ನವದೆಹಲಿ: ದರೋಡೆಕೋರ, ರಾಜಕಾರಣಿ ಆನಂದ್ ಮೋಹನ್‍ನನ್ನು ಅವಧಿ ಮುನ್ನವೇ ಜೈಲಿನಿಂದ ಬಿಡುಗಡೆ ಮಾಡಿದ್ದಕ್ಕೆ ಸುಪ್ರೀಂ ಕೋರ್ಟ್ (Supreme Court) ಬಿಹಾರ (Bihar) ಸರ್ಕಾರಕ್ಕೆ ಸೋಮವಾರ ನೋಟಿಸ್ ಜಾರಿ ಮಾಡಿದೆ. ಅಲ್ಲದೆ ಸರ್ಕಾರ ಎರಡು ವಾರಗಳಲ್ಲಿ ಉತ್ತರಿಸಬೇಕು ಎಂದು ನ್ಯಾಯಾಲಯ ಎಚ್ಚರಿಸಿದೆ.
ಐಎಎಸ್ (IAS) ಅಧಿಕಾರಿ ಜಿ ಕೃಷ್ಣಯ್ಯ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಆನಂದ್ ಮೋಹನ್‍ನನ್ನು ಬಿಹಾರ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿತ್ತು. ಇದನ್ನು ಪ್ರಶ್ನಿಸಿ ಕೃಷ್ಣಯ್ಯ ಪತ್ನಿ ಉಮಾ ಕೃಷ್ಣಯ್ಯ ಸುಪ್ರೀಂ ಕೋರ್ಟ್‍ಗೆ ಮನವಿ ಸಲ್ಲಿಸಿದ್ದರು. ಸುಪ್ರೀಂ ಪ್ರತಿಕ್ರಿಯೆಯಿಂದ ನನಗೆ ಸಂತಸವಾಗಿದೆ. ನ್ಯಾಯ ಸಿಗುವ ಭರವಸೆ ಇದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಬಂಧನ ಭೀತಿ – ಸುಪ್ರೀಂ ಮೊರೆ ಹೋದ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್
Advertisement
Advertisement
ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರ ಜೈಲು ಕೈಪಿಡಿಯನ್ನು ಇತ್ತೀಚೆಗೆ ತಿದ್ದುಪಡಿ ಮಾಡಿತ್ತು. ಇದಾದ ನಂತರ 27 ಅಪರಾಧಿಗಳ ಬಿಡುಗಡೆಯಾಗಿತ್ತು. ಏ. 27 ರಂದು ಆನಂದ್ ಮೋಹನ್‍ನನ್ನು ಬಿಡುಗಡೆ ಮಾಡಲಾಗಿತ್ತು. ಇದನ್ನು ಸುಪ್ರೀಂ ಗಮನಕ್ಕೆ ತಂದಿದ್ದ ಅರ್ಜಿದಾರರು ಆನಂದ್‍ನನ್ನು ಬಿಡುಗಡೆ ಮಾಡುವ ಉದ್ದೇಶದಿಂದ ಕೈಪಿಡಿ ತಿದ್ದುಪಡಿ ಮಾಡಲಾಗಿದೆ ಎಂದು ಆರೋಪಿಸಿದ್ದರು.
Advertisement
Advertisement
1994ರಲ್ಲಿ ಅಂದಿನ ಗೋಪಾಲಗಂಜ್ ಜಿಲ್ಲಾ ಮ್ಯಾಜಿಸ್ಟ್ರೇಟ್ (District Magistrate) ಜಿ. ಕೃಷ್ಣಯ್ಯ ಅವರ ಹತ್ಯೆ ಪ್ರಕರಣದಲ್ಲಿ ಆನಂದ್ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ. ಈ ಹಿಂದೆ ಪುತ್ರ ಚೇತನ್ ಆನಂದ್ ನಿಶ್ಚಿತಾರ್ಥದಲ್ಲಿ ಪಾಲ್ಗೊಳ್ಳಲು 15 ದಿನಗಳ ಪೆರೋಲ್‍ನಲ್ಲಿದ್ದ. ಪೆರೋಲ್ ಅವಧಿ ಮುಗಿದ ಹಿನ್ನೆಲೆಯಲ್ಲಿ ಏ.26 ರಂದು ಸಹರ್ಸಾ ಜೈಲಿಗೆ ಮರಳಿದ್ದ. ಆದರೆ ಏ.27 ರಂದು ಬಿಡುಗಡೆಯಾಗಿದ್ದ.
ಪ್ರಕರಣದ ಹಿನ್ನೆಲೆ ಏನು?
1994 ರ ಡಿಸೆಂಬರ್ 5 ರಂದು ಮುಜಾಫರ್‍ಪುರ್‍ನಲ್ಲಿ ಕೃಷ್ಣಯ್ಯ ಅವರನ್ನು ಆನಂದ್ ಮೋಹನ್‍ನ ಪ್ರಚೋದನೆಗೆ ಒಳಗಾದ ಗುಂಪು ಥಳಿಸಿ ಕೊಂದಿತ್ತು. 2007 ರಲ್ಲಿ ವಿಚಾರಣಾ ನ್ಯಾಯಾಲಯವು ಆನಂದ್ ಮೋಹನ್‍ಗೆ ಮರಣದಂಡನೆ ವಿಧಿಸಿತ್ತು. ಒಂದು ವರ್ಷದ ನಂತರ ಪಾಟ್ನಾ ಹೈಕೋರ್ಟ್ (Patna High Court) ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಿತ್ತು. ನಂತರ ಮೋಹನ್ ಸುಪ್ರೀಂ ಕೋರ್ಟ್‍ನಲ್ಲಿ ತೀರ್ಪನ್ನು ಪ್ರಶ್ನಿಸಿದ್ದ. ಆದರೆ ಈ ಅರ್ಜಿಯ ಯಾವುದೇ ವಿಚಾರಣೆ ನಡೆಯದೇ 2007 ರಿಂದ ಸಹರ್ಸಾ (Saharsa) ಜೈಲಿನಲ್ಲಿದ್ದ. ಇದನ್ನೂ ಓದಿ: ಸಿಹಿ ಹಂಚಿ ರೇಪ್ – 30 ಮಕ್ಕಳ ಮೇಲೆ ಅತ್ಯಾಚಾರಗೈದವ ಕೊನೆಗೂ ದೋಷಿಯಾದ