್ ಗಾಂಧಿ (Rahul Gandhi) ಕ್ಷಮೆ ಯಾಚಿಸದಿದ್ದರೆ ನಾನು ಅವರ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಿಸುತ್ತೇನೆ ಎಂದು ವೀರ್ ಸಾವರ್ಕರ್ (Veer Savarkar) ಅವರ ಮೊಮ್ಮಗ ರಂಜಿತ್ ಸಾವರ್ಕರ್ ಹೇಳಿದ್ದಾರೆ.
ವೀರ್ ಸಾವರ್ಕರ್ ಬ್ರಿಟಿಷರ ಕ್ಷಮೆ ಯಾಚಿಸಿದರು ಎಂದ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ರಾಹುಲ್ ಗಾಂಧಿ ಅಥವಾ ಕಾಂಗ್ರೆಸ್ (Congress) ಪಕ್ಷ ವೀರ್ ಸಾವರ್ಕರ್ ಅವರಿಗೆ ಅಗೌರವ ತೋರುತ್ತಿರುವುದು ಇದೇ ಮೊದಲಲ್ಲ. ಕ್ಷಮೆಯಾಚಿಸುವ ಬದಲು ಅವರು ಪುನರಾವರ್ತಿಸುತ್ತಿರುವುದು ದುರದೃಷ್ಟಕರ ಎಂದು ಅಸಮಾಧಾನ ವ್ಯಕ್ತಪಡಿಸಿದರು.
Advertisement
Advertisement
ರಾಹುಲ್ ಗಾಂಧಿ ವಿರುದ್ಧ ದಾದರ್ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಎರಡು ದೂರುಗಳನ್ನು ದಾಖಲಿಸಿದ್ದೇನೆ. ಐದು ವರ್ಷಗಳ ಹಿಂದೆ ವಿಡಿ ಸಾವರ್ಕರ್ ಅವರನ್ನು ದೇಶದ್ರೋಹಿ ಎಂದು ಕರೆದಿದ್ದರು. ಈ ಬಗ್ಗೆ ರಾಹುಲ್ ಗಾಂಧಿ ಅವರಿಗೆ ನೋಟಿಸ್ ಕಳುಹಿಸುವಂತೆ ನ್ಯಾಯಾಲಯವು ಪೊಲೀಸ್ ಠಾಣೆಗೆ ಸೂಚಿಸಿದೆ. ಇದನ್ನೂ ಓದಿ: ಬಂಜಾರಾ, ಕೊರಚ, ಕೊರಮ, ಬೋವಿ ಶಾಶ್ವತವಾಗಿ ಎಸ್ಸಿ ಪಟ್ಟಿಯಲ್ಲಿರುತ್ತದೆ- ಪಿ.ರಾಜೀವ್
Advertisement
ಭಾರತ್ ಜೋಡೋ ಯಾತ್ರೆ (Bharat Jodo Yatre) ಯಲ್ಲಿ ಸಾವರ್ಕರ್ ವಿರುದ್ಧ ಹೇಳಿಕೆ ನೀಡಿದ ನಂತರ ಎರಡನೇ ಪ್ರಕರಣ ದಾಖಲಿಸಿದೆ. ಈ ಬಾರಿಯೂ ನಾನು ದೂರು ನೀಡುತ್ತೇನೆ, ಸಾವರ್ಕರ್ ಅವರ ಹೆಸರನ್ನು ಮತ್ತೆ ಮತ್ತೆ ಕೆಡದಂತೆ ನಾವು ಈ ಸಮಸ್ಯೆಯನ್ನು ಇತ್ಯರ್ಥಪಡಿಸಬೇಕು. ಅದನ್ನು ನ್ಯಾಯಾಲಯಗಳ ಮೂಲಕ ಮಾಡುತ್ತೇನೆ ಎಂದರು.
Advertisement
ಐತಿಹಾಸಿಕವಾಗಿ, ಸಾವರ್ಕರ್ ಬ್ರಿಟಿಷರ ಮುಂದೆ ಕ್ಷಮೆಯಾಚಿಸಿದ್ದರು ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ಸಾವರ್ಕರ್, ಬ್ರಿಟಿಷ್ ಅಧಿಕಾರಿಗಳಿಗೆ ಕ್ಷಮೆಯಾಚಿಸಿದ ಬಗ್ಗೆ ಪುರಾವೆಗಳಿದ್ದರೆ ನೀಡುವಂತೆ ರಾಹುಲ್ ಗಾಂಧಿಗೆ ರಂಜಿತ್ ಸಾವರ್ಕರ್ಗೆ ಸವಾಲು ಹಾಕಿದರು. ಇದನ್ನೂ ಓದಿ: ಸಾವರ್ಕರ್ ಬ್ರಿಟಿಷರಲ್ಲಿ ಕ್ಷಮೆಯಾಚಿಸಿದ್ದಾರೆ ಎಂಬುದನ್ನು ಸಾಬೀತುಪಡಿಸಲಿ: ರಾಗಾಗೆ ಸಾವರ್ಕರ್ ಮೊಮ್ಮಗ ಸವಾಲು
ಮಾರ್ಚ್ 25 ರಂದು ದೆಹಲಿಯಲ್ಲಿ ರಾಹುಲ್ ಗಾಂಧಿ ಸುದ್ದಿಗೋಷ್ಠಿ ನಡೆಸಿದ್ದರು. ಈ ವೇಳೆ ಲಂಡನ್ ನಲ್ಲಿ ನೀಡಿದ ಹೇಳಿಕೆಗಳಿಗೆ ಕ್ಷಮೆಯಾಚಿಸಬೇಕೇ ಎಂಬ ಪ್ರಶ್ನೆಗೆ ಉತ್ತರಿಸುವಾಗ “ನನ್ನ ಹೆಸರು ಸಾವರ್ಕರ್ ಅಲ್ಲ. ನನ್ನ ಹೆಸರು ಗಾಂಧಿ, ಗಾಂಧಿ ಯಾರಿಗೂ ಕ್ಷಮೆ ಕೇಳುವುದಿಲ್ಲ ಎಂದು ಹೇಳಿದ್ದರು.