ಮುಂಬೈ: ಮೀಸಲಾತಿ ರದ್ದುಪಡಿಸುವ ಕುರಿತು ಹೇಳಿಕೆ ನೀಡಿದ್ದ ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿಯವರ (Rahul Gandhi) ನಾಲಿಗೆಯನ್ನು ಕತ್ತರಿಸುವವರಿಗೆ 11 ಲಕ್ಷ ರೂ. ಬಹುಮಾನ ನೀಡುವುದಾಗಿ ಶಿವಸೇನಾ (Shiv Sena) ಶಾಸಕ ಸಂಜಯ್ ಗಾಯಕ್‍ವಾಡ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ರಾಹುಲ್ ಗಾಂಧಿಯವರು ವಿದೇಶದಲ್ಲಿದ್ದಾಗ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಮುಗಿಸಲು ಬಯಸುವುದಾಗಿ ಹೇಳಿದ್ದರು. ಇದು ಕಾಂಗ್ರೆಸ್‍ನ ನಿಜವಾದ ಮುಖವನ್ನು ತೆರೆದಿಟ್ಟಿದೆ ಎಂದು ಅವರು ಆರೋಪಿಸಿದ್ದಾರೆ. ಶಾಸಕರ ಈ ಹೇಳಿಕೆಯನ್ನು ಬೆಂಬಲಿಸುವುದಿಲ್ಲ ಎಂದು ಮಹಾರಾಷ್ಟ್ರ (Maharashtra) ಬಿಜೆಪಿ (BJP) ಅಧ್ಯಕ್ಷ ಚಂದ್ರಶೇಖರ್ ಬಾವಂಕುಲೆ ಹೇಳಿದ್ದಾರೆ.
Advertisement
ಇತ್ತೀಚೆಗಷ್ಟೇ ಅಮೆರಿಕ ಪ್ರವಾಸದ ವೇಳೆ ರಾಹುಲ್ ಗಾಂಧಿ ಮೀಸಲಾತಿಯನ್ನು ಕೊನೆಗೊಳಿಸುವ ಕುರಿತು ಮಾತನಾಡಿದ್ದರು. ಈ ಬಗ್ಗೆ ತೀವ್ರ ವಾಗ್ದಳಿ ನಡೆಸಿರುವ ಅವರು, ಇದು ಮೀಸಲಾತಿಯನ್ನು ಅಂತರ್ಗತವಾಗಿ ವಿರೋಧಿಸುವ ಮನಸ್ಥಿತಿಯನ್ನು ತೋರಿಸುತ್ತದೆ. ಕಾಂಗ್ರೆಸ್ ಚುನಾವಣೆಯಲ್ಲಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಸೋಲಿಸಿತ್ತು ಎಂದು ಹೇಳಿದ್ದಾರೆ.
Advertisement
Advertisement
ರಾಹುಲ್ ಗಾಂಧಿಯವರ ಹೇಳಿಕೆಗಳು ಜನರ ದೊಡ್ಡ ವಿಶ್ವಾಸಘಾತುಕವಾಗಿದೆ. ಮರಾಠರು, ಧಂಗರುಗಳು ಮತ್ತು ಒಬಿಸಿಗಳಂತಹ ಸಮುದಾಯಗಳು ಮೀಸಲಾತಿಗಾಗಿ ಹೋರಾಡುತ್ತಿವೆ. ಆದರೆ ಅವರು ಅದರ ಪ್ರಯೋಜನಗಳನ್ನು ಕೊನೆಗೊಳಿಸುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
Advertisement
ರಾಹುಲ್ ಗಾಂಧಿಯವರು ಸಂವಿಧಾನದ ಪುಸ್ತಕವನ್ನು ತೋರಿಸುತ್ತಿದ್ದರು. ಬಿಜೆಪಿ ಅದನ್ನು ಬದಲಾಯಿಸುತ್ತದೆ ಎಂದು ಸುಳ್ಳು ಕಥೆಯನ್ನು ಹರಡುತ್ತಿದ್ದರು. ಆದರೆ ಕಾಂಗ್ರೆಸ್ ದೇಶವನ್ನು 400 ವರ್ಷಗಳಷ್ಟು ಹಿಂದಕ್ಕೆ ಕೊಂಡೊಯ್ಯಲು ಯೋಜಿಸುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದರು.