ಬೆಂಗಳೂರು: ಕಾಂಗ್ರೆಸ್ ಬಂಡಾಯ ನಾಟಕದ ಮೊದಲ ಅಂಕಕ್ಕೆ ಇವತ್ತೇ ತೆರೆನಾ ಅನ್ನೋ ಕುತೂಹಲ ಮೂಡಿದೆ.
ಸಚಿವ ಸ್ಥಾನ ಕಳೆದುಕೊಂಡಿರೋ ಬೆಳಗಾವಿ ಸಾಹುಕಾರ ರಮೇಶ್ ಜಾರಕಿಹೊಳಿ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭೇಟಿಗೆ ಯತ್ನಿಸ್ತಿದ್ದಾರಂತೆ. ಹಾಗಾದ್ರೆ 4 ದಿನ ಕಾದು ನೋಡಿ ಎಂದಿದ್ದ ರಮೇಶ್ ಜಾರಕಿಹೊಳಿ ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡೋದು ಪಕ್ಕಾನಾ ಅನ್ನೋದು ಪ್ರಶ್ನೆಯಾಗಿಯೇ ಉಳಿದಿದೆ.
Advertisement
Advertisement
ಇಂದು ಮಾಜಿ ಸಿಎಂ ಯಡಿಯೂರಪ್ಪ ಅವರು ಪ್ರಧಾನಿ ಮೋದಿ, ಅಮಿತ್ ಶಾರನ್ನ ಭೇಟಿ ಆಗಲಿದ್ದಾರೆ. ಇತ್ತ ಗುರುವಾರವೇ ದೆಹಲಿಗೆ ರಮೇಶ್ ಜಾರಕಿಹೊಳಿ ಹೋಗಿರುವ ಬಗ್ಗೆ ಮಾಹಿತಿಯೂ ಇದೆ. ದೆಹಲಿಯಲ್ಲಿ ಬಿಜೆಪಿ ಹೈಕಮಾಂಡ್ ಜೊತೆಗೆ ಮಾತುಕತೆಗೆ ಜಾರಕಿಹೊಳಿ ಯತ್ನಿಸ್ತಿದ್ದು, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನಾವೀಸ್, ವಾಲ್ಮೀಕಿ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
Advertisement
Advertisement
ಇದುವರೆಗೂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರ `ಕೈ’ಗೆ ಸಿಗದ ಜಾರಕಿಹೊಳಿ ಈ ಮೂಲಕ ಕಾಂಗ್ರೆಸ್‍ಗೆ ಕೈ ಕೊಟ್ಟು ಬಿಜೆಪಿ ಸೇರಲು ಜಾರಕಿಹೊಳಿ ಕಡೆ ಹಂತದ ಯತ್ನ ಮಾಡ್ತಿದ್ದಾರಾ ಅನ್ನೋ ಕುತೂಹಲ ಮೂಡಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv