ಬೆಂಗಳೂರು: ಬಿಜೆಪಿಯ ಸ್ತ್ರೀಪರ ಕಾಳಜಿಯ ವೀರಾಧಿವೀರರೇ, ಸಿಡಿ ಶೂರರೇ, ಕೋರ್ಟಿನಿಂದ ತಡೆಯಾಜ್ಞೆ ತಂದ ಧೀರರೇ. ನಿಮ್ಮ ಪಕ್ಷದ ಅರವಿಂದ್ ಲಿಂಬಾವಳಿಯ ಮಹಿಳೆ ಮೇಲಿನ ದೌರ್ಜನ್ಯಕ್ಕೆ ರೊಚ್ಚಿಗೇಳುವುದು ಯಾವಾಗ ಎಂದು ಕಾಂಗ್ರೆಸ್ ಸರಣಿ ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ಕಿಡಿಕಾರಿದೆ.
Advertisement
ಟ್ವೀಟ್‍ನಲ್ಲಿ ಏನಿದೆ?
ಬಿಜೆಪಿಯ ಸ್ತ್ರೀಪರ ಕಾಳಜಿಯ ವೀರಾಧಿವೀರರೇ, ಸಿಡಿ ಶೂರರೇ, ಕೋರ್ಟಿನಿಂದ ತಡೆಯಾಜ್ಞೆ ತಂದ ಧೀರರೇ. ನಿಮ್ಮ ಪಕ್ಷದ ಅರವಿಂದ್ ಲಿಂಬಾವಳಿಯ ಮಹಿಳೆ ಮೇಲಿನ ದೌರ್ಜನ್ಯಕ್ಕೆ ರೊಚ್ಚಿಗೇಳುವುದು ಯಾವಾಗ? ಸ್ತ್ರೀ ಕುಲದ ಗೌರವವನ್ನು ಎತ್ತಿ ಹಿಡಿಯುವುದು ಯಾವಾಗ? ನಳಿನ್ ಕುಮಾರ್ ಕಟೀಲ್ ಅವರೇ, ಲಿಂಬಾವಳಿಯವರನ್ನು ಉಚ್ಛಾಟಿಸುವುದು ಯಾವಾಗ?. ಇದನ್ನೂ ಓದಿ: ಕೇಳುವಷ್ಟು ಶಾಂತಿ, ಸಹನೆ ಇಲ್ಲವೆಂದ್ರೆ ಕ್ಷೇತ್ರದ ಶಾಸಕರಾಗಿ ಇರುವುದಕ್ಕೆ ಯೋಗ್ಯರಲ್ಲ: ಡಿಕೆಶಿ
Advertisement
Advertisement
ಮಹಿಳೆಗೆ ನಿಂದಿಸಿದ್ದರು ಮಾಧುಸ್ವಾಮಿ. ಮಹಿಳೆಗೆ ಹಲ್ಲೆ ಮಾಡಿದ್ದರು ಸಿದ್ದು ಸವದಿ. ಉದ್ಯೋಗ ಕೇಳಿದಾಕೆಯನ್ನು ಮಂಚ ಹತ್ತಿಸಿದ್ದರು ರಮೇಶ್ ಜಾರಕಿಹೊಳಿ. ಅತ್ಯಾಚಾರ ಸಂತ್ರಸ್ತೆಯದ್ದೇ ತಪ್ಪು ಎಂದಿದ್ದರು ಆರಗ ಜ್ಞಾನೇಂದ್ರ. ಮಹಿಳೆಯ ಮೇಲೆ ದರ್ಪ ಮೆರೆದರು ಅರವಿಂದ್ ಲಿಂಬಾವಳಿ. ಇದೇನಾ ಬಿಜೆಪಿಯ ಸ್ತ್ರೀಗೌರವದ ಸಂಸ್ಕೃತಿ? ಅಹವಾಲು ಹೇಳಿಕೊಳ್ಳಲು ಬಂದ ಮಹಿಳೆಯ ಮೇಲೆ ದರ್ಪ ತೋರಿದ ಶಾಸಕ ಅರವಿಂದ್ ಲಿಂಬಾವಳಿಯ ವರ್ತನೆಯು ಬಿಜೆಪಿಯ ಜನವಿರೋಧಿ ಧೋರಣೆ, ದುರಹಂಕಾರ ಪರಮಾವಧಿಗೆ ತಲುಪಿರುವುದಕ್ಕೆ ಸಾಕ್ಷಿ. ಜನತೆಯ ಮೇಲೆ ದರ್ಪ ತೋರಿದ ಮಾತ್ರಕ್ಕೆ ನಿಮ್ಮ ಅಯೋಗ್ಯತನ ಮರೆಯಾಗುವುದಿಲ್ಲ. ಇದನ್ನೂ ಓದಿ: ಕ್ಷಮೆ ಕೇಳೋಕೆ ಸಿದ್ಧ, ಒತ್ತುವರಿ ತೆರವು ಮಾಡಿಸಿ- ಕಾಂಗ್ರೆಸ್‍ಗೆ ಲಿಂಬಾವಳಿ ಟಾಂಗ್
Advertisement
ಬೊಮ್ಮಾಯಿ ಅವರೇ, ನಿಮ್ಮ ಶಾಸಕರ ಈ ವರ್ತನೆ ನಿಮಗೆ ಸಹ್ಯವೇ? ಮಹಿಳೆಯ ಮೇಲೆ ದಬ್ಬಾಳಿಕೆ ಎಸಗಿದ್ದಲ್ಲದೆ “ನಾನೇನು ರೇಪ್ ಮಾಡಿದ್ನಾ” ಎಂದು ಉದ್ಧಟತನದಲ್ಲಿ ಕೇಳಿದ ಅರವಿಂದ್ ಲಿಂಬಾವಳಿ ಅವರ ಮಾತುಗಳು ಇಡೀ ಬಿಜೆಪಿ ಸಂಸ್ಕೃತಿಗೆ ಹಿಡಿದ ಕನ್ನಡಿ. ಲಿಂಬಾವಳಿಯ ಈ ಮಾತುಗಳು ಇಡೀ ಸ್ತ್ರೀ ಕುಲಕ್ಕೆ ಮಾಡಿದ ಘೋರ ಅವಮಾನ. ಇಂತಹ ಕೊಳಕು ಮನಸ್ಥಿತಿಯ ಶಾಸಕನ ವಿರುದ್ಧ ಕ್ರಮ ಕೈಗೊಳ್ಳದೆ ಸಿಎಂ ಮೌನವಹಿಸಿರುವುದು ಏಕೆ? ತನ್ನದೇ ಮತಕ್ಷೇತ್ರದ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದರೂ ಶಾಸಕ ಅರವಿಂದ್ ಲಿಂಬಾವಳಿ ವಿರುದ್ಧ ಕ್ರಮ ಜರುಗಿಸದೆ ನಾಲಿಗೆ ಉದ್ಧವಾಗಲು ಬಿಟ್ಟ ಮುಖ್ಯಮಂತ್ರಿ ಬೊಮ್ಮಾಯಿ ಅವರು ಮಂಡಿಯೂರಿ ರಾಜ್ಯದ ಮಹಿಳೆಯರ ಕ್ಷಮೆ ಕೇಳಬೇಕು. ಇದನ್ನೂ ಓದಿ: ಮನವಿ ಸಲ್ಲಿಸಲು ಬಂದ ಮಹಿಳೆಗೆ ಗದರಿದ ಅರವಿಂದ ಲಿಂಬಾವಳಿ
ಬಿಜೆಪಿಗೆ ನಿಜಕ್ಕೂ ಮಹಿಳೆಯರ ಮೇಲೆ ಗೌರವ ಇದ್ದರೆ ಲಿಂಬಾವಳಿಯನ್ನು ವಜಾಗೊಳಿಸಿ ನಿರೂಪಿಸಲಿ. ಬಿಜೆಪಿ ರೇಪ್ ಆರೋಪಿ ರಮೇಶ್ ಜಾರಕಿಹೊಳಿಯನ್ನೇ ಸಮರ್ಥಿಸಿಕೊಂಡಿದೆ. ಮೈಸೂರಿನ ರೇಪ್ ಸಂತ್ರಸ್ತೆಯನ್ನು ದೂಷಿಸಿದೆ. ಗುಜರಾತ್‍ನಲ್ಲಿ ರೇಪಿಸ್ಟನನ್ನು ಸನ್ಮಾನಿಸಿದೆ. ಕಾಶ್ಮೀರದಲ್ಲಿ ರೇಪ್ ಆರೋಪಿಗಳ ಮೆರವಣಿಗೆಯನ್ನೇ ಮಾಡಿದೆ. ಇಂತಹ ಮಹಿಳಾವಿರೋಧಿ ಬಿಜೆಪಿಗೆ ಲಿಂಬಾವಳಿ ಮಾತು ಪ್ರಿಯವಾಗಬಹುದು, ಆದರೆ ರಾಜ್ಯದ ಮಹಿಳೆಯರಿಗೆ ಅದು ಅಸಹ್ಯವಾಗಿದೆ. ‘ಬೇಟಿ ಬಚಾವ್’ ಆಗಬೇಕಿರುವುದು ಬಿಜೆಪಿಯ ಗೂಂಡಾಗಳಿಂದ! ಮನುಶಾಸ್ತ್ರವನ್ನು ನಂಬುವ ಬಿಜೆಪಿಗೆ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಎಸಗುವುದು ಪರಂಪರೆಯಿಂದ ಬಂದ ಗುಣ. ಮಹಿಳೆಯನ್ನು ನಿಂದಿಸಿ, ದೌರ್ಜನ್ಯವೆಸಗಿದ ಅರವಿಂದ್ ಲಿಂಬಾವಳಿ ವಿರುದ್ಧ ಯಾವ ಕ್ರಮ ಕೈಗೊಳ್ಳುವಿರಿ ಬೊಮ್ಮಾಯಿ ಅವರೇ? ಅಥವಾ ಈ ದೌರ್ಜನ್ಯಕ್ಕೆ ನಿಮ್ಮ ಬೆಂಬಲವೂ ಇದೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.